ಹಾಸನ

ಉತ್ತಮ ಉದ್ದೇಶವಿದ್ದಲ್ಲಿ ಜನ ಮಾನಸದಲ್ಲಿ ಸ್ಥಾನ'

Published On :

ಅರಸೀಕೆರೆ: ಶರಣರ ಹಿರಿಮೆ ಮರಣದಲ್ಲಿ  ನೋಡು ಎಂಬ ನಾಣ್ಣುಡಿಯಂತೆ ತನ್ನ ಜೀವಿತ ಅವಧಿಯಲ್ಲಿ ಸಮಾಜದೊಂದಿಗೆ ಸ್ಪಂದಿಸಿ ಉತ್ತಮ ಉದ್ದೇಶಗಳನ್ನು ಹೊಂದಿದ್ದರೆ ಜನರ ಮನಸ್ಸಿನಲ್ಲಿ ಸ್ಥಾನ ಪಡೆಯಬಹುದು ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದರು.
ತಾಲೂಕಿನ ಕುಡುಕುಂದಿ ಗ್ರಾಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡರ ಮಾತೃಶ್ರೀ ದ್ಯಾಮಮ್ಮ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದ ಅವರು,  ಪುರಾಣಗಳ ಕಾಲದಿಂದಲೂ ತಾಯಿಗೆ ಪೂಜನೀಯ ಸ್ಥಾನ ನೀಡಲಾಗಿದ್ದು, ಅದಕ್ಕಾಗಿಯೇ ಮಾತೃ ದೇವೋಭವ ಆನಂತರದಲ್ಲಿ ಪಿತೃ ದೇವೋಭವ, ಆಚಾರ್ಯ ದೇವೋಭವ ಎಂದು ವೇದೋಪನಿಷತ್ತುಗಳಲ್ಲಿ ಹೇಳಿದೆ ಎಂದರು.
ಯಾವುದೇ ಋಣ ತೀರಿಸಬಹುದಾದರೂ 9 ತಿಂಗಳು ಹೆತ್ತು ಹೊತ್ತು ಸಾಕಿ ಸಲಹಿ ಉತ್ತಮ ಸಂಸ್ಕಾರ ನೀಡಿ ಸಮಾಜದ ಸತ್ಪ್ರಜೆಯಾಗಿ ಮಾಡಿದ ಕೀರ್ತಿ ಹೆತ್ತ ತಾಯಿಗೆ ಸಲ್ಲುತ್ತದೆ. ಆಕೆಯ ಋಣವನ್ನು ತೀರಿಸಲು ಸಾಧ್ಯವಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಮುಪ್ಪಿನ ಕಾಲದಲ್ಲಿ ತಮ್ಮ ತಂದೆ ತಾಯಂದಿರನ್ನು ಗೌರವದಿಂದ ಕಾಣಬೇಕೆಂದು ತಿಳಿಸಿದರು.
ಸಾನಿಧ್ಯ ವಹಿಸಿದ್ದ ನೊಣವಿನಕೆರೆ ಕಾಡುಸಿದ್ದೇಶ್ವರ  ಮಠದ ಕರಿವೃಷಭ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಯಾವುದೇ ವ್ಯಕ್ತಿ ಸಮಾಜದಲ್ಲಿ ಸ್ಥಾನಮಾನಗಳನ್ನು ಹೊಂದಿ ಮನ್ನಣೆ ಗಳಿಸಿದರೆ ಅದರ ಹಿಂದೆ ತಂದೆ ತಾಯಿ ನೀಡಿದ ಆಚಾರ-ವಿಚಾರ, ಉತ್ತಮ ನಡವಳಿಕೆಗಳು ಕಷ್ಟದಲ್ಲಿದ್ದವರಿಗೆ ಸಹಾಯ ಮಾಡುವ ಪ್ರವೃತ್ತಿಯ ಗುಣಗಳನ್ನು ಕಲಿಸಿಕೊಟ್ಟ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.
ಕೆ.ಆರ್.ನಗರ ಕಾಗಿನೆಲೆ ಗುರುಪೀಠದ ಶಿವಾನಂದಪುರಿ ಸ್ವಾಮೀಜಿ, ಬೆಂಚನಹಳ್ಳಿ ಮಠದ ಶಿವಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಮಾಜಿ ಸಚಿವ ಎಚ್.ಡಿ.ರೇವಣ್ಣ, ಸಕಲೇಶಪುರ ಶಾಸಕ ಎಚ್.ಕೆ.ಕುಮಾರಸ್ವಾಮಿ, ಮಾಜಿ ಶಾಸಕರಾದ ಎ.ಎಸ್.ಬಸವರಾಜ್, ಕರೀಗೌಡ, ಜಿಪಂ ಉಪಾಧ್ಯಕ್ಷ ಬಿಳಿಚೌಡಯ್ಯ, ಮಾಜಿ ಉಪಾಧ್ಯಕ್ಷೆ ಪ್ರೇಮಮ್ಮ, ತಾಪಂ ಅಧ್ಯಕ್ಷ ಹೆಚ್.ಟಿ.ಶಿವಮೂರ್ತಿ, ಪುರಸಭಾಧ್ಯಕ್ಷ ಮೋಹನ್ಕುಮಾರ್, ಉಪಾಧ್ಯಕ್ಷೆ ಭಾಗ್ಯಲತಾ ಮಂಜು, ಜೆ.ಡಿ.ಎಸ್.ಮುಖಂಡ ಮಂಜುನಾಥ್ ವೇದಿಕೆಯಲ್ಲಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.