'ಪ್ರಸ್ತುತ ಅಪಘಾತ ಹೆಚ್ಚಳದಿಂದ ರಕ್ತದ ಬೇಡಿಕೆಯೂ ಹೆಚ್ಚು'
ಹಾಸನ: ಪ್ರಸ್ತುತ ಹೆಚ್ಚುತ್ತಿರುವ ವಾಹನಗಳ ಸಂಖ್ಯೆಯಿಂದ ಅಪಘಾತಗಳೂ ಹೆಚ್ಚಾಗುತ್ತಿರುವುದರಿಂದ ರಕ್ತದ ಬೇಡಿಕೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಎಲ್.ವಿ. ಪಾಲಿಟೆಕ್ನಿಕ್ ಪ್ರಾಂಶುಪಾಲ ನಟರಾಜ್ ತಿಳಿಸಿದರು. ನಗರದ ರಾಜೀವ್ ಪಾಲಿಟೆಕ್ನಿಕ್, ರಾಜೀವ್ ಇನ್ಸ್ಟಿಟ್ಯೂಟ್ ಆಫ್ ಪ್ಯಾರಾ ಮೆಡಿಕಲ್ ಸೈನ್ಸ್ ಹಾಗೂ ಜೀವರಕ್ಷ ರಕ್ತನಿಧಿಯ ಆಶ್ರಯದಲ್ಲಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು. ರಕ್ತದಾನದಿಂದ ಹಲವು ಜನರ ಜೀವ ಉಳಿಯುತ್ತಿದೆ. ರಕ್ತವನ್ನು ಬೇರೆ ಯಾವ ವಸ್ತುವಿನಿಂದಲೂ ಬದಲಿಸಲು ಸಾಧ್ಯವಿಲ್ಲದಿರುವುದರಿಂದ ರಕ್ತಹೀನತೆಯಾದಾಗ ರಕ್ತವನ್ನು ಬೇರೊಬ್ಬರಿಂದ ಪಡೆದು ಅವರಿಗೆ ನೀಡುವುದೊಂದೇ ಮಾರ್ಗ. ಆದ್ದರಿಂದ ಪ್ರತಿ ಮನುಷ್ಯನೂ ರಕ್ತದಾನದೆಡೆಗೆ ಸ್ವಯಂಪ್ರೇರಿತರಾಗಿ ಮುಂದಾಗಬೇಕು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಎಂ.ಆರ್. ಶಂಕರೇಗೌಡ ಮಾತನಾಡಿ, ಯುವ ಪೀಳಿಗೆ ರಕ್ತದಾನ ಮಹತ್ವವನ್ನು ಅರಿತು, ತಾವೂ ರಕ್ತದಾನ ಮಾಡುವುದರ ಜತೆಗೆ ತಮ್ಮ ಜೊತೆ ಇರುವವರನ್ನೂ ರಕ್ತದಾನಕ್ಕೆ ಪ್ರೇರೇಪಿಸುವ ಅವಶ್ಯಕತೆ ಇದೆ ಎಂದು ತಿಳಿಸಿದರು.
ಗರುಡನಗಿರಿ ಗ್ರಾಮದಲ್ಲಿ ಎನ್ಎಸ್ಎಸ್ ಶಿಬಿರ
ಕಣಕಟ್ಟೆ (ಅರಸೀಕೆರೆ ತಾ.): ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವನೆ ಬೆಳೆಯಲು ಹಾಗೂ ಸಾರ್ವಜನಿಕರಲ್ಲಿ ಸಾಮಾಜಿಕ ಅರಿವು ಮೂಡಿಸಲು ಸಹಕಾರಿಯಾಗಿದೆ ಎಂದು ತಾಲೂಕು ಪಂಚಾಯ್ತಿ ಸದಸ್ಯ ಚಂದ್ರಶೇಖರ್ ತಿಳಿಸಿದರು. ಅರಸೀಕೆರೆ ತಾಲೂಕು ಗರುಡನಗಿರಿ ಗ್ರಾಮದಲ್ಲಿ ಕಣಕಟ್ಟೆಯ ವಿದ್ಯಾರಣ್ಯ ಪದವಿ ಪೂರ್ವ ಕಾಲೇಜಿನ ವತಿಯಿಂದ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆರೋಗ್ಯವಂತ ಭಾರತಕ್ಕಾಗಿ ಉತ್ತಮ ಯೋಜನೆ, ನೆಲ, ಜಲ ಸಂರಕ್ಷಣೆ ಮತ್ತು ವಿದ್ಯುತ್ ಉಳಿತಾಯ ಇವುಗಳ ಬಗ್ಗೆ ಅರಿವು ಮೂಡಿಸಬೇಕೆಂದು ಹೇಳಿದರು. ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಿಸುವುದರಿಂದ ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡಬಹುದು ಎಂದು ತಿಳಿಸಿದರು. ವಿದ್ಯಾರಣ್ಯ ವಿದ್ಯಾ ಸಂಸ್ಥೆಯ ಗೌರವ ಕಾರ್ಯದರ್ಶಿ ನಾಗೇಶ್ರಾವ್ ಮಾತನಾಡಿ, ಗಾಂಧೀಜಿಯವರ ಶ್ರಮವೇವ ಜಯತೇ ಎಂಬ ವಾಣಿಯಂತೆ ಪ್ರತಿಯೊಬ್ಬರೂ ತಮ್ಮ ಕೆಲಸವನ್ನು ತಾವೇ ಮಾಡಿಕೊಳ್ಳಬೇಕು ಮತ್ತು ಗ್ರಾಮಗಳಲ್ಲಿ ಹಲವಾರು ಜಾತಿ ಮತಗಳ ಜನರು ವಾಸಿಸುತ್ತಿದ್ದು, ನಾವೆಲ್ಲರೂ ಒಂದೇ ಎಂಬ ಮನೋಭಾವನೆಯನ್ನು ಬೆಳೆಸಬೇಕೆಂದರು. ವಿದ್ಯಾರ್ಥಿಗಳು ಶಿಕ್ಷಣ ಸೌಲಭ್ಯದ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

