ಇಂದು - ನಾಳೆ ನಾನಾ ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥಯಾತ್ರೆ
ಅರಸೀಕೆರೆ: ಸಂವಿಧಾನ ಬದ್ದವಾಗಿ ಮಹಿಳೆಯರು ಮತ್ತು ಮಕ್ಕಳಿಗಿರುವ ಕಾನೂನುಗಳ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸಲು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾನೂನು ಸಾಕ್ಷರತಾ ರಥ ಯಾತ್ರೆಯನ್ನು ನಡೆಸಲಾಗುತ್ತಿದೆ ಎಂದು ಜೆಎಂಎಫ್ಸಿ ಹಿರಿಯ ನ್ಯಾಯಾಧೀಶೆ ಸರಸ್ವತಿ ವಿ.ಕೋಸಂದರ್ ತಿಳಿಸಿದರು. ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘ ಹಾಗೂ ತಾಲೂಕಿನ ನಾನಾ ಸರ್ಕಾರಿ ಇಲಾಖೆಗಳ ಸಹಯೋಗದಲ್ಲಿ ತಾಲೂಕಿನಲ್ಲಿ ನಡೆಸಲಾಗುತ್ತಿರುವ ಕಾನೂನು ಸಾಕ್ಷರತಾ ರಥಯಾತ್ರೆಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅ. 8 ರಂದು ಬೆಳಗ್ಗೆ ಕೋಳಗುಂದ, ನೇರ್ಲೆಗೆ ಹಾಗೂ ಜಾವಗಲ್ ಗ್ರಾಮದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಅ.9 ರಂದು ಬುಧವಾರ ಬೆಳಿಗ್ಗೆ ಜಾಜೂರು ಮತ್ತು ಹಿರಿಯೂರು ಗ್ರಾಮದಲ್ಲಿ ಕಾನೂನು ಅರಿವು ಕಾರ್ಯಕ್ರಮಗಳು ನಡೆದ ನಂತರ ಮಧ್ಯಾಹ್ನ ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಜನತಾ ನ್ಯಾಯಾಲಯವನ್ನು ನಡೆಸಲಾಗುತ್ತದೆ ಎಂದು ಹೇಳಿದರು.
ಪ್ರಧಾನ ನ್ಯಾಯಾಧೀಶ ದೇವಾನಂದ ಮತ್ತು ನ್ಯಾ. ಪ್ರಕಾಶ್ ಚನ್ನಪ್ಪ ಕುರುಬೆಟ್, ವಕೀಲರ ಸಂಘದ ಅಧ್ಯಕ್ಷ ಎಂ.ಆರ್.ಸರ್ವೇಶ್, ತಾಪಂ ಕಾರ್ಯ ನಿರ್ವಹಣಾಧಿಕಾರಿ ಟಿ.ಎನ್.ಮೂರ್ತಿ, ವಕೀಲರಾದ ವಿಜಯಕುಮಾರ್, ಅಶೋಕ್ಕುಮಾರ್, ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

