ಸತತ ಹೋರಾಟದ ನಂತರ ನಿವೃತ್ತ ಯೋಧರಿಗೆ ಭೂಮಿ
ಸಕಲೇಶಪುರ: ಸತತ 40 ವರ್ಷಗಳ ಹೋರಾಟದ ಫಲವಾಗಿ ತಮ್ಮ ಪಾಲಿನ ಭೂಮಿ ಪಡೆದುಕೊಳ್ಳುವಲ್ಲಿ ತಾಲೂಕಿನ ನಿವೃತ್ತ ಯೋಧರು ಯಶಸ್ವಿಯಾಗಿದ್ದಾರೆ. ನಿವೃತ್ತ ಯೋಧರ ಹೋರಾಟಕ್ಕೆ ಮಣಿದ ತಾಲೂಕು ಆಡಳಿತ ಇತ್ತೀಚೆಗೆ ಸ್ಥಳೀಯ ನಾಲ್ವರು ಯೋಧರಿಗೆ ತಾಲೂಕಿನ ಹಾನುಬಾಳು ಹೋಬಳಿಯ ಅಗ್ನಿ ಗ್ರಾಮದಲ್ಲಿ ಜಮೀನು ಮಂಜೂರು ಮಾಡಿ ಸಾಗುವಳಿ ಪತ್ರ ನೀಡಿದೆ. ನಿವೃತ್ತ ಯೋಧರಿಗೆ ಭೂಮಿ ನೀಡುವ ಉದ್ದೇಶದಿಂದ 1972ರ ಮೇನಲ್ಲಿ ಅಂದಿನ ಮೈಸೂರು ಸರ್ಕಾರ ಹಾಸನ ಜಿಲ್ಲೆಯಲ್ಲಿ 9051 ಎಕರೆ ಭೂಮಿಯನ್ನು ನಿಗದಿಪಡಿಸಿತ್ತು. ಆದರೂ ಸಹ ಅಧಿಕಾರಿಗಳ ನಿರ್ಲಕ್ಷ್ಯ ದಿಂದ ಸರ್ಕಾರದ ಈ ಯೋಜನೆ ಜಾರಿಗೆ ಬಂದಿರಲಿಲ್ಲ. ಹೀಗಾಗಿ ನಿವೃತ್ತ ಯೋಧರು ಅಂದಿನಿಂದ ಭೂಮಿ ಮಂಜೂರಾತಿ ಹೋರಾಟ ಮಾಡುತ್ತಿದ್ದರೂ, ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದ ಬೇಸತ್ತ ನಿವೃತ್ತ ಯೋಧರ ಸಂಘದ ರಾಷ್ಟ್ರೀಯ ಉಪಾಧ್ಯಾಕ್ಷ ಟಿ.ಪಿ. ಕೃಷ್ಣಪ್ಪ ಜಮೀನು ನೀಡು ವಂತೆ 2011ರಲ್ಲಿ ನ್ಯಾಯಾಲಯದ ಮೊರೆ ಹೋದರು. ಆದೇಶ ಉಲ್ಲಂಘನೆ: 2012ರಲ್ಲಿ ತೀರ್ಪು ನೀಡಿದ ನ್ಯಾಯಾಲಯ ಮಾಜಿ ಸೈನಿಕರಿಗೆ ನಿಗದಿ ಪಡಿಸಿರುವ ಭೂಮಿಯನ್ನು ನೀಡುವಂತೆ ಆದೇಶಿಸಿತ್ತು. ತೀರ್ಪು ಜಾರಿಯಾಗಿ ವರ್ಷ ಕಳೆದರೂ, ನ್ಯಾಯಾಲಯದ ಆದೇಶವನ್ನು ಜಾರಿಗೆ ತರಲು ವಿಳಂಬ ಮಾಡಿದ್ದರಿಂದ ನ್ಯಾಯಾಲಯದ ಆದೇಶ ಉಲ್ಲಂಘನೆ ದೂರು ದಾಖಲಿಸಿದ್ದರು. ಇದರ ಪರಿಣಾಮವಾಗಿ ಕಳೆದ 2 ದಿನಗಳ ಹಿಂದೆ ತಾಲೂಕು ಆಡಳಿತ ಸ್ಥಳೀಯ ನಾಲ್ವರು ಯೋಧರಿಗೆ ತಾಲೂಕಿನ ಹಾನುಬಾಳು ಹೋಬಳಿಯ ಅಗ್ನಿ ಗ್ರಾಮದಲ್ಲಿ ಜಮೀನು ಮಂಜೂರು ಮಾಡಿ ಸಾಗುವಳಿ ಪತ್ರ ನೀಡಿತು. ಈ ಸಂಬಂಧ ತಹಸೀಲ್ದಾರ್ ಪಾರ್ವತಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಯೋಧ ಧರಣಪ್ಪ, ತುಕರಾಂ, ರೆವಿನ್ಯೂ ಅಧಿಕಾರಿ ಅಂಕೇಗೌಡ ಇತರರು ಇದ್ದರು.
18ರಂದು ಮಹರ್ಷಿ ವಾಲ್ಮೀಕಿ ಜಯಂತಿ
ಹಾಸನ: ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರು ಸಂಯುಕ್ತಾಶ್ರಯದಲ್ಲಿ ನಗರದ ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಅ. 18ರಂದು ಬೆಳಿಗ್ಗೆ 11ಕ್ಕೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಏರ್ಪಡಿಸಲಾಗಿದೆ. ಮಾಜಿ ಪ್ರಧಾನಮಂತ್ರಿ ಹಾಗೂ ಲೋಕಸಭಾ ಸದಸ್ಯ ಎಚ್.ಡಿ. ದೇವೇಗೌಡರು ಉಪಸ್ಥಿತಿಯಲ್ಲಿ ರಾಜ್ಯ ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಸಮಾರಂಭವನ್ನು ಉದ್ಘಾಟಿಸುವರು. ಶಾಸಕ ಎಚ್.ಎಸ್. ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಶಾಸಕರಾದ ಎಚ್.ಡಿ. ರೇವಣ್ಣ, ಎಚ್.ಕೆ. ಕುಮಾರಸ್ವಾಮಿ, ಎ. ಮಂಜು, ಕೆ.ಎಂ. ಶಿವಲಿಂಗೇಗೌಡ, ವೈ.ಎನ್. ರುದ್ರೇಶ್ ಗೌಡ, ಸಿ.ಎನ್. ಬಾಲಕೃಷ್ಣ, ವಿಧಾನ ಪರಿಷತ್ ಸದಸ್ಯರಾ ಪಟೇಲ್ ಶಿವರಾಂ, ಬಿ.ಬಿ. ಶಿವಪ್ಪ, ಮರಿತಿಬ್ಬೇಗೌಡ, ಗೋ ಮಧುಸೂದನ್, ಜಿಪಂ ಅಧ್ಯಕ್ಷೆ ಡಿ.ಜಿ. ಅಂಬಿಕಾ ರಾಮಣ್ಣ, ನಗರಸಭೆ ಅಧ್ಯಕ್ಷತೆ ವಿದ್ಯಾ ಆನಂದ್, ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಬಿಳಿ ಚೌಡಯ್ಯ, ತಾಲೂಕು ಪಂಚಾಯ್ತಿ ಅಧ್ಯಕ್ಷೆ ರತ್ನಮ್ಮ ಹನುಮೇಗೌಡ ಮುಂತಾದವರು ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

