ಹಾಸನ

ಭಾರತದಲ್ಲಿ ನ್ಯಾಯಾಂಗದ ಕ್ರಿಯಾಶೀಲತೆ: ವಿಚಾರ ಸಂಕಿರಣ

Published On :

ಕನ್ನಡಪ್ರಭ ವಾರ್ತೆ ಹಾಸನ ಅ.19
ಪ್ರಸ್ತುತ ರಾಜಕೀಯ ವ್ಯವಸ್ಥೆ ಮತ್ತು ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಬಗ್ಗೆ ಪ್ರತಿ ವಿದ್ಯಾರ್ಥಿ ತಿಳಿದುಕೊಂಡು ಚರ್ಚೆ ಮಾಡಬೇಕೆಂದು ಪ್ರಾಂಶುಪಾಲೆ ಡಾ.ಜೆ.ಶೈಲಜಾಕುಮಾರಿ ತಿಳಿಸಿದರು.
ನಗರದ ಎ.ವಿ.ಕಾಂತಮ್ಮ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಏರ್ಪಡಿಸಿದ್ದ ಭಾರತದಲ್ಲಿ ನ್ಯಾಯಾಂಗದ ಕ್ರಿಯಾಶೀಲತೆಯ ಕುರಿತ ವಿಚಾರ ಸಂಕಿರಣದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿನಿ ಶಾಯಿಸ್ತ ಸುಮನ್, ಗೀತಾ, ನಯನ ಮತ್ತು ದಿವ್ಯ  ಮಾತನಾಡಿ, ಆಧುನಿಕ ಪ್ರಜಾಪ್ರಭುತ್ವ ಯುಗವು ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿದ್ದು ಅದರಲ್ಲೂ ಅತಿ ಮುಖ್ಯವಾಗಿ ನ್ಯಾಯಾಂಗ ವ್ಯವಸ್ಥೆಯ ಪ್ರಸುತ್ತ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಶಾಸಕಾಂಗ, ಕಾರ್ಯಾಂಗ ತಮ್ಮ ಕಾರ್ಯವನ್ನು ಮರೆತಾಗ ಎಚ್ಚರಿಕೆ ನೀಡುವ ಅಂಗವಾಗಿ ಪ್ರಸುತ್ತ ನ್ಯಾಯಾಂಗ ಸ್ವತಂತ್ರ ಹಾಗೂ ನಿಷ್ಪಕ್ಷಪಾತವಾಗಿದ್ದು, 1990ರ ನಂತರ ಸಾರ್ವಜನಿಕ ಹಿತಾಸಕ್ತಿ ದಾವೆಗಳಿಗೆ ಮತ್ತು ಮಾಹಿತಿ ಹಕ್ಕು ಕಾಯಿದೆಗೆ ಸುಪ್ರೀಂಕೋರ್ಟ್ ಹೆಚ್ಚು ಮನ್ನಣೆಯನ್ನು ನೀಡುವ ಮೂಲಕ ಅನೇಕ ಭ್ರಷ್ಟಾಚಾರದ ಪ್ರಕರಣಗಳಾದ ಮೈನಿಂಗ್, ಮೇವು ಹಗರಣ, ಕಲ್ಲಿದ್ದಿಲು ಹಗರಣಗಳನ್ನು ಬಯಲಿಗೆ ಎಳೆಯುವ ಮೂಲಕವಾಗಿ ಪ್ರಜೆಗಳು ನ್ಯಾಯಿಕ ವ್ಯವಸ್ಥೆಯ ಕಡೆಗೆ ತಿರುಗಿ ನೋಡುವಂತೆ ಮಾಡಿದೆ ಎಂದು ತಿಳಿಸಿದರು.
ರಾಜ್ಯಶಾಸ್ತ್ರದ ಸಹ ಪ್ರಾಧ್ಯಾಪಕ ಡಾ.ಎಚ್.ಕೆ.ಕುಶಾಲಪ್ಪ, ಡಾ.ಡಿ.ಜಯದೇವೇಗೌಡ  ಹಾಗೂ ಉಪನ್ಯಾಸಕಿ  ಪುನೀತ ಮಾತನಾಡಿದರು.  ಶಾಯಿಸ್ತ ಸುಮನ್ ನಿರೂಪಿಸಿದರು. ಅಶ್ವಿನಿ ಸ್ವಾಗತಿಸಿದರು. ದಿವ್ಯ ವಂದಿಸಿದರು.

ಮೊರಾರ್ಜಿ ವಸತಿ ಶಾಲೆ ನೌಕರರ ಸಮಾವೇಶ ನಾಳೆ
ಹಾಸನ:
ಮೊರಾರ್ಜಿ ಹಾಸ್ಟೆಲ್ ಹಾಗೂ ವಸತಿ ಶಾಲೆಗಳಲ್ಲಿ ದಿನಗೂಲಿ, ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ನಿಗದಿತ ಕನಿಷ್ಠ ವೇತನ, ಭವಿಷ್ಯ ನಿಧಿ, ಕೆಲಸ, ಭದ್ರತೆ, ಕಾಯಂ ಹಾಗೂ ಇನ್ನಿತರೆ ಸೇವಾ ಸೌಲಭ್ಯಗಳಿಗೆ ಆಗ್ರಹಿಸಿ, ಹಾಸನ ಜಿಲ್ಲಾ ಹಾಸ್ಟೆಲ್ ಹಾಗೂ ವಸತಿ ಶಾಲೆ ನೌಕರರ ಜಿಲ್ಲಾ ಸಮಾವೇಶ ಸಿಐಟಿಯು ನೇತೃತ್ವದಲ್ಲಿ ಅ. 21ರಂದು ಬೆಳಗ್ಗೆ 10.30ಕ್ಕೆ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ನಡೆಯಲಿದೆ. ಸಿಐಟಿಯು ರಾಜ್ಯ ಸಮಿತಿ ಉಪಾಧ್ಯಕ್ಷ ಕಾಮ್ರೇಡ್ ಸುಕುಮಾರ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಪುರುಷೋತ್ತಮ್,  ಜಿಲ್ಲಾ ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಅಧಿಕಾರಿ ಸಿ.ಕೆ.ಜಗದೀಶ್ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.