ಹೊಳೆನರಸೀಪುರ ತಾಲೂಕು ಬಿಜೆಪಿ ಕಾರ್ಯಕರ್ತರ ಸಭೆ
ಹೊಳೆನರಸೀಪುರ: ಬೆಂಗಳೂರಿನಲ್ಲಿ ನಡೆಯಲಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಸಮಾವೇಶ ಕುರಿತಂತೆ ಪೂರ್ವಭಾವಿಯಾಗಿ ಪಟ್ಟಣದ ಕೋಟೆ ಕಾಳಿಕಾಂಬ ದೇವಾಲಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ತಾಲೂಕು ಬಿಜೆಪಿ ಕಾರ್ಯಕರ್ತರ ಸಭೆಯನ್ನು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ, ಜಿಲ್ಲಾ ಉಸ್ತುವಾರಿ ವಹಿಸಿಕೊಂಡಿರುವ ಅಶ್ವತ್ಥ ನಾರಾಯಣ ಉದ್ಘಾಟಿಸಿದರು.
ಚಿಕ್ಕಮಗಳೂರು ಜಿಲ್ಲಾಧ್ಯಕ್ಷ ಪ್ರಾಣೇಶ್ ಮಾತನಾಡಿ, ರಾಜ್ಯ ಹಾಗೂ ಹಾಸನ ಜಿಲ್ಲೆಯಲ್ಲೂ ಸಹ ಬಿಜೆಪಿ ಪಕ್ಷಕ್ಕೆ ಹಾಗೂ ನರೇಂದ್ರ ಮೋದಿಯವರ ಪರ ಉತ್ತಮ ವಾತಾವರಣವಿದ್ದು, ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರೂ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಆದರೆ ನಮ್ಮ ಪಕ್ಷದ ಕಾರ್ಯಕರ್ತರಲ್ಲೇ ಆತ್ಮ ವಿಶ್ವಾಸದ ಕೊರತೆಯಿದ್ದು, ಆತ್ಮವಿಶ್ವಾಸ ತುಂಬಿಕೊಂಡು ಕೆಲಸ ಮಾಡಿದಲ್ಲಿ ಜಿಲ್ಲೆಯಲ್ಲಿ ಪಕ್ಷದ ಗೆಲುವು ಸಾಧ್ಯ ಎಂದರು.
ಇಂದು ಭಾರತೀಯರ ನಾಡಿಮಿಡಿತ ನರೇಂದ್ರ ಮೋದಿಯರು ಪ್ರಧಾನಮಂತ್ರಿಯಾಗಬೇಕು ಎಂಬುದಾಗಿದೆ.
ಕೇಂದ್ರ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಇದರ ದುರಾಡಳಿತದಿಂದ ಜನತೆ ಬೇಸತ್ತಿದ್ದಾರೆಂದ ಅವರು, ಜಿಲ್ಲೆಯಲ್ಲಿ ಭಯದ ವಾತಾವರಣವಿದ್ದು, ಜನತೆ ಮುಕ್ತವಾಗಿ ಬಿಜೆಪಿ ಪಕ್ಷದ ಪರ ಕೆಲಸ ಮಾಡುವುದು ಕಷ್ಟಕರವಾದ ವಾತಾವರಣವಿದ್ದರೂ, ಮುಂಬರಲಿರುವ ಲೋಕಸಭಾ ಚುನಾವಣೆಯಲ್ಲಿ ದೇಶದಾದ್ಯಂತ ಮತದಾರರು ನರೇಂದ್ರ ಮೋದಿಯವರನ್ನು ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪಕ್ಷಕ್ಕೆ ಮತ ನೀಡುವರೆಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.
ಇದೇ ವೇಳೆ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಬಿಜೆಪಿಯ ಸಂಘಟನಾ ಅಧ್ಯಕ್ಷ ಸುರೇಶ್ಬಾಬು, ರೇಣುಕುಮಾರ್, ನವಿಲೆ ಅಣ್ಣಪ್ಪ, ಪ್ರಸನ್ನಕುಮಾರ್, ತಾ. ಅಧ್ಯಕ್ಷ ಎಂ.ಎನ್.ರಾಜು, ತಾ. ಕಾರ್ಯದರ್ಶಿ ಎಂ.ಎನ್. ಮೈಲಾರಯ್ಯ, ಹಿರಿಯ ಮುಖಂಡ ಕೃಷ್ಣಪ್ಪ ಇದ್ದರು.
ಪಪೂ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ
ಜಾವಗಲ್: ಪ್ರತಿಯೊಬ್ಬರೂ ವಾಲ್ಮೀಕಿ ಬೋಧಿಸಿದ ತತ್ವಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕೆಂದು ಉಪ ಪ್ರಾಂಶುಪಾಲ ಯೋಗೀಶ್ ತಿಳಿಸಿದರು.
ಜಾವಗಲ್ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಲಾಗಿದ್ದ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮ, ಸೀತೆ ಲಕ್ಷ್ಮಣ ಅವರ ಆದರ್ಶ ಸರ್ವಕಾಲಿಕ. ಮಹಾ ಪುರುಷರ ಉತ್ಸವಗಳನ್ನು ಜಾತಿ, ಮತ, ಪಂಥ ಮರೆತು ಎಲ್ಲರೂ ಆಚರಿಸ ಬೇಕೆಂದರು.
ಹಿರಿಯ ಶಿಕ್ಷಕ ಪುಟ್ಟಶಂಕರಪ್ಪ, ರಾಮಲಿಂಗಪ್ಪ, ಮರುಳಸಿದ್ದಪ್ಪ, ಶಿವಲಿಂಗಮೂರ್ತಿ, ಚಂದ್ರೇಗೌಡ, ಸುನಂದ, ಜಯಲಕ್ಷ್ಮೀ, ವಿದ್ಯಾ ಸವಿತ ಮಾತನಾಡಿದರು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕ ಶಿವಣ್ಣ ಕಾರ್ಯಕ್ರಮ ಉದ್ಘಾಟಿಸಿ, ವಾಲ್ಮೀಕಿ ರಚಿಸಿದ ರಾಮಾಯಣವನ್ನು ಇಂದಿನ ಮಕ್ಕಳಿಗೆ ತಿಳಿಸ ಬೇಕು ಎಂದರು. ಎಸ್ಡಿಎಂಸಿ ಅಧ್ಯಕ್ಷ ಶ್ರೀನಿವಾಸಗೌಡ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಧರ್ಮಪ್ಪ, ಸರಸ್ವತಿ ಸರ್ವಮಂಗಳ ಮಾತನಾಡಿದರು.
ಸಮೀಪದ ನೇರ್ಲಿಗೆ ಗ್ರಾಮದಲ್ಲಿ ತಾ. ವಾಲ್ಮೀಕಿ ಸಂಘದ ಅಧ್ಯಕ್ಷ ನಾಯಕ್ ಅವರು ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನುಡಿದರು. ನಿವೃತ್ತ ಶಿರಸ್ತೇದಾರ್ ರಂಗಪ್ಪ ನಾಯಕ, ಶಂಕರ್, ರಂಗನಾಥ್, ರವಿಶಂಕರ್, ಲೋಕೇಶ್, ಸಮಾಜ ಬಾಂಧವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

