ಅನಧಿಕೃತ ಪಟಾಕಿ ಮಾರಾಟ ನಿಷೇಧ
ಹಾಸನ: ದೀಪಾವಳಿ ಹಬ್ಬದಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಪರವಾನಗಿ ಹಾಗೂ ಮುಂಜಾಗ್ರತಾ ಕ್ರಮದಂತೆ ಪಟಾಕಿಗಳನ್ನು ನಗರಸಭಾ ವ್ಯಾಪ್ತಿಯ ವಸ್ತುಪ್ರದರ್ಶನ ಮೈದಾನದಲ್ಲಿ ಪರವಾನಗಿ ಪಡೆದು ನಿಯಮಾನುಸಾರ ಮಾರಾಟ ಮಾಡಬೇಕು. ನಿಗದಿತ ಸ್ಥಳದಲ್ಲಲ್ಲದೆ ಬೇರೆಡೆ ಪರವಾನಗಿ ಇಲ್ಲದೆ ಅನಧಿಕೃತವಾಗಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ. ಪರವಾನಗಿ ಇಲ್ಲದೆ ಯಾವುದೇ ಸ್ಥಳದಲ್ಲಿ ಪಟಾಕಿ ಮಾರಾಟ ಮತ್ತು ದಾಸ್ತಾನು ಕಂಡುಬಂದಲ್ಲಿ ತಕ್ಷಣವೇ ವಶಪಡಿಸಿ ಕೊಳ್ಳಲಾಗುವುದಲ್ಲದೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಹಾಸನ ನಗರ ಹೊರತುಪಡಿಸಿ ಉಪ ವಿಭಾಗಾಧಿಕಾರಿ ಮತ್ತು ತಹಸೀಲ್ದಾರರು ತಮ್ಮ ಕೇಂದ್ರಸ್ಥಾನ ವ್ಯಾಪ್ತಿ ಪ್ರದೇಶದಲ್ಲಿ ತಾತ್ಕಾಲಿಕ ಪಟಾಕಿ ಮಾರಾಟ ಪರವಾನಗಿ ನೀಡುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

