ಹಾಸನ

'ಖಿನ್ನತೆಗೀಡಾದವರಲ್ಲಿ ಶೇ.20 ರಷ್ಟು ಮಂದಿ ಆತ್ಮಹತ್ಯೆಗೆ ಶರಣು'

Published On :

ಚನ್ನರಾಯಪಟ್ಟಣ: ದೇಶದಲ್ಲಿ ಮಾನಸಿಕ ಖಿನ್ನತೆಗೊಳಗಾದವರಲ್ಲಿ ಶೇ.20 ರಷ್ಟು ಮಂದಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ಡಾ.ನಾಗೇಶ್ ತಿಳಿಸಿದರು.
 ತಾಲೂಕು ಕಾನೂನು ಸೇವಾ ಸಮತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ ಸಣ್ಣ ಪುಟ್ಟ ಕಾರಣಗಳನ್ನೇ ಮುಂದಿಟ್ಟುಕೊಂಡು ಅದನ್ನು ಹೆಚ್ಚುಗೆ ಚಿಂತಿಸಿ ಮಾನಸಿಕ ಖಿನ್ನತೆಗೊಳಗಾಗಿ ಅದರಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ ಎಂದು ನುಡಿದರು.
 ಮನಸ್ಸನ್ನು ಸ್ಥಿರತೆಯತ್ತಾ ಕೊಂಡೊಯ್ಯದಿದ್ದರೆ ಅವರಿಗೆ ಅದರ ಬಗ್ಗೆ ಚಿಂತಿಸಿ ಅವರು ಮಾನಸಿಕ ಖಿನ್ನತೆಗೊಳಗಾಗುತ್ತಾರೆ. ಇತ್ತೀಚಿನ ದಿನಗಳಲ್ಲಿ ಅವಿಭಕ್ತ ಕುಟುಂಭಗಳು ಅವಿಭಾಜ್ಯ ಕುಟುಂಭಗಳಾಗುತ್ತಿರುವ ಕಾರಣ ಸಂಸಾರದ ಎಲ್ಲಾ ಜವಾಬ್ದಾರಿ ಆ ದಂಪತಿ ಮೇಲೆ ಬೀಳುವುದರಿಂದ ಒತ್ತಡದಿಂದ ಹಾಗೂ ಹಲವು ಸಮಸ್ಯೆಗಳಿಗೆ ಸಿಲುಕಿ ಮಾನಸಿಕ ಖಿನ್ನತೆಗೊಳಗಾಗುತ್ತಿದ್ದಾರೆ ಎಂದು ನುಡಿದರು.
 ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಟಿ ದೇವರಾಜು, ತಾಲೂಕು ವಕಿಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಕಾರ್ಯದರ್ಶಿ ಲಿಂಗರಾಜು,  ಡಾ.ಎರ್.ಧನಶೇಖರ್, ನ್ಯಾಯಾಲಯದ ಭಗವಾನ್ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.