ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ
ಹಾಸನ: ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ 6ನೇ ಸಮ್ಮೇಳನ ಬೆಂಗಳೂರಿನ ಕ್ರೈಸ್ಟ್ ವಿವಿ ಸಹಯೋಗದೊಂದಿಗೆ ಎರಡು ದಿನಗಳ ಕಾಲ 2013ರ ಡಿಸೆಂಬರ್ 20 ಮತ್ತು 21 ನಡೆಯಲಿದೆ.
ಅವಿಷ್ಕಾರಕ ಸಂಶೋಧನೆ ಮತ್ತು ಅಭಿವೃದ್ಧಿ ಉತ್ತೇಜನಕ್ಕೆ ವಿಜ್ಞಾನ ಮತ್ತು ತಂತ್ರಜ್ಞಾನ (Science and Technology for promoting innovative research and development) ಎಂಬ ಕೇಂದ್ರ ವಿಷಯದಡಿ ಆಯೋಜಿಸಲಾಗುವುದು.
ಸಮ್ಮೇಳನಕ್ಕೆ ರಾಜ್ಯದ ನಾನಾ ಇಲಾಖೆಗಳ ಅಧಿಕಾರಿಗಳು, ವಿಶ್ವವಿದ್ಯಾನಿಲಯಗಳ ಸ್ನಾತಕೋತ್ತರ ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು, ವಿಜ್ಞಾನಿಗಳು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದು. ಮೂಲ ಮತ್ತು ಅನ್ವಯಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಕೆಗಳನ್ನು ಸಹ (www.chrisrtuniversity.in) ಮಂಡಿಸಬಹುದಾಗಿದೆ.
ಪ್ರತಿನಿಧಿಗಳಾಗಿ ನೊಂದಾಯಿಸಿಕೊಳ್ಳಲು ಹಾಗೂ ಪ್ರಾತ್ಯಕ್ಷಿಕೆಗಳನ್ನು ಕಳುಹಿಸಲು ನವೆಂಬರ್ 30 ಕಡೇ ದಿನ. ತಜ್ಞ ಸಮಿತಿ ಆಯ್ಕೆ ಮಾಡಿದ ಅತ್ಯುತ್ತಮವಾದ 3 ಪ್ರಾತ್ಯಕ್ಷಿಕೆಗಳಿಗೆ ಬಹುಮಾನ ನೀಡಲಾಗುವುದು. ಹೆಚ್ಚಿನ ವಿವರ ಕ್ರೈಸ್ಟ್ ವಿವಿ ವೆಬ್ತಾಣದಿಂದ (ಢಿಢಿಢಿ.ಝಛ್ಠ್ಝಡ್ಠಡ್ಡಿಟ್ಝಿಢಜ್ಠಡ್ಝಡಿಣ.್ಝಟಿ) ಪಡೆಯಬಹುದಾಗಿದೆ.
ಸಮ್ಮೇಳನಕ್ಕೆ ಪ್ರವೇಶ ಉಚಿತವಾಗಿದ್ದು ಮೊದಲು ನೋಂದಾಯಿಸಿಕೊಂಡವರಿಗೆ ಆದ್ಯತೆ ನೀಡಲಾಗುವುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ವಿಶೇಷ ನಿರ್ದೇಶಕ ಡಾ.ಎಚ್.ಹೊನ್ನೇಗೌಡ ತಿಳಿಸಿದ್ದಾರೆ.
ನಗರದಲ್ಲಿ ಹಾಸನಾಂಬ ವಸ್ತ್ರ ವೈಭವ
ಹಾಸನ: ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯ್ತಿ, ಹಾಸನ ವತಿಯಿಂದ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 20ರವರೆಗೆ 5 ದಿನ ಕಾಲ ಹಾಸನಾಂಬ ವಸ್ತ್ರ ವೈಭವ ಎಂಬ ಜಿಲ್ಲಾ ಕೈಮಗ್ಗ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆರ್.ಸಿ. ರಸ್ತೆಯಲ್ಲಿರುವ ಸ್ಲೇಟರ್ಹಾಲ್ನಲ್ಲಿ ಆಯೋಜಿಸಲಾಗಿದೆ. ಈ ಮೇಳದಲ್ಲಿ ಕಾಟನ್ ಸೀರೆಗಳು, ರೇಷ್ಮೆ ಸೀರೆಗಳು ಹಾಗೂ ಇನ್ನಿತರ ವಸ್ತ್ರಗಳನ್ನು ಖರೀದಿಸಬಹುದು. ಸಾರ್ವಜನಿಕರು ಈ ಅವಕಾಶ ಉಪಯೋಗಿಸಿಕೊಳ್ಳುವಂತೆ ಸಹಾಯಕ ನಿರ್ದೇಶಕರು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

