ಹಾಸನ

ವಾಲ್ಮೀಕಿ ಜಯಂತಿ ಅಂಗವಾಗಿ ಮೆರವಣಿಗೆ

Published On :

ಕ.ಪ್ರ. ವಾರ್ತೆ ಹಾಸನ ಅ.17
ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ವತಿಯಿಂದ ನಗರದ ಕಲಾ ಭವನದಲ್ಲಿ ಅ.20 ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು ಎಂದು ಜಿಲ್ಲಾಧ್ಯಕ್ಷ ಬಿ.ಆರ್. ಪ್ರಕಾಶ್ ತಿಳಿಸಿದರು.
 ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮಕ್ಕೂ ಮುನ್ನ ನಗರದ ಹಾಸನಾಂಬೆ ದೇವಾಲಯದಿಂದ ವಾಲ್ಮೀಕಿ ಭಾವಚಿತ್ರ ಹಾಗೂ ನಾನಾ ಕಲಾತಂಡದೊಂದಿಗೆ ಮೆರವಣಿಗೆ ಮೂಲಕ ಕಲಾಕ್ಷೇತ್ರಕ್ಕೆ ಆಗಮಿಸಲಾಗುವುದು ಎಂದು ಹೇಳಿದರು.
 ಅಬಕಾರಿ ಸಚಿವ ಸತೀಶ್‌ಜಾರಕಿಹೊಳಿ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರು ಭಾಗವಹಿಸುವರು. ದಾವಣಗೆರೆ ಜಿಲ್ಲೆ ಹರಿಹರ ತಾಲೂಕು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮೀಜ ದಿವ್ಯ ಸಾನಿಧ್ಯ ವಹಿಸುವರು. ಮ. 12 ಕ್ಕೆ ಜಯಂತಿ ಅಂಗವಾಗಿ ಸಂಪೂರ್ಣ ರಾಮಾಯಣ ನಾಟಕ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.
  ಅಂದು ಬೆಳಗ್ಗೆ 10.30 ಕ್ಕೆ ಕಾಂಗ್ರೆಸ್ ಭವನದಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದರು.ಕಾರ್ಯಕ್ರಮದಲ್ಲಿ ಮೂರು ಸಾವಿರಕ್ಕಿಂತ ಹೆಚ್ಚು ಜನರು ಭಾಗವಹಿಸಲಿದ್ದಾರೆ.  ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಸಿದ್ಧಮಲ್ಲ, ಆರ್.ಸಿ. ಭೈರಪ್ಪ, ರಾಜಶೇಖರ್ ಇದ್ದರು.
ಅರಸೀಕೆರೆ ವರದಿ: ತಾಲೂಕು  ಆಡಳಿತ, ತಾಲೂಕು ಪಂಚಾಯ್ತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮಿಕಿ ಮಹಾಸಭಾ ಸಂಘದ ವತಿಯಿಂದ ಅ.18ರ ಶುಕ್ರವಾರ ಬೆಳಗ್ಗೆ 11 ಕ್ಕೆ  ಜೇನುಕಲ್ ನಗರ ಬಡಾವಣೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನದಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು ಎಂದು ತಾಲೂಕು  ದಂಡಾಧಿಕಾರಿ ಕೇಶವಮೂರ್ತಿ ತಿಳಿಸಿದ್ದಾರೆ.  ಅಧ್ಯಕ್ಷತೆಯನ್ನು ಶಾಸಕ ಕೆ.ಎಂ ಶಿವಲಿಂಗೇಗೌಡ ವಹಿಸಲಿದ್ದು ಚುನಾಯಿತ ಜನಪ್ರತಿನಿಧಿಗಳು, ನಾನಾ ಪ್ರಗತಿಪರ ಸಂಘಟನೆಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.