ಇಂದಿನಿಂದ ಕಾನೂನು ಸಾಕ್ಷರತಾ ರಥ
ಹಾಸನ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸರ್ಕಾರಿ ಕಾನೂನು ಕಾಲೇಜು ಹಾಗೂ ನಾನಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕಾನೂನು ಸಾಕ್ಷರತಾ ರಥ ಮತ್ತು ಜನತಾ ನ್ಯಾಯಾಲಯದ ಕಾರ್ಯಕ್ರಮಗಳು ಅಕ್ಟೋಬರ್ 10ರಿಂದ ಅಕ್ಟೋಬರ್ 12ರವರೆಗೆ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಅಕ್ಟೋಬರ್ 10ರಂದು ಬೆಳಗ್ಗೆ 9ಕ್ಕೆ ನಗರದ ಚಿಪ್ಪಿನಕಟ್ಟೆ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಜೆ.ಎಸ್.ಸೋಮಶೇಖರ್ ನೆರವೇರಿಸುವರು.
ಇಂದು ಜೂಡೋ ಚಾಂಪಿಯನ್ಶಿಪ್
ಹೊಳೆನರಸೀಪುರ: ತಾಲೂಕಿನ ಮಾವಿನಕೆರೆಯ ಜವಾಹರ್ ನವೋದಯ ವಿದ್ಯಾಲಯದಲ್ಲಿ ಅ.10ರಂದು 35ನೇ ರಾಜ್ಯ ಜೂಡೋ ಚಾಂಪಿಯನ್ಶಿಪ್ ಸ್ಪರ್ಧೆಗಳು ನಡೆಯಲಿವೆ ಎಂದು ವಿದ್ಯಾಲಯದ ಪ್ರಾಂಶುಪಾಲೆ ಮಾಧುರಿ ಉದಯಶಂಕರ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಸ್ಪರ್ಧೆ ಉದ್ಘಾಟಿಸುವರು. ಕರ್ನಾಟಕ ಜೋಡೋ ಅಸೋಸಿಯೇಷನ್ ಅಧ್ಯಕ್ಷ ಅಜಯ್ಕುಮಾರ್ ಸರನಾಯಕ್, ಎಎಸ್ಪಿ ವಿನಾಯಕ ಪಾಟೀಲ್, ವಾಣಿಜ್ಯ ತೆರಿಗೆ ಅಸಿಸ್ಟೆಂಟ್ ಕಮೀಷನರ್ ರವಿಚಂದರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಅ.11ರಂದು ನಡೆಯಲಿರುವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಶಾಸಕ ಎಚ್.ಡಿ.ರೇವಣ್ಣ ವಿಜೇತ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

