ಆಶಾ ಕಾರ್ಯಕರ್ತೆಯರಿಗೆ ರು. 1000 ಮಾಸಿಕ ಸಹಾಯಧನ: ಸಂಘದ ಜಿಲ್ಲಾ ಘಟಕ ಸ್ವಾಗತ
ಕನ್ನಡಪ್ರಭ ವಾರ್ತೆ ಹಾಸನ ಅ.14
ರಾಜ್ಯ ಬಜೆಟ್ನಲ್ಲಿ ಘೋಷಿಸಿದಂತೆ ಆಶಾ ಕಾರ್ಯಕರ್ತೆಯರಿಗೆ ಮಾಸಿಕ 1000 ರು. ಸಹಾಯಧನ ಮತ್ತು 200 ರು. ಪ್ರಯಾಣ ಭತ್ಯೆ ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಘಟಕ ಸ್ವಾಗತಿಸಿದೆ.
ರಾಜ್ಯ ಸರ್ಕಾರದ 2013-2014ರ ಆಯವ್ಯಯದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹಧನ ಜತೆಗೆ ರಾಜ್ಯ ಸರ್ಕಾರದಿಂದ ಹೆಚ್ಚುವರಿ ಪ್ರೋತ್ಸಾಹಧನ ಘೋಷಣೆ ಮಾಡಿದ್ದರು. ಇದರಂತೆ ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ಆಶಾಗಳಿಗೆ ರಾಜ್ಯ ಸರ್ಕಾರದಿಂದ ಮಾಸಿಕ 1000 ರು. ಸಹಾಯಧನ ನೀಡಲು ನಿರ್ಧರಿಸಿರುವುದನ್ನು ಸ್ವಾಗತಿಸುವುದಾಗಿ ಜಿಲ್ಲಾಧ್ಯಕ್ಷೆ ಜಾನಕಿ, ಜಿಲ್ಲಾ ಸಲಹೆಗಾರ ಎಂ.ಎನ್.ಶ್ರೀರಾಮ್ ಅವರು ತಿಳಿಸಿದ್ದಾರೆ.
ಮಾಸಿಕ ನಿಗದಿತ ಗೌರವಧನ ವೇತನ ನಿಗದಿ ಮಾಡಬೇಕೆಂದು ಮತ್ತು ಕಾರ್ಯಕರ್ತೆಯರನ್ನು ಕಾಯಂ ಮಾಡಿಕೊಂಡು ಇಲಾಖೆಯಲ್ಲಿ ನೌಕರರನ್ನಾಗಿ ಪರಿಗಣಿಬೇಕೆಂದು ಒತ್ತಾಯಿಸಿ ರಾಜ್ಯ ಮಟ್ಟದ ಬೃಹತ್ ಸಮಾವೇಶ ಕಳೆದ ಆಗಸ್ಟ್ 26 ರಂದು ಬೆಂಗಳೂರಿನ ಟೌನ್ಹಾಲ್ನಲ್ಲಿ ಸಂಘಟಿಸಲಾಗಿತ್ತು.
ನಾಡಿನ ಗಣ್ಯರೊಡಗೂಡಿ ಈ ಸಮಾವೇಶದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳ ಕಾರ್ಯಕರ್ತೆಯರ ಪ್ರತಿನಿಧಿಗಳು ಭಾಗಿಯಾಗಿದ್ದರು ಎಂದು ಸ್ಮರಿಸಿದ್ದಾರೆ.
ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರೋಗ್ಯ ಸಚಿವ ಯು.ಟಿ. ಖಾದರ್, ಇಲಾಖಾ ಅಧಿಕಾರಿಗಳಿಗೆ, ಸಮಸ್ತ ಆಶಾ ಕಾರ್ಯಕರ್ತೆಯರ ಪರವಾಗಿ ಸಂಘ ವಂದನೆ ತಿಳಿಸುತ್ತದೆ ಎಂದು ಹೇಳಿದ್ದಾರೆ.
ಕೇಂದ್ರ ಇತ್ತೀಚಿಗೆ 200 ರು. ಪ್ರಯಾಣ ಭತ್ಯೆ ಕಡಿತ ಮಾಡಿರುವುದನ್ನು ರಾಜ್ಯದಿಂದ ನೀಡಲು ಸರ್ಕಾರದ ಆದೇಶ ಹೊರಡಿಸುವುದಾಗಿ ಸಹ ಈ ಸಂದರ್ಭದಲ್ಲಿ ಆರೋಗ್ಯ ಕಾರ್ಯದರ್ಶಿ ಮದನಗೋಪಾಲ್ ಭರವಸೆ ನೀಡಿದ್ದಾರೆ. ಅವರಿಗೂ ಸಂಘವು ವಂದನೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

