ಹಾಸನ

ಮಹಾಲಯ ರಾತ್ರಿ ಬ್ಯಾಂಕ್ನಲ್ಲಿ ಕಳವಿಗೆ ಯತ್ನ

Published On :

ಹೊಳೆನರಸೀಪುರ: ಪಟ್ಟಣದಲ್ಲಿ ನಗರ ಪೊಲೀಸ್ ಠಾಣೆ ಪಕ್ಕದಲ್ಲಿಯೇ ಇರುವ ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ನಲ್ಲಿ ಮಹಾಲಯ ಅಮಾವಾಸ್ಯೆಯ ಮಧ್ಯರಾತ್ರಿ ದರೋಡೆಗೆ ಯತ್ನ ನಡೆದಿರುವ ಬಗ್ಗೆ ವರದಿಯಾಗಿದೆ.
 ಇಲ್ಲಿನ ಪಿಎಲ್ಡಿ ಬ್ಯಾಂಕಿಗೆ ನುಗ್ಗಿರುವ ದರೋಡೆಕೋರರು, ಬ್ಯಾಂಕ್ ವ್ಯವಸ್ಥಾಪಕರ ಕೊಠಡಿಯಲ್ಲಿನ ಬೀರು, ಡ್ರಾಯರ್ಗಳನ್ನು ಮುರಿದಿದ್ದಾರೆ.
 ಅಲ್ಲದೆ, ಲೆಕ್ಕಾಧಿಕಾರಿಯ ಗೋದ್ರೇಜ್ ಬೀರುವನ್ನೂ ಒಡೆದಿದ್ದು,  ದಾಖಲಾತಿಗಳು, ಕ್ಯಾಷ್ ರಶೀದಿಗಳನ್ನೆಲ್ಲಾ ತಡಕಾಡಿ ಚೆಲ್ಲಾಪಿಲ್ಲಿ ಮಾಡಿದ್ದಾರೆ. ಬ್ಯಾಂಕಿನಲ್ಲಿ ನಗದು  ದೊರಕದ ಕಾರಣ ದರೋಡೆಕೋರರು ನಿರಾಶೆಯಿಂದ ಬ್ಯಾಂಕಿನ ದಾಖಲಾತಿಗಳನ್ನು ಎರಚಾಡಿ ಪರಾರಿಯಾಗಿದ್ದಾರೆ.
ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇದ್ದರೂ ಇಲ್ಲಿನ ಅಪರಾಧ ವಿಭಾಗದ ಪೊಲೀಸರು ಯಾವೊಂದು ಪ್ರಕರಣ ಪತ್ತೆ ಹಚ್ಚಿದ್ದಾರೆ ಎಂಬುದರ ವಿವರವೇ ಇಲ್ಲ ಎಂಬುದು ನಾಗರಿಕರ ದೂರಾಗಿದೆ.
 ಘಟನಾ ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೊಲೀಸ್ ಶ್ವಾನದಳ ಕರೆಸಲಿದ್ದು, ತನಿಖೆಯ ನಂತರವಷ್ಟೇ ವಿವರ ಲಭ್ಯವಾಗಲಿದೆ ಎಂದು ಬ್ಯಾಂಕ್ ವ್ಯವಸ್ಥಾಪಕ ಕೆ.ಕೃಷ್ಣ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.