ಸಿಮೆಂಟ್ ಉತ್ಪನ್ನ ತ್ಯಾಜ್ಯದಿಂದ ತೊಂದರೆ
ಅರಸೀಕೆರೆ: ಪಟ್ಟಣದ ಹುಳಿಯಾರು ರಸ್ತೆಯಿಂದ ತಿರುಪತಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯೆ ಸಿಮೆಂಟ್ ಉತ್ಪನ್ನಗಳ ಕೈಗಾರಿಕ ಘಟಕ ಸ್ಥಾಪನೆಯಾಗಿದ್ದು, ಇದರಿಂದ ಹೊರಬರುವ ತ್ಯಾಜ್ಯ ಹಾಗೂ ಧೂಳಿನಿಂದ ತಿರುಪತಿ ಗ್ರಾಮದ ಜನತೆ ರೋಗ ರುಜಿನುಗಳಿಗೆ ತುತ್ತಾಗುತ್ತಿದೆ. ಕೂಡಲೇ ಈ ಘಟಕವನ್ನು ಬೇರೆಡೆಗೆ ಸ್ಥಳಾಂತರಿಸಬೇಕು, ಇಲ್ಲವೇ ಮುಚ್ಚಲು ಆದೇಶಿಸಬೇಕೆಂದು ಗ್ರಾಮಸ್ಥರು ತಾಲೂಕು ಆಡಳಿತವನ್ನು ಒತ್ತಾಯಿಸಿದ್ದಾರೆ.
ವರದಶ್ರೀ ಎಂಬ ಈ ಕೈಗಾರಿಕ ಘಟಕ ಗ್ರಾಮದ ಸಮೀಪವೇ ಕಾರ್ಯ ನಿರ್ವಹಿಸುತ್ತಿದೆ. ಇದರಿಂದ ಗ್ರಾಮದ ಜನತೆ ರಾತ್ರಿವೇಳೆಯಲ್ಲಿಯೂ ನಿದ್ರಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣಗೊಂಡಿದೆ. ಸಿಮೆಂಟ್, ಇಟ್ಟಿಗೆ, ವಿದ್ಯುತ್ಕ್ಂಬಗಳ ತಯಾರಿಕೆಯಲ್ಲಿ ತೊಡಗಿರುವ ಈ ಘಟಕ ಸರ್ಕಾರದ ನಿಯಮಗಳನ್ನು ಉಲ್ಲಂಘಿಸತೊಡಗಿದೆ.
ರಾತ್ರಿಯಿಡೀ ಹೊರಬರುವ ದೂಳು, ಶಬ್ಧಮಾಲಿನ್ಯದಂತಹ ವಾತಾವರಣದಿಂದ ಜನರು ನಿತ್ಯವೂ ಒಂದಿಲ್ಲೊಂದು ರೋಗಗಳಿಗೆ ತುತ್ತಾಗತೊಡಗಿದ್ದಾರೆ. ಆದ್ದರಿಂದ ಕೂಡಲೇ ಪರ್ಯಾಯ ವ್ಯವಸ್ಥೆ ಕೈಗೊಳ್ಳಲು ಸೂಚಿಸಬೇಕೆಂದು ಗ್ರಾಮಸ್ಥರಾದ ಬಸವರಾಜು, ನರಸಿಂಹ, ಸಿದ್ದಪ್ಪ, ಪ್ರಕಾಶ್ ಮತ್ತಿತರರು ಆಗ್ರಹಿಸಿದ್ದಾರೆ.
ಕೈಗಾರಿಕ ಘಟಕದಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಈಗಾಗಲೇ ರಾಜ್ಯಪಾಲರು, ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಅಧಿಕಾರಿಗಳು ಮಾತ್ರ ಈವರೆಗೆ ಯಾವುದೇ ಕ್ರಮ ತೆಗೆದುಕೊಂಡಂತೆ ಕಾಣುತ್ತಿಲ್ಲ ಪರಿಸ್ಥಿತಿ ಹೀಗೇಯೇ ಮುಂದುವರೆದರೆ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ, ಧರಣಿ ಸತ್ಯಾಗ್ರಹ ನಡೆಸುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

