ಹಾಸನ

'ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಪಾತ್ರ ಬಹು ಮುಖ್ಯ'

Published On :

ಹಾಸನ: ಕುಟುಂಬ ನಿರ್ವಹಣೆಯಲ್ಲಿ ಮಹಿಳೆ ಪಾತ್ರ ಮುಖ್ಯವಾದದು ಎಂದು ಮಿಷನ್ ಆಸ್ಪತ್ರೆಯ ವೈದ್ಯಾಧಿಕಾರಿ ಬಿ.ಎ. ವಿಶಾಲಾಕ್ಷಿ ತಿಳಿಸಿದರು.
 ನಗರದ ಬೀರನಹಳ್ಳಿ ಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ನಡೆದ ನಾಗರಿಕ  ಪ್ರಜ್ಞೆ ಮತ್ತು ಸಮಾಲೋಚನಾ ಸಭೆ ಉದ್ಘಾಟಿಸಿ ಮಾತನಾಡಿದರು.
 ಮಹಿಳೆಯರು ಬರೀ ತಮ್ಮ ಕೆಲಸದ ಒತ್ತಡದಲ್ಲಿ ಬದುಕು ಸಾಗಿಸುತ್ತಾ ತಮ್ಮ  ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದರಿಂದ ಹಲವಾರು ರೋಗಗಳಿಗೆ ತುತ್ತಾಗುತ್ತಿದ್ದಾರೆ.
 ಆದ್ದರಿಂದ ಕಾಲಕಾಲಕ್ಕೆ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಸೂಚನೆಗಳನ್ನು  ಪಾಲಿಸುವ ಮೂಲಕ ಆರೋಗ್ಯ ಕಾಪಾಡಿಕೊಳ್ಳುವಂತೆ ಸಲಹೆ ನೀಡಿದರು.
 ಮುಖ್ಯ ಅತಿಥಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ದಯಾಶೀಲ ಗಾಂಧೀಜಿಯವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
 ವಕೀಲರಾದ ವೇದಾವತಿ ಮಾತನಾಡಿ, ಸಂಸ್ಥೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಮುಖ್ಯವಾಗಿ ಸ್ವಸಹಾಯ ಸಂಘಗಳ ನಿರ್ವಹಣೆ ಮಾಡಿ ತಮ್ಮ ಕುಟುಂಬಗಳ ಆರ್ಥಿಕ ಅಭಿವೃದ್ಧಿಯೊಂದಿಗೆ ಸರ್ವತೋ ಮುಖ ಅಭಿವೃದ್ಧಿ ಸಾಧಿಸುವಂತೆ ಕರೆ ನೀಡಿದರು.
 ಸತ್ಯವಂಗಲ ಗ್ರಾಪಂ ಅಧ್ಯಕ್ಷ ದರ್ಶನಬಾಬು ಅಧ್ಯಕ್ಷತೆ ವಹಿಸಿದ್ದರು. ರಾಘವೇಂದ್ರ ಕಾಲೋನಿ ಸದಸ್ಯ ಯೋಗೀಶ್,  ಯೋಜನೆಯ ತಾಲೂಕು ಯೋಜನಾಧಿಕಾರಿ ಲೀಲಾವತಿ  ಇತರರು ಇದ್ದರು. ಕೆ.ಆರ್.ಪುರಂ ವಲಯ ಮೇಲ್ವಿಚಾರಕ ಸತೀಶ್ಆಚಾರ್ಯ ಸ್ವಾಗತಿಸಿದರು. ಸತೀಶ್ ಅವರು ವಂದಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.