ವಾಲ್ಮೀಕಿ ರಾಮಾಯಣ ಜಗತ್ತಿಗೆ ವಿಶಿಷ್ಟ ಕೊಡುಗೆ: ಶಿವಲಿಂಗೇಗೌಡ
ಕ.ಪ್ರ.ವಾರ್ತೆ , ಅರಸೀಕೆರೆ , ಅ.18
ರಾಮಾಯಣದಂತಹ ಮಹಾನ್ ಗ್ರಂಥವನ್ನು ರಚಿಸುವ ಮೂಲಕ ವಾಲ್ಮೀಕಿ ಜಗತ್ತಿಗೆ ನೀಡಿದ ಕೊಡುಗೆ ಅಪಾರವಾಗಿದ್ದು ಅದನ್ನು ಯಾರೂ ಮರೆಯುವಂತಿಲ್ಲ. ಇಂತಹ ಯುಗಪುರುಷರ ಆಚರಣೆ ಸಂಪ್ರದಾಯವಾಗಿ ಬೆಳೆದು ಬಂದಿರುವುದು ಉತ್ತಮ ಬೆಳವಣಿಗೆ ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿಪ್ರಾಯಪಟ್ಟರು.
ತಾಲೂಕು ಆಡಳಿತ, ತಾಲೂಕು ಪಂಚಾಯ್ತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಾಲ್ಮಿಕಿ ಮಹಾಸಭಾ ಸಂಘದ ವತಿಯಿಂದ ಜೇನುಕಲ್ ನಗರ ಬಡಾವಣೆಯಲ್ಲಿರುವ ವಾಲ್ಮೀಕಿ ಸಮುದಾಯ ಭವನ ಸಮೀಪ ಶುಕ್ರವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಈ ಜಗತ್ತಿನಲ್ಲಿ ಅಧರ್ಮ ಅನಾಚಾರ, ಹಿಂಸೆಗಳು ಹೆಚ್ಚಾದಾಗ ಅದನ್ನು ನಿವಾರಿಸಲು ಮಹಾಪುರುಷರು ಜನ್ಮ ತಾಳುತ್ತಾರೆ ಎಂದರು.
ಮಹಾನ್ ವ್ಯಕ್ತಿಗಳಲ್ಲಿ ವಾಲ್ಮೀಕಿಯೂ ಒಬ್ಬರಾಗಿದ್ದು, ಅವರು ನೀಡಿರುವ ಮಹಾಕಾವ್ಯ ರಾಮಾಯಣ ಜಗತ್ತಿಗೆ ಆದರ್ಶಗಳನ್ನು ಸಾರುವ ಭವ್ಯ ಭಂಡಾರವಾಗಿದೆ. ಯಾರು ಭೂಮಿಯ ಮೇಲೆ ಉತ್ತಮ ಕೆಲಸಗಳನ್ನು ಮಾಡಬೇಕು ಎಂಬುದನ್ನು ಭಗವಂತನೇ ನಿರ್ಧರಿಸುತ್ತಾನೆ. ಆ ಕಾರ್ಯ ವಾಲ್ಮೀಕಿಯಿಂದ ಆಗಿರುವುದು ನಮ್ಮ ಪುಣ್ಯ ಎಂದು ಹೇಳಿದರು.
ಸಣ್ಣಪುಟ್ಟ ಕಾರಣಗಳಿಗಾಗಿ ಸಮಾಜದಲ್ಲಿ ಒಡಕುಂಟಾಗುವುದು ಸಹಜ. ಆದರೆ ಅದನ್ನು ಮರೆತು ಸಮಾಜದ ಎಲ್ಲಾ ಮುಖಂಡರನ್ನು ಒಗ್ಗಟ್ಟಾಗಿ ಕರೆದೊಯ್ಯುವ ಮೂಲಕ ಸಮಾಜದ ಹಿತಕಾಯಲು ಬದ್ದನಾಗಿದ್ದು ನನ್ನ ಅಧಿಕಾರಾವಧಿಯಲ್ಲಿ ಎಲ್ಲಾ ರೀತಿಯ ನೆರವು ಸಹಕಾರ ನೀಡಲು ಸಿದ್ದನಿದ್ದೇನೆ ತಾವುಗಳು ಕೂಡ ಈ ಬಗ್ಗೆ ಜಾಗೃತರಾಗಿರಬೇಕೆಂದು ಕಿವಿ ಮಾತು ಹೇಳಿದರು.
ಉಪನ್ಯಾಸಕ ಬಿ.ಡಿ.ಕುಮಾರ್ ವಾಲ್ಮೀಕಿ ಬದುಕು ಬರಹ ಅವರ ಜೀವನವನ್ನು ಕುರಿತಂತೆ ವಿಶೇಷ ಉಪನ್ಯಾಸ ನೀಡಿದರು. ಜಿಪಂ ಅದ್ಯಕ್ಷ ಬಿಳಿಚೌಡಯ್ಯ, ತಾಪಂ ಸದಸ್ಯ ಎಚ್.ಟಿ.ಶಿವಮೂರ್ತಿ, ಗೊಲ್ಲರಹಳ್ಳಿ ಹನುಮಪ್ಪ, ಮಾತನಾಡಿದರು.
ಜಿಪಂ ಸದಸ್ಯರು, ತಾಪಂ ಸದಸ್ಯರು, ಪುರಸಭಾ ಸದಸ್ಯರು, ಉಪ ತಹಶಿಲ್ದಾರ ಭಾಗ್ಯ, ತಾಲೂಕು ವಾಲ್ಮೀಕಿ ಸಮಾಜದ ಅಧ್ಯಕ್ಷ ಬಸವರಾಜು, ಮುಖಂಡರಾದ ಕರಿನಾಯಕ್ ಇನ್ನಿತರರು ಪಾಲ್ಗೊಂಡಿದ್ದರು. ಇದೇ ವೇಳೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯನ್ನು ಪಟ್ಟಣದ ಪ್ರವಾಸಿ ಮಂದಿರದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

