ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶ ಇಂದು
ಅರಸೀಕೆರೆ: ತಾಲೂಕಿನಲ್ಲಿ ಬಿಜೆಪಿ ಸದೃಢವಾಗಿ ಸಂಘಟಿಸುವ ಸಲುವಾಗಿ ಬೂತ್ ಮಟ್ಟದ ಕಾರ್ಯಕರ್ತರ ಸಮಾವೇಶವನ್ನು ಅ.11 ರಂದು ಪಟ್ಟಣದಲ್ಲಿ ನಡೆಸಲಾಗುತ್ತಿದೆ ಎಂದು ಬಿಜೆಪಿ ತಾಲೂಕು ವಕ್ತಾರ ವೈ.ಕೆ.ದೇವರಾಜು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಂದಿನ ಲೋಕಸಭಾ ಚುನಾವಣೆಯನ್ನು ಸಮರ್ಥವಾಗಿ ಎದುರಿಸಲು ಸಕಲ ಸಿದ್ದತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು. ಪಟ್ಟಣದ ಶಾಂತವೀರಮ್ಮ ಪರಮೇಶ್ವರಪ್ಪ ಕಲ್ಯಾಣ ಮಂಟಪದಲ್ಲಿ ಅ.11 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಕಾರ್ಯಕರ್ತರ ಸಮಾವೇಶವನ್ನು ತಾಲೂಕು ಬಿಜೆಪಿ ಅಧ್ಯಕ್ಷ ಎಚ್.ಎಸ್.ರಮೇಶ್ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದ್ದು, ಸಮಾವೇಶವನ್ನು ಜಿಲ್ಲಾಧ್ಯಕ್ಷ ರೇಣುಕುಮಾರ್ ಉದ್ಘಾಟಿಸುವರು ಎಂದರು.
ವಿಶೇಷ ಆಹ್ವಾನಿತರಾಗಿ ರಾಜ್ಯ ಮುಖಂಡ ಅಶ್ವಥ್ನಾರಾಯಣ್, ಪ್ರಾಣೇಶ್ ಆಗಮಿಸವರು ಎಂದು ಹೇಳಿದರು. ಬಿಜೆಪಿ ನಗರಾಧ್ಯಕ್ಷ ಕೆ.ವಿ.ಹಿರಿಯಣ್ಣಯ್ಯ ಮಾತನಾಡಿದರು. ಬೋರನಕೊಪ್ಪಲು ಬಿ.ಎಲ್.ರವಿಕುಮಾರ್, ಜಿ.ವಿ.ಟಿ. ಬಸವರಾಜು, ಮನೋಜ್ಕುಮಾರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

