ಕಾನೂನು ಅರಿವಿನ ಕೊರತೆಯಿಂದ ಅಪರಾಧಗಳ ಸಂಖ್ಯೆ ಹೆಚ್ಚಳ
ಬೇಲೂರು: ಬಹುತೇಕ ಜನರಿಗೆ ಕನಿಷ್ಠ ಕಾನೂನಿನ ಅರಿವು ಇಲ್ಲದಿರುವ ಹಿನ್ನೆಲೆಯಲ್ಲಿ ಅಪರಾಧಗಳ ಸಂಖ್ಯೆ ಹೆಚ್ಚಳವಾಗುತ್ತಿವೆ. ಈ ದಿಸೆಯಲ್ಲಿ ಯುವ ಜನತೆಗೆ ಸಹಕಾರಿಯಾಗುವಂತೆ ಪಠ್ಯ ಪುಸ್ತಕದ ಮೂಲಕ ಕಾನೂನಿನ ಅಂಶಗಳು ತಿಳಿಯುವಂತಾಗಬೇಕು ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಟಿ.ಎಚ್. ಸದಾಶಿವಪ್ಪ ಹೇಳಿದರು. ತಾಲೂಕಿನ ದೊಡ್ಡಬ್ಯಾಡಿಗೆರೆ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರದಲ್ಲಿ ಮಾತನಾಡಿದ ಅವರು, ಮೂಲಭೂತ ಕರ್ತವ್ಯಗಳ ಬಗ್ಗೆ ಅರಿವು ಹಾಗೂ ನೆರವು ಕಾರ್ಯಕ್ರಮಗಳು ನಡೆದಾಗ ಮಾತ್ರ ಸದೃಢ ಸಮಾಜ ಕಟ್ಟಲು ಸಾಧ್ಯವಾಗುತ್ತದೆ ಎಂದು ಹೇಳಿದರು. ತಾಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷ ಬಿ.ಎಂ.ರವಿಕುಮಾರ್ ಮಾತನಾಡಿಗ್ರಾಮೀಣ ಪ್ರದೇಶದ ಜನರು ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳಲ್ಲಿ ಒಟ್ಟುಗೂಡಿಕೊಂಡು ಕೆಲಸ ಮಾಡಬೇಕು ಎಂದ ಅವರು ಎನ್‌ಎಸ್‌ಎಸ್‌ನಿಂದ ನಾಯಕತ್ವದ ಗುಣ, ವೇದಿಕೆ ನಿರ್ವಹಣೆ, ಆತ್ಮಸ್ಥೈರ್ಯ ಬರುತ್ತದೆ ಎಂದರು. ವಕೀಲ ಪುಟ್ಟಸ್ವಾಮಿಗೌಡ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಸಂವಿಧಾನದಲ್ಲಿ ಸಮಾನ ಅವಕಾಶ ನೀಡಲಾಗಿದೆ. ಮಾಹಿತಿ ಹಕ್ಕು ಕಾಯಿದೆ ಭ್ರಷ್ಟ ರಾಜಕಾರಣಿಗಳು ಹಾಗೂ ಅಧಿಕಾರಿಗಳಿಗೆ ಕಡಿವಾಣ ಹಾಕಲು ರಾಮಬಾಣವಾಗಿದೆ ಎಂದು ಹೇಳಿದರು. ತಾಪಂ ಸದಸ್ಯ ಪರ್ವತಯ್ಯ, ತಾಪಂ ಮಾಜಿ ಉಪಾಧ್ಯಕ್ಷ ಮೋಹನ್‌ಕುಮಾರ್, ಪತ್ರಕರ್ತ ಹೆಬ್ಬಾಳು ಹಾಲಪ್ಪ, ನಿಂಗೇಗೌಡ, ಕಾಡೇಗೌಡ, ವಿಜಯಕುಮಾರ್, ಲಕ್ಕಿಹಾಲಪ್ಪ ಇತರರು ಇದ್ದರು.
ಆಟೋ ಮೀಟರ್ ರಿಪೇರಿಗೆ ಕಾಲಾವಕಾಶ ಕೋರಿಕೆ
ಹಾಸನ: ನಗರದಲ್ಲಿ ಆಟೋ ಮೀಟರ್ ರಿಪೇರಿದಾರರು ಇಬ್ಬರು ಮಾತ್ರ ಇರುವುದರಿಂದ ಮೀಟರ್ ರಿಪೇರಿ ಮಾಡಲು ಕಾಲಾವಕಾಶ ಬೇಕಾಗಿದೆ. ಆದರೆ ಜಿಲ್ಲಾಡಳಿತ ನೀಡಿರುವ ಕಡಿಮೆ ಅವಧಿಯಲ್ಲಿ (ನ.1 ರೊಳಗೆ) ಎಲ್ಲ ಆಟೋ ರಿಕ್ಷಾಗಳಲ್ಲೂ ಪರಿಷ್ಕೃತ ದರ ಬದಲಾಯಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹಾಸನ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಸ್ಪಷ್ಟಪಡಿಸಿದೆ. ಹಾಸನದ ಎಲ್ಲಾ ಆಟೋ ರಿಕ್ಷಾಗಳಲ್ಲಿ ಫ್ಲಾಗ್ ಮೀಟರ್ ಈಗಾಗಲೇ ಅಳವಡಿಸಲಾಗಿದ್ದು, ಜಿಲ್ಲಾಡಳಿತದ ಆದೇಶದಂತೆ ಪರಿಷ್ಕೃತ ದರ 17 ರು.ನಿಂದ 20ರು.ಗೆ ಬದಲಾವಣೆ ಕಾರ್ಯ ನಡೆಯುತ್ತಿದೆ ಎಂದು ಸಂಘದ ಅಧ್ಯಕ್ಷ ವೈ.ಎಂ.ಅಬ್ಬಾಸ್ ತಿಳಿಸಿದ್ದಾರೆ. ಜಿಲ್ಲಾಡಳಿತ ಆಟೋ ಚಾಲಕರಿಗೆ ಹಾಗೂ ಮಾಲೀಕರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ ಕೊಡುವುದರ ಜತೆಗೆ ಇನ್ನು ಸ್ವಲ್ಪ ಕಾಲಾವಧಿ ನೀಡಬೇಕು ಎಂದು ಕೋರಿದ್ದಾರೆ.ಙ ಜಿಲ್ಲಾಡಳಿತ ಕಡ್ಡಾಯವಾಗಿ ನವೆಂಬರ್ 1 ರೊಳಗೆ ಎಲ್ಲಾ ಆಟೋಗಳಿಗೆ ಫ್ಲಾಗ್ ಮೀಟರ್ ಅಳವಡಿಸಬೇಕೆಂದು ನಿರ್ದೇಶನ ನೀಡಿದ್ದಾರೆ. ಆದರೆ ಕಾಲಾವಕಾಶ ನೀಡಲು ನಿರಾಕರಿಸಿದ್ದಾರೆ. ವ್ಯವಸ್ಥಿತ ಆಟೋ ನಿಲ್ದಾಣದ ವ್ಯವಸ್ಥೆ ಇಲ್ಲದೇ ಇರುವುದರಿಂದ ತೊಂದರೆಯಾಗಿರುವ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ತರಲಾಗಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

