ಸರ್ಕಾರಿ ನೌಕರರಿಗೆ ಕನ್ನಡ ಅಂಚೆ ಶಿಕ್ಷಣ
ಕ.ಪ್ರ.ವಾರ್ತೆ , ಹಾಸನ , ಅ.18
ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಕನ್ನಡ ಬಾರದ ಎಲ್ಲಾ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ ನಡೆಸುತ್ತಿವೆ.
ರಾಜ್ಯದ ಎಲ್ಲಾ ನಗರಸಭೆ, ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆ, ವಿಶ್ವವಿದ್ಯಾಲಯಗಳು, ಶಾಲಾ - ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟ್ರೀಕೃತ ಬ್ಯಾಂಕುಗಳ ನೌಕರರು ನೊಂದಾಯಿಸಿಕೊಳ್ಳ ಬಹುದು. ನೊಂದಣಿಗೆ ಶುಲ್ಕ ಇರುವುದಿಲ್ಲ.
ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಿಗೆ ಹಾಜರಾಗುವಾಗ ಅವರ ಕಚೇರಿ ಗೈರುಹಾಜರಿಯನ್ನು ಅನ್ಯಕಾರ್ಯ ನಿಮಿತ್ತ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣದಲ್ಲಿ ಉತ್ತೀರ್ಣರಾದವರಿಗೆ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವಿನಾಯಿತಿ ಇರುತ್ತದೆ.
ಈ ಯೋಜನೆಯನ್ನು ಈಗ ಸಾರ್ವಜನಿಕರಿಗೂ ವಿಸ್ತರಿಸಲಾಗಿದೆ. ಇವರು ಎಸ್ಸೆಸ್ಸೆಲ್ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋವುತಿ 18ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಅರ್ಜಿ ಜೊತೆಯಲ್ಲಿ 250 ರು. ಡಿ.ಡಿ. ಕಳುಹಿಸಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಲಾಗುವುದು. ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುವುದು.
28ನೇ ತಂಡದ ತರಬೇತಿ ನವೆಂಬರ್‌ನಿಂದ ಆರಂಭವಾಗುತ್ತದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ, ಮಾನಸಗಂಗೋತ್ರಿ, ಮೈಸೂರು-570006 ಇವರಿಗೆ 5 ರು ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸದ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಪ್ರಭಾರಿ ಅಧಿಕಾರಿಯವರಿಗೆ ಅಕ್ಟೋಬರ್ 31 ರೊಳಗೆ ತಲುಪಿಸಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

