ಸ್ಪರ್ಧಾತ್ಮಕ ಪರೀಕ್ಷೆ ಗುರಿ ಸಾಧಿಸಲು ಶ್ರದ್ಧೆ ಮುಖ್ಯ
ಕ.ಪ್ರ.ವಾರ್ತೆ ಹಾಸನ ಅ.17
ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗುರಿ ಸಾಧಿಸಲು ಆಸಕ್ತಿ, ಆತ್ಮವಿಶ್ವಾಸ, ಶ್ರದ್ಧೆ, ಸಮಯಪ್ರಜ್ಞೆ, ತಾಳ್ಮೆ, ಕ್ರಿಯಾಶೀಲತೆ ಮತ್ತು ಕಠಿಣ ಪರಿಶ್ರಮ ಬಹುಮುಖ್ಯ ಎಂದು ಚನ್ನರಾಯಪಟ್ಟಣ ತಹಸೀಲ್ದಾರ್ ಡಾ.ಎಚ್.ಎಲ್.ನಾಗರಾಜು ತಿಳಿಸಿದರು.
ನಗರದ ಆದಿಚುಂಚನಗಿರಿ ಶಾಖಾ ಮಠದ ಬಿಜಿಎಸ್ ಅಧ್ಯಯನ ಕೇಂದ್ರದಿಂದ ಏರ್ಪಡಿಸಿದ್ದ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನೆ ಮತ್ತು ಬ್ಯಾಂಕಿಂಗ್ ಸ್ಪರ್ಧಾತ್ಮಕ ಪೂರ್ವಭಾವಿ ತರಬೇತಿ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ಆದಿಚುಂಚನಗಿರಿ ಮಠ ಸಮಾಜಮುಖಿಯಾಗಿ, ಇಂತಹ ಸ್ಪರ್ಧಾತ್ಮಕ ತರಬೇತಿಯನ್ನು ಜಾತ್ಯತೀತವಾಗಿ ಎಲ್ಲ ವರ್ಗದ ಪ್ರತಿಭಾವಂತ ಮಕ್ಕಳಿಗೂ ನೀಡುತ್ತಾ ಬಂದಿರುವುದು ಶ್ಲಾಘನೀಯ ಎಂದರು. ಗುರಿ ಮುಟ್ಟಲು ಪರೀಕ್ಷೆಗೆ ಯಾವ ರೀತಿ ಸಿದ್ಧತೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿದರು.
ಮುಂದಿನ ದಿನಗಳಲ್ಲಿ ಅಖಿಲ ಭಾರತ ಸೇವೆಗಳಾದ ಐಎಎಸ್, ಐಪಿಎಸ್ನಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಈ ಕೇಂದ್ರ ತರಬೇತಿ ನೀಡುವ ಕಾರ್ಯಕ್ರಮ ಹಮ್ಮಿಕೊಂಡಲ್ಲಿ ಬೆಂಗಳೂರು, ದೆಹಲಿ, ಹೈದ್ರಾಬಾದ್ ಮೊದಲಾದ ನಗರಗಳಿಗೆ ಹೋಗುವುದು ಹಾಸನ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪ್ರತಿಭಾವಂತ ಮಕ್ಕಳಿಗೆ ತಪ್ಪುತ್ತದೆ. ಮಠದ ಈ ಸತ್ಕಾರ್ಯಕ್ಕೆ ತಾವು ಕೂಡ ಬಂದು ಗುಣಮಟ್ಟದ ತರಬೇತಿ ನೀಡುವುದಾಗಿ ಭರವಸೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾರ್ಪೋರೇಷನ್ ಬ್ಯಾಂಕ್ ವ್ಯವಸ್ಥಾಪಕ ಆರ್.ಕೆ. ಬಾಲಚಂದ್ರ ಮಾತನಾಡಿ, ಸ್ಪರ್ಧಾತ್ಮಕ ಪರೀಕ್ಷೆಗಳು ನಿಮ್ಮ ತಾಳ್ಮೆಯನ್ನು ಪರೀಕ್ಷಿಸುತ್ತವೆ. ವಿಷಯವನ್ನು ಗಂಭೀರವಾಗಿ ಪರಿಶೀಲಿಸಲು, ಅಧ್ಯಯನ ಪೂರಕವಾಗಿ ತಿಳಿದುಕೊಳ್ಳುವ ಆಸಕ್ತಿ ಇರಬೇಕು ಎಂದು ತಿಳಿಸಿದರು.
ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಶಾಖಾ ಮಠಾಧೀಶ ಶಂಭುನಾಥ ಸ್ವಾಮೀಜಿ ಮಾತನಾಡಿ, ವಿದ್ಯೆಯನ್ನು ಬಹಳ ಶ್ರದ್ಧೆಯಿಂದ ಕುಳಿತು ಕೇಳುವುದು ಉತ್ತಮ. ಇದಕ್ಕೆ ಒಳ್ಳೆಯ ಮನಸ್ಸು ಅತಿ ಮುಖ್ಯ ಎಂದರು.
ಸ್ಪರ್ಧಾತ್ಮಕ ಪರೀಕ್ಷೆಗಳಂತಹ ಪಾವಿತ್ರ್ಯತೆಯುಳ್ಳ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುವವರು ಸಹ ನೀತಿ ಸಂಹಿತೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ತಿಳಿಸಿದ ಸ್ವಾಮೀಜಿ, ಬಿಜಿಎಸ್ ಅಧ್ಯಕ್ಷ ಕೇಂದ್ರದ ಜ್ಞಾನದಾನಿಗಳ ಸೇವೆಯನ್ನು ಶ್ಲಾಘಿಸಿದರು.
ಕೇಂದ್ರದ ಸಂಚಾಲಕ ಡಾ.ಎಚ್.ಕೆ.ಕುಶಾಲಪ್ಪ, ನಾನಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೀಡುತ್ತಿರುವ ತರಬೇತಿಗಳ ಬಗ್ಗೆ ತಿಳಿಸಿ, ಸ್ವಾಗತಿಸಿದರು. ಜ್ಞಾನದಾನಿ ವಿಶ್ವನಾಥ ಚೌಹ್ಹಾಣ್ ಇದ್ದರು. ಪಪೂ ಕಾಲೇಜು ಪ್ರಾಂಶುಪಾಲ ಜಿ.ಚಂದ್ರಶೇಖರ್ ನಿರೂಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

