ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಚನ್ನರಾಯಪಟ್ಟಣ: ಪಟ್ಟಣದ ಮಿನಿ ವಿಧಾನ ಸೌಧಕ್ಕೆ ಆಗಮಿಸುವ ಜನತೆಗೆ 2 ಲಕ್ಷ ವೆಚ್ಚದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ತಿಳಿಸಿದರು.
ಪಟ್ಟಣದ ಮಿನಿ ವಿಧಾನ ಸೌಧ ಆವರಣದಲ್ಲಿ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ ಕಂದಾಯ ಇಲಾಖೆಯಲ್ಲಿನ ಸಮಸ್ಯೆಗಳನ್ನು ಹೊತ್ತು ತರುವ ಜನತೆ ಕುಳಿತುಕೊಳ್ಳುವುದು, ಕುಡಿಯುವ ನೀರು ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ತಮ್ಮ ಶಾಸಕರ ಅನುದಾನದಲ್ಲಿ ಎರಡು ಲಕ್ಷ ರು.ಗಳನ್ನು ನೀಡಲಾಗುವುದು ಎಂದು ಹೇಳಿದರು.
ಪಟ್ಟಣದಲ್ಲಿ 5 ಶೌಚಾಲಯಗಳನ್ನು ನಿರ್ಮಿಸುತ್ತಿದ್ದು, ಮಿನಿ ವಿಧಾನ ಸೌಧ ಆವರಣದಲ್ಲಿರುವ ಶೌಚಾಲಯ ಸೌಲಭ್ಯಕ್ಕೆ ಅನುವು ಮಾಡಿಕೊಡಲು ತಿಳಿಸಲಾಗಿದ್ದು, ಜನತೆಗೆ ಆರೋಗ್ಯ ಮತ್ತು ಶುಚಿತ್ವ ಕಾಪಾಡಿಕೊಂಡು ಹೋಗುವ ಕಾರ್ಯಕ್ರಮಗಳಿಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ನುಡಿದರು.
ತಹಸೀಲ್ದಾರ್ ಡಾ.ನಾಗರಾಜು ಮಾತನಾಡಿ ತಾಲೂಕಿನಲ್ಲಿ ಪಹಣಿ ತಿದ್ದುಪಡಿ, ಪೌತಿ ಖಾತೆ ಬದಲಾವಣೆ ಸೇರಿದಂತೆ ಹಲವು ಅರ್ಜಿಗಳು ಬರುತ್ತಿದ್ದು, ಈ ನಿಟ್ಟಿನಲ್ಲಿ ಅದಾಲತ್ ನಡೆಸಿ ಬಗೆಹರಿಸಲಾಗುವುದು ಎಂದು ತಿಳಿಸಿದರು.
ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪೌತಿ ಖಾತೆ, ಪಹಣಿ ತಿದ್ದುಪಡಿ ಅದಾಲತ್ಗಳನ್ನು ಹಮ್ಮಿಕೊಂಡು ಜನತೆಯ ಮನೆ ಬಾಗಿಲಿಗೆ ಕಂದಾಯ ಇಲಾಖೆಯನ್ನು ಕರೆದೊಯ್ಯುವುದು ತಮ್ಮ ಕೆಲಸವಾಗಿದೆ ಎಂದರು.
ಸಂಧ್ಯಾ ಸುರಕ್ಷಾ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿದ ಯೋಜನೆಗಳ ಫಲಾನುಭವಿಗಳಾಗಲು ಅರ್ಜಿ ಸಲ್ಲಿಸಿದ್ದು, ಅವುಗಳನ್ನು ಹೋಬಳಿ ಮಟ್ಟದಲ್ಲಿಯೇ ಗುರುತಿಸಿ ನೈಜತೆಯಿದ್ದರೆ ಅಲ್ಲಿಯೇ ಮಂಜೂರಾತಿ ಪತ್ರ ನೀಡಲಾಗುವುದು ಎಂದು ತಿಳಿಸಿದರು. ಪುರಸಭಾಧ್ಯಕ್ಷ ಮಂಜಣ್ಣ, ಪರಿಸರ ಪ್ರೇಮಿ ಚನಂ ಅಶೋಕ್, ಸಹಾಯಕ ಅರಣ್ಯಾಧಿಕಾರಿ ಧರ್ಮಪ್ಪ ಇನ್ನೂ ಮೊದಲಾವರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

