ಹಾಸನ

ಹಲ್ಮಿಡಿ ಪ್ರತಿಕೃತಿ: ಅನುದಾನಕ್ಕೆ ಸಿಎಂಗೆ ಮನವಿ

Published On :

ಹಾಸನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಮಾದರಿಯನ್ನು ಸ್ಥಾಪಿಸಲು ಮುಖ್ಯಮಂತ್ರಿಗಳ ನಿಧಿಯಿಂದ ಅನುದಾನ ನೀಡುವಂತೆ ಕೋರಿ  ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಜನಾರ್ದನ್ ಮನವಿ ಸಲ್ಲಿಸಿದ್ದಾರೆ. ಹಾಸನಾಂಬ ಕಲಾಕ್ಷೇತ್ರದಲ್ಲಿ ಇತ್ತೀಚೆಗೆ ಜನತಾ ದರ್ಶನ  ವೇಳೆ ಸಿಎಂ ಅವರನ್ನು  ಭೇಟಿ ಮಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ಜನಾರ್ದನ್, ಶಾಂತವೇರಿ  ಗೋಪಾಲಗೌಡರ ಜೀವನ ಕುರಿತ ಪುಸ್ತಕವನ್ನು ಸಿದ್ದರಾಮಯ್ಯನವರಿಗೆ ನೀಡಿದರು. ನಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದ ಆವರಣದಲ್ಲಿ ಹಲ್ಮಿಡಿಯಲ್ಲಿರುವ ಕನ್ನಡದ ಪ್ರಥಮ ಶಿಲಾ ಶಾಸನದ ಪ್ರತಿಕೃತಿಯನ್ನು  ಪ್ರತಿಷ್ಠಾಪಿಸುವ ಯೋಜನೆಗಾಗಿ 10 ಲಕ್ಷ ರು ನೀಡುವಂತೆ  ಸಿಎಂಗೆ ಮನವಿ  ಸಲ್ಲಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.