ಹಾಸನ

ಇಂದು ಗಾಂಧಿ ಅಧ್ಯಯನ ಕೇಂದ್ರ ಉದ್ಘಾಟನೆ

Published On :

ಹಾಸನ: ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ, ಅರಕಲಗೂಡು ವರದರಾಜಲು ಕಾಂತಮ್ಮ ಮಹಿಳಾ ಕಾಲೇಜು, ಗಾಂಧಿ ಸ್ಮಾರಕ ನಿಧಿ, ಬೆಂಗಳೂರು ಮತ್ತು ಕರ್ನಾಟಕ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಅ.12ರಂದು ಬೆಳಿಗ್ಗೆ 10.30ಕ್ಕೆ ನಗರದ ಎ.ವಿ.ಕೆ.ಮಹಿಳಾ ಕಾಲೇಜಿನ ಹಾರನಹಳ್ಳಿ ರಾಮಸ್ವಾಮಿ ಸುಶೀಲಮ್ಮ ಸಭಾಂಗಣ, ಕಾಲೇಜು ಆವರಣದಲ್ಲಿ ಯಶೋದರಮ್ಮ ದಾಸಪ್ಪ ಸ್ಮರಣೆ ಗಾಂಧಿ ವಿಚಾರ ಪ್ರಚಾರ ಗಾಂಧಿ ಅಧ್ಯಯನ ಕೇಂದ್ರ ಉದ್ಘಾಟನೆ ನಡೆಯಲಿದೆ. ಬೆಂಗಳೂರಿನ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ.ಹೊ.ಶ್ರೀನಿವಾಸಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಮಲೆನಾಡು ತಾಂತ್ರಿಕ ಶಿಕ್ಷಣ ಸಮಿತಿ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಅಧ್ಯಕ್ಷತೆ ವಹಿಸುವರು. ಬೆಂಗಳೂರು ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ.ಕೃಷ್ಣ ವಿಶೇಷ ಉಪನ್ಯಾಸ ನೀಡುವರು. ರಾಜ್ಯ ಮದ್ಯಪಾನ ಸಂಯಮ ಮಂಡಳಿ ಕಾರ್ಯದರ್ಶಿ ಎಚ್.ಬಿ.ದಿನೇಶ್ಗಾಂಧಿ ಅಧ್ಯಯನ ಕೇಂದ್ರದ ಉದ್ಘಾಟನೆ ಮಾಡುವರು. ಎವಿಕೆ ಮಹಿಳಾ ಕಾಲೇಜಿನ ಉಪಾಧ್ಯಕ್ಷ ಬಿ.ಆರ್.ಗುರುದೇವ್ ಗಣ್ಯರು ಕಂಡ ಗಾಂಧಿ ಕೃತಿ ಬಿಡುಗಡೆ ಮಾಡುವರು. ಬೆಂಗಳೂರಿನ ವಾರ್ತಾ ಇಲಾಖೆ ಜಂಟಿ ನಿರ್ದೇಶಕಿ ಡಾ.ಬಿ.ಆರ್.ಮಮತ ಸುರಭಿ ಸಂಚಿಕೆ ಬಿಡುಗಡೆ ಮಾಡುವರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.