ಹಾಸನ

ನುಡಿಸಿರಿ ಸಾಹಿತ್ಯ ಸಮ್ಮೇಳನ ಇಂದು

Published On :

ಕನ್ನಡಪ್ರಭವಾರ್ತೆ೤ ಅರಸೀಕೆರೆ೤ ಅ.5
ಪಟ್ಟಣದ ಪ್ರಸನ್ನ ಗಣಪತಿ ಆಸ್ಥಾನ ಮಂಟಪದಲ್ಲಿ ನಡೆಯುವ ಸಾಂಸ್ಕತಿಕ ಕಾರ್ಯಕ್ರಮಗಳಿಗೆ ದೊಡ್ಡ ಇತಿಹಾಸವೇ ಇದ್ದು ಶಾಸ್ತ್ರೀಯ ಸಂಗೀತಗಾರರು, ಚಲನಚಿತ್ರ ಸಂಗೀತ ನಿರ್ದೇಶಕರು, ಹಿನ್ನೆಲೆ ಗಾಯಕರು, ಅಸಂಖ್ಯಾತ ಕಲಾವಿದರ ಪ್ರತಿಭೆಯನ್ನು ಅನಾವರಣ ಮಾಡಲು ಅವಕಾಶ ನೀಡಿ ರಾಜ್ಯದಲ್ಲೇ ಹೆಸರಾಗಿರುವ ಅರಸೀಕೆರೆ ಗಣೇಶೋತ್ಸವಕ್ಕೆ ಮತ್ತೊಂದು ಹಿರಿಮೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಾಲೂಕು ನಿಕಟಪೂರ್ವ ಸಾಹಿತ್ಯ ಸಮ್ಮೇಳನಾಧ್ಯಕ್ಷ ಡಿ.ಎಸ್.ರಾಮಸ್ವಾಮಿ ತಿಳಿಸಿದ್ದಾರೆ.
 ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶ್ರೀ ಪ್ರಸನ್ನ ಗಣಪತಿ ಭಕ್ತ ಮಂಡಳಿ ಅ.6 ಭಾನುವಾರ ಸಂಜೆ ಪಟ್ಟಣದ ಬಸವರಾಜೇಂದ್ರ ಪೌಢಶಾಲಾ ಆವರಣದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಮೂಡಬಿದರೆಯ ಆಳ್ವಾಸ್ ಪ್ರತಿಷ್ಠಾನ ವತಿಯಿಂದ ಸಾಂಸ್ಕತಿಕ ವೈಭವ ಹೆಸರಿನಲ್ಲಿ ನುಡಿಸಿರಿ ಸಾಹಿತ್ಯ ಸಮ್ಮೇಳನ ಹಾಗೂ ವಿರಾಸತ್ ಸಂಗೀತ ನಾಟ್ಯ ಪ್ರದರ್ಶನ ಜರುಗಲಿದೆ ಎಂದರು.
 ಸಾಂಸ್ಕೃತಿಕ ವೈಭವ ಕಾರ್ಯಕ್ರಮದಲ್ಲಿ ಮೋಹಿನಿಯಾಟ್ಟಂ, ಆಂಧ್ರದ ಬಂಜಾರ ನೃತ್ಯ, ಬಡಗುತಿಟ್ಟು ಮತ್ತು ತೆಂಕುತಿಟ್ಟಿನ ಯಕ್ಷಗಾನ ಪ್ರಸಂಗಗಳು ಮಣಿಪುರಿಯ ಸ್ಟಿಕ್ ಡ್ಯಾನ್ಸ್  ದೋಲಚಲಂ, ಶ್ರೀಲಂಕಾದ ಕ್ಯಾಂಡಿಯನ್ ನೃತ್ಯ, ಕರ್ನಾಟಕದ  ಭರತನಾಟ್ಯ, ಕೇರಳದ ಒಪ್ಪಣಂ, ಒಡಿಸ್ಸಾದ ಕಥಕ್, ಸೇರಿದಂತೆ ನಾನಾ ಬಗೆಯ ಸಾಂಸ್ಕತಿಕ ಚಟುವಟಿಕೆಗಳು ನಡೆಯಲಿವೆ ಎಂದು ಹೇಳಿದರು.
 ಪಟ್ಟಣದ ನಾಗರಿಕರು ಇಂತಹ ಸಾಂಸ್ಕತಿಕ ಶ್ರೀಮಂತಿಕೆಯ ರಸಸ್ವಾದನೆಗೆ ಆಗಮಿಸಿ ಕಾರ್ಯಕ್ರಮವನ್ನು ಸಾಕ್ಷೀಕರಿಸಬೇಕೆಂದು ಮನವಿ ಮಾಡಿದರು. ಅರಸೀ ವೇದಿಕೆಯ ಶರ್ಮ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.