ಹಾಸನ

ದೇವೇಗೌಡ ಕಾಲೇಜಲ್ಲಿ ರೆಡ್‌ಕ್ರಾಸ್ ಘಟಕ

Published On :

ಹೊಳೆನರಸೀಪುರ: ರೆಡ್‌ಕ್ರಾಸ್ ಸಂಸ್ಥೆಯು ಆರೋಗ್ಯ ಸಂಬಂಧಿ ವಿಷಯಗಳ ಕುರಿತಂತೆ ಸ್ವಯಂಪ್ರೇರಿತ ಸೇವೆಯಲ್ಲಿ ನಿರತವಾಗಿದ್ದು, ಪ್ರಾಕೃತಿಕ ವಿಕೋಪ, ಬೆಂಕಿ ಮತ್ತು ನೀರಿನ ಆಕಸ್ಮಿಕಗಳಂತಹ ಅವಘಡಗಳು ಸಂಭವಿಸಿದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ಸೇವೆ ಮಾಡುವ ಅವಕಾಶವನ್ನು ಈ ಸಂಸ್ಥೆ ಕಲ್ಪಿಸಿರುವುದರ ಜೊತೆಗೆ ಸೇವೆಯ ಕುರಿತ ಜ್ಞಾನ ನೀಡುತ್ತದೆ ಎಂದು ಜಿಲ್ಲಾ ರೆಡ್‌ಕ್ರಾಸ್ ಅಧ್ಯಕ್ಷ ಎಚ್.ಪಿ.ಮೋಹನ್ ತಿಳಿಸಿದರು.
ತಾಲೂಕಿನ ಪಡುವಲಹಿಪ್ಪೆಯ ಎಚ್.ಡಿ.ದೇವೇಗೌಡ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ನೂತನವಾಗಿ   ಆರಂಭಿಸಲಾದ ಯುವ ರೆಡ್‌ಕ್ರಾಸ್ ಘಟಕ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ವಿದ್ಯಾರ್ಥಿಗಳೂ ರೆಡ್‌ಕ್ರಾಸ್ ಸದಸ್ಯತ್ವ ಪಡೆಯುವ ಮೂಲಕ ಆರೋಗ್ಯ ಸೇವೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬಹುದಾಗಿದೆ ಎಂದರು.
 ರೆಡ್‌ಕ್ರಾಸ್ ಸ್ಥಾಪನೆ, ಧ್ಯೇಯ, ಉದ್ದೇಶ ಕುರಿತು ತಿಳಿಸಿದ ನೀಡಿದ ಅವರು ಸಮಾಜ ಸೇವೆಗೆ ರೆಡ್‌ಕ್ರಾಸ್ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ತಮ್ಮನ್ನ ತೊಡಗಿಸಿಕೊಳ್ಳುವ ಮೂಲಕ ಸಮಾಜಕ್ಕೆ ತಮ್ಮನ್ನು ಅರ್ಪಿಸಿಕೊಳ್ಳುವಂತೆ ಸಲಹೆ ನೀಡಿದರು. ಹಾಸನ ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಅನುಗನಾಳ್ ಕೃಷ್ಣಮೂರ್ತಿ ಮಾತನಾಡಿ, ರೆಡ್‌ಕ್ರಾಸ್ ಹುಟ್ಟಿರುವುದು ಜನರ ಆರೋಗ್ಯ ಸೇವೆಗಾಗಿ, ಈ ಸಂಸ್ಥೆಯಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕವಾಗಿ ರಕ್ತದಾನ, ರಕ್ತಪರೀಕ್ಷೆ, ನೇತ್ರದಾನ ಇತರ ಸೇವೆಗಳನ್ನು ಸಮಾಜಕ್ಕೆ ನೀಡಬಹುದಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ  ಡಾ.ಜಿ.ಡಿ. ನಾರಾಯಣ ಮಾತನಾಡಿ, ವಿದ್ಯಾರ್ಥಿಗಳಿಗೆ ಆರೋಗ್ಯ ಸಂಬಂಧಿ ವಿಷಯಗಳ ಕುರಿತು ಪ್ರಥಮ ಚಿಕಿತ್ಸೆ ಮಾಹಿತಿಯ ಅರಿವು ಇರಬೇಕೆಂದರು. ವಿದ್ಯಾರ್ಥಿಗಳಲ್ಲಿ ಪ್ರಾಥಮಿಕ ಚಿಕಿತ್ಸೆ ಅರಿವು ಇದ್ದರೆ ಆಕಸ್ಮಿಕ ಸಂಕಷ್ಟಗಳಿಂದ ಪಾರಾಗಬಹುದು ಎಂದರು.
ತಾಲೂಕು ರೆಡ್‌ಕ್ರಾಸ್ ಅಧ್ಯಕ್ಷ ಡಾ.ಕೆ.ಸಿ.ಮರಿಯಪ್ಪ, ಸಮಾಜ ಸೇವಕ ಬಾಲಕೃಷ್ಣ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ವೆಂಕಟೇಶ್ ಇದ್ದರು. ಇದೇ ಸಂದರ್ಭದಲ್ಲಿ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಸಂಚಾಲಕ  ಬಿ.ಎಚ್.ಶ್ರೀನಿವಾಸ್ ವಿದ್ಯಾರ್ಥಿಗಳಿಗೆ ರೆಡ್‌ಕ್ರಾಸ್ ಪ್ರತಿಜ್ಞಾವಿಧಿ ಬೋಧಿಸಿದರು.  ಇತಿಹಾಸ ಉಪನ್ಯಾಸಕಿ ನಾಸಿಮಾ ಬಾನು ಸ್ವಾಗತಿಸಿದರು. ವಿದ್ಯಾಶ್ರೀ ಪ್ರಾರ್ಥಿಸಿದರು, ಸಮಾಜಶಾಸ್ತ್ರ ಉಪನ್ಯಾಸಕ ಪ್ರವೀಣ್ ನಿರೂಪಿಸಿದರು. ಅರ್ಥಶಾಸ್ತ್ರ ಉಪನ್ಯಾಸಕ ಉದಯ್‌ಕುಮಾರ್ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.