ಹಾಸನ

ಚೌಡೇಶ್ವರಿದೇವಿ ಸಂಭ್ರಮದ ದಸರಾ ಉತ್ಸವ

Published On :

ಕ.ಪ್ರ.ವಾರ್ತೆ , ಹಿರೀಸಾವೆ , ಅ.16
ಹಿರೀಸಾವೆ ಗ್ರಾಮ ದೇವತೆ ಚೌಡೇಶ್ವರಿ ದೇವಿಯ ಎರಡನೇ ವರ್ಷದ ನವರಾತ್ರಿ ದಸರಾ ಉತ್ಸವ ಅದ್ಧೂರಿ ಹಾಗೂ ಸಂಭ್ರಮದಿಂದ ನಡೆಯಿತು. ಉತ್ಸವದ ಅಂಗವಾಗಿ ಚೌಡೇಶ್ವರಿ ದೇವಾಲಯ ಹಾಗೂ ಇನ್ನಿತರ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕಗಳು ನಡೆದವು.
ರಾತ್ರಿ ಚೌಡೇಶ್ವರಿ ದೇವಿಯನ್ನು ವಿದ್ಯುತ್ ದೀಪಾಲಂಕೃತ ಪಲ್ಲಕ್ಕಿಯಲ್ಲಿ ಕೂರಿಸಿ ಜತೆಯಲ್ಲಿ ವಿದ್ಯಾಗಣಪತಿ ಮೂರ್ತಿಯನ್ನು ಊರಿನ ಎಲ್ಲಾ ಬೀದಿಗಳಲ್ಲಿ ಮಂಗಳವಾದ್ಯದೊಂದಿಗೆ ಮೆರವಣಿಗೆ ಮಾಡಲಾಯಿತು.
ನಾಗಮಂಗಲದ ರುದ್ರೇಶ್ ತಂಡದ ವೀರಭದ್ರನ ಕುಣಿತ, ಬೆಳ್ತಂಗಡಿಯ ಗಿರಿಧರಶೆಟ್ಟಿ ತಂಡದ ಕೀಲುಕುದುರೆ ನರ್ತನ ಹಾಗೂ ಗೊಂಬೆಕುಣಿತ, ಜಿನ್ನೇನಹಳ್ಳಿ ಗ್ರಾಮದ ವೀರಮಕ್ಕಳ ಕುಣಿತ, ಕುಂಭೇನಹಳ್ಳಿ ಗ್ರಾಮಸ್ಥರಿಂದ ಕೋಲಾಟ, ಪಟದ ಕುಣಿತ ಮುಂತಾದ ಮನರಂಜನಾ ಕಾರ್ಯಕ್ರಮಗಳು ಸಾರ್ವಜನಿಕರನ್ನು ರಂಜಿಸಿದವು.  ಭಕ್ತಾದಿಗಳಿಗೆ ಏರ್ಪಡಿಸಿದ್ದ ಅನ್ನಸಂತರ್ಪಣೆಯಲ್ಲಿ ಶಾಸಕ ಸಿ.ಎನ್. ಬಾಲಕೃಷ್ಣ ಎಲ್ಲರೊಂದಿಗೆ ಪಂಕ್ತಿಯಲ್ಲಿ ಕುಳಿತು ಭೋಜನ ಸವಿದರು. ಮೂರು ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.