ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಹಕ್ಕುಗಳ ವೇದಿಕೆ
ಹಾಸನ: ಮಾನವ ಹಕ್ಕುಗಳು ವ್ಯಕ್ತಿಯ ನಿಸರ್ಗದತ್ತ ಹಕ್ಕುಗಳಾಗಿದ್ದು ಅವನ್ನು ಯಾರೂ ಬೇರ್ಪಡಿಸಲಾಗದು ಎಂದು ಸರ್ಕಾರಿ ಕಾನೂನು ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಪದ್ಮಲತಾ ಅಭಿಪ್ರಾಯಪಟ್ಟರು.
ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಮಾನವ ಹಕ್ಕುಗಳ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಗೌರವಯುತವಾಗಿ, ಸ್ವತಂತ್ರವಾಗಿ ಬದುಕಲು ಮಾನವ ಹಕ್ಕುಗಳು ಅತ್ಯಂತ ಅವಶ್ಯಕವಾಗಿವೆ. ಮಾನವ ಹಕ್ಕುಗಳ ಉಲ್ಲಂಘನೆ ಶಿಕ್ಷಾರ್ಹ ಅಪರಾಧವಾಗಿದೆ. ಮಾನವ ಹಕ್ಕುಗಳ ಸಂರಕ್ಷಣೆಗಾಗಿ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗಗಳು ಅವಿರತ ಶ್ರಮಿಸುತ್ತಿವೆ. ಅದಕ್ಕಾಗಿ ಹಲವಾರು ಸಶಕ್ತ ಕಾನೂನುಗಳನ್ನು ರೂಪಿಸಲಾಗಿದೆ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಪ್ರೊ. ಅಂತೋನಿ ಮೇರಿ ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆಯ ಬಗೆಗೆ ವಿರೋಧ ಹಾಗೂ ಮಾನವ ಹಕ್ಕುಗಳ ಸಂರಕ್ಷಣೆಯ ಬಗೆಗೆ ಜಾಗೃತಿ ವಿಶ್ವದಾದ್ಯಂತ ಇಂದು ಹೆಚ್ಚು ಚರ್ಚೆಗೆ ಒಳಗಾಗಿರುವ ವಿಷಯಗಳಾಗಿವೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಕಾಲೇಜಿನ ಪ್ರಾಂಶುಪಾಲ ಪ್ರೊ. ರೂಪರಾಜಚಂದನ್ ಮಾತನಾಡಿ, ಅದ್ಭುತ ವಿಚಾರಶಕ್ತಿಯನ್ನುಳ್ಳ ಮಾನವ ಅದನ್ನು ಮರೆತು ಇಂದು ಮೃಗೀಯವಾದ ನಡವಳಿಕೆಯನ್ನು ಹೊಂದಿದವನಾಗಿದ್ದಾನೆ. ಇದಕ್ಕೆ ಇಂದಿನ ಆಧುನಿಕ ಜೀವನ ಶೈಲಿ ಹಾಗೂ ಸಮಾಜದ ಮೌಢ್ಯತೆಗಳು ಕಾರಣವಾಗಿವೆ ಎಂದು ತಿಳಿಸಿದರು.
ಶ್ವೇತಾ ದೇಸಾಯಿ ಪ್ರಾರ್ಥಿಸಿದರು, ರಾಜ್ಯಶಾಸ್ತ್ರ ಪ್ರಾಧ್ಯಾಪಕಿ ಅಂತೋನಿ ಮೇರಿ ಸ್ವಾಗತಿಸಿದರು ಉಪನ್ಯಾಸಕ ಎಚ್.ಡಿ.ಲೋಕೇಶ್ ವಂದಿಸಿದರು. ಪುನೀತ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

