ಕಾಲುಬಾಯಿ: 11 ರಾಸುಗಳ ಸಾವು
ಅರಕಲಗೂಡು: ತಾಲೂಕಿನ 22 ಹಳ್ಳಿಗಳಲ್ಲಿ ರಾಸುಗಳಿಗೆ ಕಾಲುಬಾಯಿ ಜ್ವರ ಕಾಣಿಸಿಕೊಂಡಿದ್ದು,ಈವರೆಗೆ 53 ರಾಸುಗಳಿಗೆ ಕಾಲುಬಾಯಿ ಜ್ವರದ ಸೋಂಕು ಹರಡಿದ್ದು, ಅವುಗಳ ಪೈಕಿ 11 ರಾಸುಗಳು ಸಾವನ್ನಪ್ಪಿವೆ ಎಂದು ತಾಲೂಕು ಪಶು ಸಂಗೋಪನಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವೀರಭದ್ರಪ್ಪ ತಿಳಿಸಿದ್ದಾರೆ.
ಗುರುವಾರ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು ಈಗಾಗಲೇ ಜ್ವರದ ಸೋಂಕು ಇರುವ ರಾಸುಗಳಿಗೆ ಇಲಾಖೆ ಸಿಬ್ಬಂದಿ ಬೆಳಿಗ್ಗೆ ಮತ್ತು ಸಂಜೆ ಕಡ್ಡಾಯವಾಗಿ ಚಿಕಿತ್ಸೆ ನೀಡುತ್ತಿದ್ದು, ರೋಗ ನಿಯಂತ್ರಣಕ್ಕೆ ಬಂದಿದ್ದು, ರಾಸುಗಳು ಗುಣಮುಖವಾಗುತ್ತಿವೆ ಎಂದು ಹೇಳಿದರು.
ಸೋಂಕು ಇರುವ ರಾಸುಗಳನ್ನು ಇತರೆ ಆರೋಗ್ಯವಂತ ರಾಸುಗಳಿಂದ ದೂರ ಇರುವಂತೆ ರೈತರನ್ನು ಜಾಗೃತಗೊಳಿಸಲಾಗುತ್ತಿದೆ.ರೋಗದ ಸುಳಿವು ದೊರೆತಕೂಡಲೇ ರೈತರು ಉದಾಸೀನ ಮಾಡದೇ ಹತ್ತಿರದ ಪಶು ಚಿಕಿತ್ಸಾ ಕೇಂದ್ರಗಳಿಗೆ ತೆರಳಿ ಚಿಕಿತ್ಸೆ ಕೊಡಿಸುವಂತೆ ಮನವಿ ಮಾಡಿದರು. ಅಸ್ವಸ್ಥಗೊಂಡಿದ್ದ ರಾಸುಗಳು ಚಿಕಿತ್ಸೆಯಿಂದ ಚೇತರಿಕೆ ಕಂಡಿದ್ದು ರೈತರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಇಲಾಖೆ ಸಿಬ್ಬಂದಿಗಳ ಸೂಚನೆಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ತಹಸೀಲ್ದಾರರು, ಪಶು ಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕರು ಮತ್ತು ತಾಪಂಕಾರ್ಯನಿರ್ವಾಹಕ ಅಧಿಕಾರಿಗಳನ್ನು ಒಳಗೊಂಡ ತಂಡ ರಚಿಸಲಾಗಿದೆ ಎಂದು ತಿಳಿಸಿದರು. ಅರಕಲಗೂಡು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಹಂಪಾಪುರದಲ್ಲಿ ಪರುಶರಾಮ ಎಂಬುವರ ರಾಸುಗೆ ಕಾಲುಬಾಯಿ ಜ್ವರದ ಸೋಂಕು ಇದ್ದು ಚಿಕಿತ್ಸೆ ನೀಡಲಾಗುತ್ತಿದೆ. ರಾಮನಾಥಪುರ ಹೋಬಳಿಯ ಮಲ್ಲಿನಾಥಪುರದಲ್ಲಿ ಬುಧವಾರ ಕಾಲುಬಾಯಿ ಜ್ವರದಿಂದ ರಾಸು ಮೃತಪಟ್ಟಿದೆ.
ಇಂದು ಕರ್ನಾಟಕ ಕಾವಲು ಪಡೆಯಿಂದ ಧ್ವನಿ ಸುರುಳಿ ಬಿಡುಗಡೆ
ಹಾಸನ: ನಾಡು-ನುಡಿಗಾಗಿ ಹೋರಾಟ ನಡೆಸುತ್ತಿರುವ ಕರ್ನಾಟಕ ಕಾವಲು ಪಡೆಯಿಂದ ಅ.18ರಂದು ಧ್ವನಿ ಸುರಳಿ ಬಿಡುಗಡೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಕಾವಲು ಪಡೆಯ ಜಿಲ್ಲಾಧ್ಯಕ್ಷ ಎಚ್.ಎನ್.ನಟೇಶ್ ತಿಳಿಸಿದರು.
ನಗರದಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧ್ವನಿ ಸುರಳಿ ಬಿಡುಗಡೆ ಮುನ್ನ ಹಾಸನಾಂಬೆಗೆ ಪೂಜೆ ಸಲ್ಲಿಸಿ ನಂತರ ನಗರದ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಗುವುದು. ಕಾವಲು ಪಡೆ ರಾಜ್ಯಾಧ್ಯಕ್ಷ ಎಂ.ಮೋಹನ್ಕುಮಾರಗೌಡ ಅವರು ಧ್ವನಿ ಸುರಳಿ ಬಿಡುಗಡೆ ಮಾಡುವರು. ಆದಿಚುಂಚನಗಿರಿ ಶಾಖಾ ಮಠದ ಶಂಭುನಾಥ ಸ್ವಾಮೀಜಿ ಸಾನಿಧ್ಯವಹಿಸಲಿದ್ದಾರೆ. ಶಾಸಕ ಎಚ್.ಎಸ್.ಪ್ರಕಾಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ತಹಸೀಲ್ದಾರ್ ಮಂಜುನಾಥ್ ಅಧ್ಯಕ್ಷತೆ ವಹಿಸುವರು. ನಗರಸಭೆ ಅಧ್ಯಕ್ಷೆ ಎಚ್.ಎಚ್.ವಿದ್ಯಾ, ಉಪಾಧ್ಯಕ್ಷ ಇರ್ಷಾದ್ಪಾಷ, ಸದಸ್ಯ ಎಚ್.ಎಸ್.ಅನಿಲಕುಮಾರ್, ನಗರಸಭೆ ಮಾಜಿ ಅಧ್ಯಕ್ಷ ಸಿ.ಆರ್.ಶಂಕರ್, ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ.ಆನಂದ್ ಭಾಗವಹಿಸಲಿದ್ದಾರೆ ಎಂದು ಹೇಳಿದರು. ಬಿ.ಎಸ್.ನವೀನ್ಕುಮಾರ್, ಸಯೈದ್ ಎಜಾಸ್, ತಾಲೂಕು ಅಧ್ಯಕ್ಷ ಬಿ.ವಿ.ಭಾನುಪ್ರಕಾಶ್, ಮಹಿಳಾ ಅಧ್ಯಕ್ಷೆ ವೀಣಾ, ಪ್ರಸಾದ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

