ಆರೋಗ್ಯ ಶಿಬಿರದಲ್ಲಿ 15 ವಿಭಾಗ: ಸ್ವಾಮೀಜಿ
ಚನ್ನರಾಯಪಟ್ಟಣ: ಪ್ರಸನ್ನ ಸೇವಾ ಸಮಿತಿ, ಆದಿಚುಂಚನಗಿರಿ ಆಸ್ಪತ್ರೆ,ಬಿಜಿಎಸ್ ಅಪೋಲೋ ಮೈಸೂರು, ಬಿ.ಜಿ ನಗರದ ವೈದ್ಯಕೀಯ ಕಾಲೇಜು ವತಿಯಿಂದ ಅ.22ರಂದು ಪಟ್ಟಣದ ಗಣಪತಿ ಪೆಂಡಾಲ್ ಎದುರಿನಲ್ಲಿರುವ ಪೇಟೆ ಶಾಲಾ ಆವರಣದಲ್ಲಿ ಆರೋಗ್ಯ ಉಚಿತ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ ಎಂದು ಆದಿಚುಂಚನಗಿರಿ ಹಾಸನ ಶಾಖಾ ಮಠಾಧೀಶ ಶಂಭುನಾಥ ಸ್ವಾಮೀಜಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ತಪಾಸಣಾ ಶಿಬಿರದಲ್ಲಿ 100ಕ್ಕೂ ಹೆಚ್ಚು ವೈದ್ಯರು ತಪಾಸಣಾ ಶಿಬಿರದಲ್ಲಿ ವಿವಿಧ ರೋಗಗಳಿಗೆ ಚಿಕಿತ್ಸೆ ಹಾಗೂ ಸಲಹೆಗಳನ್ನು ನೀಡಲು ಆಗಮಿಸುತ್ತಿದ್ದು ಜನತೆ ಇದರ ಪ್ರಯೋಜನ ಪಡೆಯುವಂತೆ ಕೋರಿದರು.
ಆರೋಗ್ಯ ಶಿಬಿರದಲ್ಲಿ ಎಲ್ಲಾ ರೀತಿಯ ಪರಿಕ್ಷೆಗಳನ್ನು ಮಾಡುವುದರಿಂದ ಖಾಯಿಲೆಗಳನ್ನು ತಿಳಿಯಬಹುದಾಗಿದ್ದು, ಇದಕ್ಕಾಗಿ 15 ವಿಭಾಗಗಳನ್ನು ತೆರೆಯಲಾಗಿದೆ ಎಂದರು.
ಪ್ರತಿ ವಿಭಾಗದಲ್ಲಿಯೂ ನುರಿತ ವೈದ್ಯರ ತಂಡ ಪರಿಕ್ಷೆ ನಡೆಸಲಿದ್ದು, ಸಲಹೆ ಹಾಗೂ ಔಷಧಿಗಳನ್ನು ನೀಡುವ ಅಗತ್ಯವಿದ್ದರೆ ಸ್ಥಳದಲ್ಲಿಯೇ ವ್ಯವಸ್ಥೆ ಮಾಡಲಾಗುವುದು. ಶಸ್ತ್ರಚಿಕಿತ್ಸೆ ಅಗತ್ಯವಿದ್ದರೆ ಅವರನ್ನು ತಮ್ಮ ಮಠದ ವಾಹನದಲ್ಲಿಯೇ ಕರೆದೊಯ್ದು ಶಸ್ತ್ರಚಿಕಿತ್ಸೆ ಮಾಡಿ ಅವರಿಗೆ ಉಚಿತವಾಗಿ ಸೇವೆ ನೀಡಿ ತಮ್ಮ ವಾಹನದಲ್ಲಿಯೇ ಕರೆ ತಂದು ಪಟ್ಟಣಕ್ಕೆ ಬಿಡಲಾಗುವುದು ಎಂದರು.
ಆರೋಗ್ಯ ಶಿಬಿರಕ್ಕೆ 10ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು, ಅದಕ್ಕಾಗಿ ಎಲ್ಲಾ ಸಿದ್ದತೆ ನಡೆಯುತ್ತಿದೆ. ಜಿಲ್ಲೆಯ ಬೇಲೂರು, ಸಕಲೇಶಪುರ, ಅರಕಲಗೂಡು, ಅರಸೀಕೆರೆಗಳಲ್ಲಿ ಆರೋಗ್ಯ ಶಿಬಿರಗಳನ್ನು ನೆರವೇರಿಸಲಾಗಿದೆ ಎಂದು ತಿಳಿಸಿದರು. ಕೆಲವರು ಆಯುರ್ವೇದ ಚಿಕಿತ್ಸೆ ಪಡೆಯಲು ಇಚ್ಛಿಸುತ್ತಿರುವುದರಿಂದ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಜತೆ ಚರ್ಚಿಸಿ ಹಾಸನದಲ್ಲಿರುವ ಆಯುರ್ವೇದ ಆಸ್ಪತ್ರೆ ವತಿಯಿಂದ ಪ್ರತ್ಯೇಕ ಕೌಂಟರ್ ತೆರೆಯಲಾಗುವುದು ಎಂದು ಹೇಳಿದರು.
ಗಣಪತಿ ಸೇವಾ ಸಮಿತಿ ಗೌರವಾಧ್ಯಕ್ಷ ಪಟೇಲ್ ಮಂಜುನಾಥ್, ಅಧ್ಯಕ್ಷ ಸಿ.ಎನ್ ಅಶೋಕ್, ಸತ್ಯನಾರಾಯಣ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

