ಹಾಸನ

'ಕಾಲುಬಾಯಿ'ಗೆ ತಕ್ಷಣ ಚಿಕಿತ್ಸೆ ಕೊಡಿಸಿ

Published On :

ಅರಸೀಕೆರೆ: ಜಾನುವಾರುಗಳನ್ನು ಮಹಾಮಾರಿಯಂತೆ ಕಾಡುತ್ತಿರುವ ಕಾಲುಬಾಯಿ ರೋಗದ ಲಕ್ಷಣಗಳು ಕಂಡುಬಂದ ಹಸುವನ್ನು ಬೇರ್ಪಡಿಸಿ ಪ್ರತ್ಯೇಕವಾಗಿ ಇಡಬೇಕು ಹಾಗೂ ತಕ್ಷಣವೇ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕೆಂದು ಹಿರಿಯ ಪಶು ವೈದ್ಯಕೀಯ ಪರೀಕ್ಷಕ ಅಶೋಕ್ ಕುಮಾರ್ ತಿಳಿಸಿದರು.
ರೋಗ ಲಕ್ಷಣ: ತಾಲೂಕಿನ ತಳಲೂರು ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಪಶು ಸಂಗೋಪನಾ ಇಲಾಖೆ ವತಿಯಿಂದ ಜಾನುವಾರುಗಳಿಗೆ ಉಚಿತ ಆರೋಗ್ಯ ತಪಾಸಣೆ ಮತ್ತು ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಅತಿಯಾದ ಜ್ವರ, ಬಾಯಿಯಲ್ಲಿ ನೀರುಗುಳ್ಳೆ ಜೊಲ್ಲು ಸುರಿಸುವುದು ಕಾಲು ಕುಂಟುವುದು ಈ ರೋಗದ ಲಕ್ಷಣಗಳಾಗಿವೆ. ಈ ರೋಗವು ರೋಗಗ್ರಸ್ತ ಪ್ರಾಣಿಗಳಿಂದ ನೇರ ಸಂಪರ್ಕ ಗಾಳಿ ಮುಖಾಂತರ ಇತರೆ ಜಾನುವಾರುಗಳಿಗೂ ಸೋಂಕು ತಗಲುತ್ತದೆ ಎಂದರು.
ಜಾನುವಾರು ವಿಮೆ ಮಾಡಿಸಿ: ರೋಗ ಲಕ್ಷಣಗಳು ಗೋಚರಿಸಿದ ಕೂಡಲೇ ರೋಗಗ್ರಸ್ತ ಜಾನುವಾರುಗಳನ್ನು ಬೇರ್ಪಡಿಸುವುದು ಕೊಟ್ಟಿಗೆಯನ್ನು ಸ್ವಚ್ಛಗೊಳಿಸುವುದರ ಮೂಲಕ 6 ತಿಂಗಳಿಗೊಮ್ಮೆ ವರ್ಷಕ್ಕೆ ಎರಡು ಬಾರಿ ತಪ್ಪದೆ ಲಸಿಕೆ ಹಾಕಿಸಿ ಎಂದು ತಿಳಿಸಿದರು. ಅಲ್ಲದೆ ಪ್ರತಿಯೊಬ್ಬ ರೈತನು ಜಾನುವಾರುಗಳಿಗೆ ವಿಮೆ ಮಾಡಿಸಬೇಕೆಂದು ಸಲಹೆ ನೀಡಿದರು. ಗ್ರಾಪಂ ಅಧ್ಯಕ್ಷೆ ಮಂಜುಳ ಮಲ್ಲೇಶ ಅಧ್ಯಕ್ಷತೆ ವಹಿಸಿ, ಜಾನುವಾರುಗಳಿಗೆ ಲಸಿಕೆ ಹಾಕಿಸಿ ರೋಗ ಬರದಂತೆ ತಡೆಯಿರಿ ಆ ಮೂಲಕ ಗೋ ಸಂಪತ್ತನ್ನು ರಕ್ಷಿಸಿ ಎಂದು ವಿನಂತಿಸಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಚನ್ನಪ್ಪಗೌಡ ಇದ್ದರು. ಯೋಜನೆಯ ಹೈನುಗಾರಿಕ ಮೇಲ್ವಿಚಾರಕ ಎಂ. ಶ್ರೀನಿವಾಸ ನಿರೂಪಿಸಿದರು. ವಲಯ ಮೇಲ್ವಿಚಾರಕಿ ನಮ್ರತ ಸ್ವಾಗತಿಸಿದರು. ಸೇವಾ ಪ್ರತಿನಿಧಿ ವಂದಿಸಿದರು. ಗ್ರಾಮದ ಮುಖಂಡರಾದ ಚಂದ್ರಶೇಖರ, ರಾಜಶೇಖರಪ್ಪ, ದಿನೇಶ್ ಸೇರಿದಂತೆ ಗ್ರಾಮಸ್ಥರು ಇದ್ದರು. ಸುಮಾರು 60 ಕುಟುಂಬದಿಂದ 260 ರಾಸುಗಳಿಗೆ ತಪಾಸಣೆ ನಡೆಸಿ ಲಸಿಕೆ ಹಾಕಲಾಯಿತು.

