ಹಾಸನ

ಅಕ್ರಮ ನಲ್ಲಿ ಸಂಪರ್ಕ 'ಸಕ್ರಮ' -ಪುರಸಭೆ ಸಾಮಾನ್ಯ ಸಭೆ ನಿರ್ಣಯ

Published On :

ಕ.ಪ್ರ. ವಾರ್ತೆ ಸಕಲೇಶಪುರ ಅ.14
ಸಾರ್ವಜನಿಕ ಸ್ಥಳಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ಹಾಗೂ ಅಕ್ರಮ ನಲ್ಲಿ ಸಂಪರ್ಕವನ್ನು ಸಕ್ರಮ ಗೊಳಿಸಲು ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
  ಪುರಸಭೆ ಸಭಾಂಗಣದಲ್ಲಿ ಪುರಸಭೆ ಅಧ್ಯಕ್ಷ ಎಸ್.ಎಸ್. ಸತೀಶ್ ಅಧ್ಯಕ್ಷತೆಯಲ್ಲಿ, ಶಾಸಕ ಎಚ್.ಕೆ.ಕುಮಾರಸ್ವಾಮಿ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಸಿಸಿ ಕ್ಯಾಮೆರಾಗಳ ಅಗತ್ಯತೆ ಬಗ್ಗೆ ಚರ್ಚಿಸಿ ಸಾರ್ವಜನಿಕ ಸ್ಥಳಗಳಲ್ಲಿ 2 ಕ್ಯಾಮೆರಾ ಅಳವಡಿಸಲು ನಿರ್ಧರಿಸಲಾಯಿತು.
  ಸ್ಥಳೀಯ ಸಂಸ್ಥೆ ಚುನಾವಣೆ ನಂತರ ಮೊದಲ ಬಾರಿಗೆ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಚರ್ಚಿಸಿದ ಸದಸ್ಯರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯಂತೆ ಸಾರ್ವಜನಿಕ ಸ್ಥಳಗಳಲ್ಲಿ 2 ಸಿಸಿ ಕ್ಯಾಮೆರಾ ಅಳವಡಿಸುವ ನಿರ್ಣಯಕ್ಕೆ ಹಾಗೂ ಪಟ್ಟಣ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಲ್ಲಿ ಸಂಪರ್ಕ ಹೊಂದಿದವರಿಗೆ 2400 ರು. ಶುಲ್ಕ ಹಾಗೂ 100 ರು. ದಂಡ ವಿಧಿಸಿ ಸಕ್ರಮ ಮಾಡಿಕೊಡಲು ಒಪ್ಪಿಗೆ ನೀಡಿದರು.
  2013ನೇ ಸಾಲಿನ ಸಾಮಾನ್ಯ  ನಿಧಿಯ ಜಮಾ ಖರ್ಚಿನ ಬಗ್ಗೆ ಪುರಸಭೆ ಸಿಬ್ಬಂದಿ ನೀಡಿದ ಮಾಹಿತಿಯಲ್ಲಿ ಕೆಲವೊಂದು ತಪ್ಪುಗಳು ಕಂಡು ಬಂದಿದ್ದು ಸದಸ್ಯರ ಆಕ್ರೋಶಕ್ಕೆ ಕಾರಣವಾಯಿತು. ತಪ್ಪಾಗಿದೆ ಮುಂದೆ ತಪ್ಪು ನಡೆಯದಂತೆ ನಿಗಾ ವಹಿಸುವುದಾಗಿ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿ ತಿಳಿಸಿದರು.
ಕಸ ವಿಲೇವಾರಿ ಕಸದ ಬುಟ್ಟಿ ಖರೀದಿಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಪುರಸಭಾ ಸದಸ್ಯ ಸಂತೋಷ್ಕುಮಾರ್ ಜೈನ್ ಒತ್ತಾಯಿಸಿದರು. ಮುಖ್ಯಾಧಿಕಾರಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.