ಹಾಸನ

ಸಕಲೇಶಪುರ ತಾ. ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿಗೆ ಮನವಿ

Published On :

ಹಾಸನ: ಸಕಲೇಶಪುರ ತಾಲೂಕು ಮತ್ತು ಅಲ್ಲಿನ ಬೆಳೆಗಾರರ ಸಮಸ್ಯೆಗಳನ್ನು ಶೀಘ್ರವೇ ಪರಿಹರಿಸುವಂತೆ ಒತ್ತಾಯಿಸಿ ಹಾಸನ ಜಿಲ್ಲಾ ಬೆಳೆಗಾರರ ಸಂಘ ಮುಖ್ಯಮಂತ್ರಿ  ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿತು.
ಹಾಸನಾಂಬ ಕಲಾ ಭವನದಲ್ಲಿ ಬೆಳೆಗಾರರ ಸಂಘದ ಅಧ್ಯಕ್ಷ ಮುಜಾಹಿದ್ ಆಲಂ ನೇತೃತ್ವದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಸಂಘದ ಸದಸ್ಯರು, ಅತೀಯಾದ  ಮಳೆಯಿಂದ ಉಂಟಾಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ಒದಗಿಸಿಕೊಡಬೇಕು. ಸರ್ಕಾರಿ ಕೃಷಿ ಒತ್ತುವರಿ  ಜಮೀನನ್ನು ತೆರವುಗೊಳಿಸುವುದನ್ನು  ನಿಲ್ಲಿಸಬೇಕು, ಪಹಣಿಯಲ್ಲಿ ಬೆಳೆ ಕಾಲಂ  ನಮೂದಿಸುವುದು, ಮಲೆನಾಡಿನ ಜನರ ಪ್ರಮುಖ ಸಮಸ್ಯೆಗಳಲ್ಲೊಂದಾದ   ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಿಕೊಡ ಬೇಕು. ಏಲಕ್ಕಿ ಬೆಳೆಗಾರರ ಸಾಲ ಸಂಪೂರ್ಣ ಮನ್ನಾ ಮಾಡಿ, ಆರ್ಥಿಕ ಸಂಕಷ್ಟದಿಂದ ಪಾರು ಮಾಡಬೇಕು, ಸ್ವಾಭಾವಿಕವಾಗಿ ಬೆಳೆದ ಮರಗಳ ಹಕ್ಕನ್ನು ಬೆಳೆಗಾರರಿಗೆ ನೀಡಬೇಕು, ಕೋಮಾರ್ಸ್ ಸಂಸ್ಥೆ ಪುನಶ್ಚೇತನಕ್ಕೆ   ಹಣ ಬಿಡುಗಡೆ ಮಾಡಬೇಕು ಹಾಗೂ ಮಲೆನಾಡಿನ ರಸ್ತೆಗಳನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಮನವಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಗಳು ಸಂಬಂಧಪಟ್ಟ ಇಲಾಖೆಗಳಿಂದ  ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು. ಬೆಳೆಗಾರರ ಸಂಘದ ಕಾರ್ಯದರ್ಶಿ ಮಹೇಶ್, ಎಚ್.ಟಿ.ಕುಮಾರ್, ಪ್ರಕಾಶ್  ನಿಯೋಗದಲ್ಲಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.