ಬೈಕ್ ಡಿಕ್ಕಿ: ಮಹಿಳೆ ಸಾವು
ಅರಕಲಗೂಡು:
ಬೈಕ್ ಪಾದಚಾರಿಗೆ ಡಿಕ್ಕಿ ಮಾಡಿದ ಪರಿಣಾಮ ಮಹಿಳೆ ಸಾವನ್ನಪ್ಪಿರುವ ಘಟನೆ ತಾಲೂಕಿನ ಹೊನ್ನವಳ್ಳಿಯ ಬಳಿ ಇತ್ತೀಚೆಗೆ ನಡೆದಿದೆ. ತಾಲೂಕಿನ ಬೂದನೂರು ಗ್ರಾಮದ ಪುಟ್ಟಮ್ಮ (65) ಸಾವನ್ನಪ್ಪಿದ ದುರ್ದೈವಿ.
ಪುಟ್ಟಮ್ಮ  ಪುತ್ರಿಯ ಮನೆಯಾದ ತಾಲೂಕಿನ ಹೊನ್ನವಳ್ಳಿ ಗ್ರಾಮಕ್ಕೆ ಹೋಗಿದ್ದು, ವಾಪಸ್ ತಮ್ಮ ಗ್ರಾಮಕ್ಕೆ ಹೋಗಲು ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಹೊಳೆನರಸೀಪುರ ಕಡೆಯಿಂದ ಬಂದ ಬೈಕ್ ಸವಾರನ ನಿರ್ಲಕ್ಷ್ಯತೆಯಿಂದ ಡಿಕ್ಕಿ ಮಾಡಿದ ಪರಿಣಾಮ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಅರಕಲಗೂಡು ಮತ್ತು ಹಾಸನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಪುಟ್ಟಮ್ಮ ಮೃತಪಟ್ಟಿದ್ದಾರೆ.
ಸಂಬಂಧಿ ರಮೇಶ್ ಅರಕಲಗೂಡು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿ ಆರೋಪಿ ಪತ್ತೆಗಾಗಿ ಕ್ರಮ ಕೈಗೊಂಡಿದ್ದಾರೆ.

ಗೃಹಿಣಿ ನಾಪತ್ತೆ
ಚನ್ನರಾಯಪಟ್ಟಣ:
ತಾಲೂಕಿನ ಅಡಗೂರು ಚೋಳೆನಹಳ್ಳಿ ಗ್ರಾಮದ ಶಿವಕುಮಾರ್ರ್‌ವರ ಪತ್ನಿ ಅಭಿಲಾಷ (21) ಅವರು ಟೈಲರ್ ಅಂಗಡಿ ಹೋಗಿ ಬರುತ್ತೇನೆಂದು ಮನೆಯಲ್ಲಿ ಹೇಳಿ ಹೋದವರು ಇದುವರೆವಿಗೂ ವಾಪಸ್ ್ಛಬಾರದೆ ಕಾಣೆಯಾಗಿದ್ದಾರೆ. ಚಹರೆ, 5ಅಡಿ ಎತ್ತರ, ತೆಳುವಾದ ಶರೀದ, ಗೋಧಿ ಮೈಬಣ್ಣ, ಕೋಲುಮಖ, ಮನೆಯಿಂದ ಹೋಗುವಾಗ ಪಾಚಿ ಬಣ್ಣದ ಚೂಡಿದಾರ ಧರಿಸಿದ್ದರು. ಪತಿ ಶಿವಕುಮಾರ್ ಚನ್ನರಾಯಪಟ್ಟಣ ನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.