ಆಹಾರ ಭದ್ರತಾ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮ
ಅರಕಲಗೂಡು: ಉತ್ಪನ್ನಕರ ಮತ್ತು ಆರೋಗ್ಯಕರ ಜೀವನಕ್ಕಾಗಿ ಸಾಕಷ್ಟು ಆಹಾರವನ್ನು ವರ್ಷವಿಡೀ ಎಲ್ಲಾ ಜನತೆಗೆ ಸಿಗುವಂತೆ ಮಾಡುವುದೇ ಆಹಾರ ಭದ್ರತೆ ಕಾಯ್ದೆಯಾಗಿದೆ ಎಂದು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವೈ.ಎಸ್.ಮಲ್ಲೇಗೌಡ ತಿಳಿಸಿದರು.
ಕೇಂದ್ರ ಕ್ಷೇತ್ರ ಪ್ರಚಾರ ನಿರ್ದೇಶನಾಲಯ, ಆಹಾರ ಇಲಾಖೆ, ವಾರ್ತಾ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಯಲಗತವಳ್ಳಿ ಗ್ರಾಮ ಪಂಚಾಯ್ತಿ ಆಶ್ರಯದಲ್ಲಿ ಏರ್ಪಡಿಸಿದ್ದ ಆಹಾರ ಭದ್ರತಾ ಕಾಯ್ದೆ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಹಾರ ಭದ್ರತಾ ಕಾಯ್ದೆ ಅನ್ವಯ ಸರ್ಕಾರ ನಿಗದಿಪಡಿಸಿರುವ ನಿರ್ದಿಷ್ಟ ಮಾನದಂಡಗಳ ಮೂಲಕ ಅರ್ಹರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ನಿಗದಿಪಡಿಸಿದ ದರದಲ್ಲಿ ಆಹಾರ ಧಾನ್ಯಗಳನ್ನು ಪಡೆದುಕೊಳ್ಳಲು ನೀಡಿರುವುದರಿಂದ ಅರ್ಹ ಕುಟುಂಬದವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾಮ ಪಂಚಾಯ್ತಿ ಸದಸ್ಯ ಕುಮಾರ್ ಮಾತನಾಡಿ, ಸರ್ಕಾರ ಆರ್ಥಿಕವಾಗಿ ಹಿಂದುಳಿದ ಕುಟುಂಬದವರಿಗೆ ಅನೇಕ ಉಪಯುಕ್ತ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಸೌಲಭ್ಯಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ವಿವರಿಸಿದರು. ಗ್ರಾಮ ಪಂಚಾಯ್ತಿ ಸದಸ್ಯೆ ಕಮಲಮ್ಮ ಮಾತನಾಡಿ, ಕ್ಷೇತ್ರ ಪ್ರಚಾರ ನಿರ್ದೇಶನಾಲಯವು, ಸರ್ಕಾರದ ಯೋಜನೆಗಳ ಅರಿವು ಮೂಡಿಸುತ್ತಿದ್ದು, ಜನಸಾಮಾನ್ಯರು ಯೋಜನೆ ತಿಳಿದುಕೊಳ್ಳಲು ಮುಂದಾಗಬೇಕು ಎಂದು ತಿಳಿಸಿದರು.
ಯಲಗತವಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಾವಿತ್ರಿ ಉದ್ಘಾಟಿಸಿದರು. ಗ್ರಾಮ ಪಂಚಾಯ್ತಿ ಸದಸ್ಯ ಕುಮಾರ್, ಮುದ್ದೇಗೌಡ, ಯೋಗೇಶ್, ಲಕ್ಷ್ಮಮ್ಮ, ಉಪಾಧ್ಯಕ್ಷ ಕುಮಾರಸ್ವಾಮಿ ಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

