ಹೊಳೆನರಸೀಪುರದಲ್ಲಿ ಸಾಕ್ಷರತಾ ರಥಕ್ಕೆ ಚಾಲನೆ
ಹೊಳೆನರಸೀಪುರ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಕಂದಾಯ ಇಲಾಖೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ತಾಪಂ ಹಾಗೂ ರೋಟರಿ ಸಂಸ್ಥೆಯ ಆಶ್ರಯದಲ್ಲಿ ಕಾನೂನಿನ ಬಗ್ಗೆ ಅರಿವು ಮೂಡಿಸಲು ತಾಲೂಕಿನಲ್ಲಿ ಮೂರು ದಿನಗಳ ಸಂಚರಿಸಲಿರುವ ಕಾನೂನು ಸಾಕ್ಷರತಾ ರಥಕ್ಕೆ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಡಿ.ಕಂಬೇಗೌಡ ಚಾಲನೆ ನೀಡಿದರು.
ಪಟ್ಟಣದ ನ್ಯಾಯಾಲಯ ಆವರಣದಲ್ಲಿ ಶುಕ್ರವಾರ ಕಾನೂನು ಸಾಕ್ಷರತಾ ರಥಕ್ಕೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದ ನ್ಯಾಯಾಧೀಶರು, ಕಾನೂನು ಸಾಕ್ಷರತಾ ರಥವು ಮೂರು ದಿನಗಳ ಕಾಲ ತಾಲೂಕಿನ ಆಯ್ದ ಕಡೆಗಳಲ್ಲಿ ಸಂಚರಿಸಿ ಜನಸಾಮಾನ್ಯರಿಗೆ, ಅಶಕ್ತರಿಗೆ, ವಿದ್ಯಾರ್ಥಿಗಳಿಗೆ, ಮಹಿಳೆಯರಿಗೆ ಕಾನೂನಿನ ಕುರಿತಂತೆ ಅರಿವು ಮೂಡಿಸುವ ಯತ್ನ ನಡೆಸಲಿದೆ ಎಂದು ತಿಳಿಸಿದರು.
ಶುಕ್ರವಾರ ಕಾನೂನು ಸಾಕ್ಷರತಾ ರಥವು ತಾಲೂಕಿನ ದೊಡ್ಡಕಾಡನೂರು ಗ್ರಾಮಕ್ಕೆ ತೆರಳಿ ಅಲ್ಲಿನ ಗ್ರಾಮ ಪಂಚಾಯ್ತಿ ಆವರಣದಲ್ಲಿ ಹಾಗೂ ಆನೆಕನ್ನಂಬಾಡಿ ಗ್ರಾಮದ ಗ್ರಾಮ ಪಂಚಾಯ್ತಿ ಆವರಣದಲ್ಲಿ ಕಾನೂನಿನ ಅರಿವು ಕಾರ್ಯಕ್ರಮ ನಡೆಸಲಿದೆ ಎಂದರು.
19 ಶನಿವಾರ ಬೆಳಿಗ್ಗೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ನಂತರ ಪಟ್ಟಣದಲ್ಲಿನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಕುರಿತಂತೆ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಿ, ಮಧ್ಯಾಹ್ನ ನ್ಯಾಯಾಲಯದ ಆವರಣದಲ್ಲಿ ಸಾಕ್ಷರತಾ ರಥದಲ್ಲಿ ಜನತಾ ನ್ಯಾಯಾಲಯ ಹಮ್ಮಿಕೊಂಡು ಇಲ್ಲಿ ವಕೀಲರು ಮತ್ತು ಕಕ್ಷೀದಾರರ ಜೊತೆ ಸೇರಿ ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗುವುದು ಎಂದು ತಿಳಿಸಿದರು.
20ರಂದು ಕಾನೂನು ಸಾಕ್ಷರತಾ ರಥವು ತಾಲೂಕಿನ ಮೂಡಲಹಿಪ್ಪೆ, ಕಟ್ಟೇಬೆಳಗುಲಿ ಹಾಗೂ ಹಡವನಹಳ್ಳಿ ಗ್ರಾಮಗಳಿಗೆ ತೆರಳಿ ಕಾನೂನಿನ ಅರಿವು ಮೂಡಿಸಲಿದೆ ಎಂದು ಅವರು ತಿಳಿಸಿದರು. ಕಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶ ಸಿ.ವಿ.ಸನತ್, ವಕೀಲರ ಸಂಘದ ಅಧ್ಯಕ್ಷ ಆರ್.ಭಾಷ್ಯಂ, ಸಹಾಯಕ ಸರ್ಕಾರಿ ಅಭಿಯೋಜಕ ಮಲ್ಲಿಕಾರ್ಜುನ ದೊಡ್ಡಗೌಡರ್, ತಹಸೀಲ್ದಾರ್ ಶಿವಶಂಕರಪ್ಪ, ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಂಗರಾಜು, ಕ್ಷೇತ್ರ ಶಿಕ್ಷಣಾಧಿಕಾರಿ ಯೋಗೇಶ್, ಅಕ್ಷರ ದಾಸೋಹ ಅಧಿಕಾರಿ ಕುಮಾರ್, ಸಿಡಿಪಿಓ ಯಶೋಧಮ್ಮ, ತಮ್ಮಣ್ಣಗೌಡ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

