ಬೇಲೂರಲ್ಲಿ ಸಡಗರದ ವಾಲ್ಮೀಕಿ ಜಯಂತಿ
ಕನ್ನಡಪ್ರಭ ವಾರ್ತೆ, ಬೇಲೂರು, ಅ.18
ತಾಲೂಕು ಅಡಳಿತ, ಸಮಾಜ ಕಲ್ಯಾಣ ಇಲಾಖೆ, ತಾಲೂಕು ಪಂಚಾಯಿತಿ, ತಾ. ವಾಲ್ಮೀಕಿ ಸಂಘದಿಂದ ಪಟ್ಟಣದಲ್ಲಿ ಶುಕ್ರವಾರ ವಾಲ್ಮೀಕಿ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪುರಸಭೆ ಆವರಣದಲ್ಲಿ ಪ್ರಾರಂಭಗೊಂಡ ಮೆರವಣಿಗೆಗೆ ತಾಪಂ ಅಧ್ಯಕ್ಷೆ ಸುಮಿತ್ರ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ಚೋಮನಕುಣಿತ, ನಾಸಿಕ್ ಡೋಲ್, ವಾಲ್ಮೀಕಿ ಸ್ತಬ್ದಚಿತ್ರ, ಏಕಲವ್ಯ ಸ್ತಬ್ದಚಿತ್ರ, ವೀರ ಕುದುರೆ ಮೇಲೆ ಮದಕರಿ ವೇಷ ಇನ್ನಿತರ ಸ್ತಬ್ದಚಿತ್ರಗಳು ಆಕರ್ಷಣೆಯಾಗಿದ್ದವು.
ಚನ್ನಕೇಶವ ದೇವಾಲಯ ಸಮೀಪದ ಬಯಲು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವನ್ನು ಶಾಸಕ ವೈ.ಎನ್.ರುದ್ರೇಶಗೌಡ ಉದ್ಘಾಟಿಸಿ ಮಾತನಾಡಿ, ವಾಲ್ಮೀಕಿ ಹಿತವಚನದಲ್ಲಿ ಧರ್ಮ, ಸಂಸ್ಕೃತಿಯ ಬಗ್ಗೆ ಮಾರ್ಗಸೂಚಿಗಳನ್ನು ಹೇಳಲಾಗಿದೆ. ಇದನ್ನು ಪಾಲಿಸಿದರೆ ಎಲ್ಲರೂ ಸತ್ಯವಂತರಾಗಲು ಸಾಧ್ಯ. ವಾಲ್ಮೀಕಿ ಸಮಾಜ ಅರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮುಂದೆ ಬರಬೇಕು ಎಂದರು.
ಸಮಾಜದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುವುದು ಅವಶ್ಯಕವಾಗಿದೆ. ತಾಲೂಕಿನಲ್ಲಿ ವಾಲ್ಮೀಕಿ ಸಮುದಾಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ನಿವೇಶನ ಹಾಗೂ 10 ಲಕ್ಷ ರು ಅನುದಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಜಿಪಂ ಸದಸ್ಯರಾದ ಬಿ.ಡಿ.ಚಂದ್ರೇಗೌಡ, ಜಿ.ಟಿ.ಇಂದಿರಾ, ಹೇಮಾವತಿ, ಪುರಸಭೆ ಮಾಜಿ ಅಧ್ಯಕ್ಷ ಬಿ.ಸಿ.ಮಂಜುನಾಥ್, ಜೆಡಿಎಸ್ ಮುಖಂಡ ಕೆ.ಎಸ್.ಲಿಂಗೇಶ್, ತಾಪಂ ಉಪಾಧ್ಯಕ್ಷೆ ಕಮಲಮ್ಮ, ಪುರಸಭೆ ಸದಸ್ಯರಾದ ಜ್ಯೋತಿ, ಬಿ.ಎಲ್.ಧರ್ಮೇಗೌಡ, ತಾಪಂ ಸದಸ್ಯರಾದ ಪರ್ವತಯ್ಯ, ಕಮಲ ಚನ್ನಪ್ಪ, ಪದ್ಮಾಕ್ಷಿ, ತಹಸೀಲ್ದಾರ್ ರವಿಚಂದ್ರನಾಯಕ್, ಸಮಾಜ ಕಲ್ಯಾಣಾಧಿಕಾರಿ ಲಕ್ಷ್ಮೇಗೌಡ,ಪುರಸಭೆ ಮುಖ್ಯಾಧಿಕಾರಿ ಬಸವರಾಜು ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

