ರಾಮಮಂದಿರ ನಿರ್ಮಾಣಕ್ಕೆ ಶಕ್ತಿ ತುಂಬಲು ಸಂಕಲ್ಪ ಸಭೆ
ಕನ್ನಡಪ್ರಭ ವಾರ್ತೆ ಸಕಲೇಶಪುರ ಅ.19
ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಬೇಕಾದ ಶಕ್ತಿ ತುಂಬಲು ಸಂಕಲ್ಪ ಸಭೆಯನ್ನು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಏರ್ಪಡಿಸಲಾಗಿತ್ತು.
ಪಟ್ಟಣದ ಸಕಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ರಾಮಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕು ಸಂಘ ಪರಿವಾರದ ಮುಖಂಡ ರಘು ಮಾತನಾಡಿ, ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟಲು ಶಕ್ತಿ ತುಂಬಲು ಮಹರ್ಷಿ ವಾಲ್ಮೀಕಿ ಜನ್ಮ ದಿನಾಚರಣೆಯ ದಿನದಂದು ದೇಶಾದ್ಯಂತ ಏಕ ಕಾಲದಲ್ಲಿ ಪೂಜಾದಿಗಳನ್ನು ಹಾಗೂ ಸಂಕಲ್ಪ ಸಭೆಯನ್ನು ಏರ್ಪಡಿಸಲಾಗಿದ್ದು ಈ ನಿಟ್ಟಿನಲ್ಲಿ ಇಲ್ಲೂ ಸಹ ಈ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಹಿಂದೂಗಳ ಪವಿತ್ರ ಸ್ಥಳ ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿಯಲ್ಲಿ ದೇವಸ್ಥಾನ ಕಟ್ಟಲು ನೂರಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದೆ. ಆದರೆ ಇಂದಿಗೂ ರಾಮ ಮಂದಿರ ಕಟ್ಟಲು ಆಗಿರುವುದಿಲ್ಲ. ಸಾವಿರಾರು ರಾಮ ಭಕ್ತರು ರಾಮಮಂದಿರಕ್ಕಾಗಿ ನಡೆದ ಹೋರಾಟದಲ್ಲಿ ಸಾವನ್ನಪ್ಪಿದ್ದು ಇವರೆಲ್ಲರ ಆತ್ಮಕ್ಕೆ ಶಾಂತಿ ಸಿಗುವುದು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದಾಗ ಮಾತ್ರ. ಈ ನಿಟ್ಟಿನಲ್ಲಿ ನಾವೆಲ್ಲರೂ ರಾಮ ಮಂದಿರ ನಿರ್ಮಾಣ ಮಾಡುವುದಕ್ಕಾಗಿ ದೃಢ ಸಂಕಲ್ಪ ಮಾಡೋಣ ಎಂದು ಹೇಳಿದರು.
ಕೇಂದ್ರ ಸರ್ಕಾರ ಸುಪ್ರಿಂ ಕೋರ್ಟ್ಗೆ ನೀಡಿದ ವಾಗ್ದಾನ ಶ್ರೀ ರಾಮ ಜನ್ಮಸ್ಥಾನವನ್ನು ಭವ್ಯ ಮಂದಿರ ನಿರ್ಮಾಣಕ್ಕಾಗಿ ಹಿಂದೂಗಳಿಗೆ ಒಪ್ಪಿಸುವಂತೆ, ಸರ್ಕಾರ ರಾಮಜನ್ಮಭೂಮಿ ಪ್ರದೇಶದಲ್ಲಿ ಸ್ವಾಧೀನ ಪಡಿಸಿಕೊಂಡ 70 ಎಕರೆ ಭೂಮಿಯನ್ನು ಮಂದಿರ ನಿರ್ಮಾಣಕ್ಕಾಗಿ ಮರಳಿಸುವಂತೆ ಸಂಸತ್ತಿನ ಕಾನೂನಿನ ಮೂಲಕ ಮಂದಿರ ನಿರ್ಮಾಣ ಮಾರ್ಗ ಸುಗಮಗೊಳಿಸುವಂತೆ, ಅದನ್ನು ಬಲಗೊಳಿಸುವ ಸಂಕಲ್ಪವನ್ನು ಮಾಡಬೇಕು ಹಾಗೂ ಭವ್ಯವಾದ ರಾಮಮಂದಿರ ನಿರ್ಮಾಣ ಆಗುವವರೆಗೆ ತನು ಮನ ಧನಪೂರ್ವಕವಾಗಿ ಈ ಕಾರ್ಯದಲ್ಲಿ ಪ್ರತಿಯೊಬ್ಬರೂ ತೊಡಗಿಕೊಳ್ಳಬೇಕೆಂದು ಹೇಳಿದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಸಂತೋಷ್, ವಿಎಚ್ಪಿ ತಾಲೂಕು ಗೌರವ ಅಧ್ಯಕ್ಷ ಬಾಬುಜಿ ನಗರ್ವಾಲ್, ವಿಎಚ್ಪಿ ತಾಲೂಕು ಕಾರ್ಯದರ್ಶಿ ಸುಧೀರ್, ಬಜರಂಗದಳ ಜಿಲ್ಲಾ ಸಂಚಾಲಕ ವಿಜಯಕುಮಾರ್,ಬಜರಂಗದಳ ತಾಲೂಕು ಸಂಚಾಲಕ ಧರ್ಮೇಶ್, ಹಾಗೂ ಮುಖಂಡ ರಾಜಣ್ಣ, ಕಾರ್ತೀಕ್, ಸಂತೋಷ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

