ಹಾಸನ

ಯುವ ವಿಜ್ಞಾನಿಗಳಿಂದ ಹೊಸ ಸಂಶೋಧನೆ ನಡೆಯಲಿ: ಶಾಸಕ

Published On :

ಕ.ಪ್ರ.ವಾರ್ತೆ೤ ಚನ್ನರಾಯಪಟ್ಟಣ೤ ಅ.6
ಯುವ ವಿಜ್ಞಾನಿಗಳಿಂದ ಹೊಸ ಹೊಸ ಸಂಶೋಧನೆಗಳು ನಡೆಯಬೇಕಾಗಿದೆ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ಪಟ್ಟಣದ ಹೇಮಾವತಿ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ಹಾಗೂ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆಯೋಜಿಸಿದ್ದ ತಾಲೂಕು ಮಟ್ಟದ ವಿಜ್ಞಾನ ವಸ್ತುಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವೇದ ಕಾಲದಿಂದಲೂ ವಿಜ್ಞಾನದ ಆವಿಷ್ಕಾರ ನಡೆದಿದೆ. ದೇಶದಲ್ಲಿ ಸಿ.ವಿ. ರಾಮನ್, ಸರ್ ಎಂ. ವಿಶ್ವೇಶ್ವರಯ್ಯ, ಅಬ್ದುಲ್‌ಕಲಾಂ ರಂತಹ ಹಲವು ವಿಜ್ಞಾನಿಗಳನ್ನು ಪಡೆದ ನಾವೇ ಧನ್ಯರು ಎಂದು ನುಡಿದರು.
ತಾಲೂಕಿನ ವಿದ್ಯಾರ್ಥಿನಿ ಯೋಗಾಶ್ರೀ ದೆಹಲಿ ವಿಜ್ಞಾನ ವಸ್ತು ಪ್ರದರ್ಶನಕ್ಕೆ ತೆರಳಿರುವುದು ಸಂತಸ ತಂದಿದೆ. ವಿಜ್ಞಾನ ವಸ್ತು ಪ್ರದರ್ಶನಗಳು ವಿದ್ಯಾರ್ಥಿಗಳಲ್ಲಿ ಆಸಕ್ತಿ ಮೂಡಿಸುತ್ತದೆ ಹಾಗೂ ಬಾಂಧವ್ಯ ವೃದ್ಧಿಸುತ್ತದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪಾಂಡು ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಪಂ ಮಾಜಿ ಉಪಾಧ್ಯಕ್ಷ ಎಚ್.ಎಸ್. ವಿಜಯಕುಮಾರ್ ವಿಜ್ಞಾನ ವಸ್ತುಪ್ರದರ್ಶನ ವೀಕ್ಷಿಸಿದರು. ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ  ವಿಭಾಗದ ಮುಖ್ಯ ಶಿಕ್ಷಕ ಶಿವೇಗೌಡ  ಸ್ವಾಗತಿಸಿದರು. ಬಿಂದು ಪ್ರಾರ್ಥಿಸಿದರು. ವೇದಿಕೆಯಲ್ಲಿ ವಿಷಯ ಪರಿವೀಕ್ಷಕಿ  ಭಾಗ್ಯಮ್ಮ, ಬಿಆರ್‌ಸಿ ಕಾಳೇಗೌಡ, ಶಂಕರನಾರಾಯಣ್ ಇತರರು ಇದ್ದರು.
ತಾಲೂಕಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ತಯಾರಿಸಿದ ವಿಜ್ಞಾನ ವಸ್ತು ಪ್ರದರ್ಶನ ನಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.