ಜಿಲ್ಲಾದ್ಯಂತ ಸಂಭ್ರಮದ ವಾಲ್ಮೀಕಿ ಜಯಂತಿ
ಕ.ಪ್ರ.ವಾರ್ತೆ , ಹಾಸನ , ಅ.18
ಜಿಲ್ಲಾದ್ಯಂದ ಶುಕ್ರವಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಡಳಿತ ಮತ್ತು ನಾನಾ ಸಂಘಟನೆಗಳಿಂದ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಮಹರ್ಷಿಗಳ ಭಾವಚಿತ್ರದೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಹಾಸನ ನಗರ, ಹೊಳೆನರಸೀಪುರ, ಆಲೂರು, ಚನ್ನರಾಯಪಟ್ಟಣ, ಅರಸೀಕೆರೆ, ಅರಕಲಗೂಡು, ಬೇಲೂರು ಮತ್ತು ಸಕಲೇಶಪುರ ತಾಲೂಕುಗಳಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಆದರೆ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹಾದೇವಪ್ಪ ಗೈರು ಹಾಜರಾಗಿದ್ದರು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಜ್ಯೋತಿ ಬೆಳಗುವುದರ ಮೂಲಕ ಶಾಸಕ ಎಚ್.ಎಸ್. ಪ್ರಕಾಶ್ ಉದ್ಘಾಟಿಸಿದರು.
ಉತ್ತಮ ವಾತಾವರಣ ನಿರ್ಮಾಣಕ್ಕೆ: ಮನುಷ್ಯ ಹಾಕುವ ಹೆಜ್ಜೆಯಲ್ಲಿ ಸಮಾಜ ಮುಂದುವರೆಯುವುದು ನಿರ್ಧರಿಸುತ್ತದೆ. ಮಕ್ಕಳಿಗೆ ಹೆಚ್ಚಿನ ವಿದ್ಯಾಭ್ಯಾಸ ನೀಡುವದರದೊಂದಿಗೆ ಮುಂದಿನ ದಿವಸಗಳಲ್ಲಿ ಉತ್ತಮ ಸಮಾಜ ಕಾಣಲು ಹಾಗೂ ಸರ್ಕಾರದ ಯೋಜನೆಗಳು ಲಭಿಸಲು ಸಾಧ್ಯವಾಗುತ್ತದೆ ಎಂದು ಸಲಹೆ ನೀಡಿದರು. ಇಂತಹ ಉತ್ತಮ ವಾತಾವರಣ ನಿರ್ಮಾಣಕ್ಕೆ ಪೋಷಕರ ಪಾತ್ರ ಮುಖ್ಯವಾಗಿದೆ. ವಾಲ್ಮೀಕಿ ರಚಿಸಿರುವ ರಾಮಾಯಣ ಇಂದಿಗೂ ಎಂದೆಂದಿಗೂ ಚಿರವಾಗಿರುತ್ತದೆ ಎಂದರು. ಎಂಎಲ್ಸಿ ಪಟೇಲ್ ಶಿವರಾಂ ಅವರು ಮಾತನಾಡಿ, ವಾಲ್ಮೀಕಿ ಜಯಂತಿ ಕಾರ್ಯಕ್ರಮ ಮೊದಲು ಖಾಸಗಿ ಕಾರ್ಯಕ್ರಮವಾಗಿತ್ತು. ಈಗ ಸರ್ಕಾರಿ ಕಾರ್ಯಕ್ರಮವಾಗಿ ಮಾಡಲಾಗುತ್ತಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದರು. ಮೊದಲು ಕಳವು ಮಾಡಿ ಜೀವನ ಸಾಗಿಸುತ್ತಿದ್ದ ವಾಲ್ಮೀಕಿ ತನ್ನ ಸಾಹಿತ್ಯದ ಮೂಲಕ ಜಗತ್ ಪ್ರಸಿದ್ಧವಾದರು ಎಂದು ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮೆರವಣಿಗೆಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪೂಜೆ ಸಲ್ಲಿಸುವುದರ ಮೂಲಕ ಚಾಲನೆ ನೀಡಿದರು. ಇದೆ ವೇಳೆ ಕಲಾವಿದ ಅರಸೀಕೆರೆ ತಾ. ಚಲುವನಹಳ್ಳಿ ಶೇಖರಪ್ಪ, ಹಾಸನ ತಾ. ಆರ್.ಸಿ. ಭೈರಪ್ಪ, ಆಲೂರು ತಾ. ಮೋಹನ್ಕುಮಾರ್ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಅನ್ಬುಕುಮಾರ್, ಜಿಲ್ಲಾ ಎಸ್ಪಿ ರವಿ ಡಿ. ಚನ್ನಣ್ಣನವರ್, ಜಿಪಂ ಅಧ್ಯಕ್ಷೆ ಡಿ.ಜಿ.ಅಂಬಿಕಾ ರಾಮಣ್ಣ, ತಹಸೀಲ್ದಾರ್ ಮಂಜುನಾಥ್, ಎಎಸ್ಪಿ ರಶ್ಮಿ, ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಎನ್.ಆರ್. ಪುರುಷೋತ್ತಮ ಭಾಗವಹಿಸಿದ್ದರು
ಕಾಂಗ್ರೆಸ್ ಕಚೇರಿಯಲ್ಲಿ: ನಗರದ ಕಾಂಗ್ರೆಸ್ ಘವನದಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಬಿ. ಶಿವರಾಂ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿದರು. ಮುಖಂಡ ಎಚ್.ಕೆ. ಮಹೇಶ್, ಮಂಜುನಾಥ್ ಶರ್ಮಾ, ವೆಂಕಟೇಗೌಡ, ಚೆಲುವನಹಳ್ಳಿ ಶೇಖರಪ್ಪ ಇತರರು ಇದ್ದರು.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.