ಹಾಸನ

ನೇಮಕಾತಿಗಾಗಿ ಸುಳ್ಳು ವಾಸಸ್ಥಳ ದೃಢೀಕರಣ ಪತ್ರ: ದಸಂಸ ಆರೋಪ

Published On :

ಹಾಸನ: ಎಲ್‌ಪಿಜಿ ವಿತರಕರ ನೇಮಕಾತಿಗಾಗಿ ಪೇದೆಯೊಬ್ಬರು ಒಂದೇ ವಾರದಲ್ಲಿ ಎರಡು, ಮೂರು ಸುಳ್ಳು  ವಾಸಸ್ಥಳದ ದೃಢೀಕರಣ ಪತ್ರ ತೆಗೆದುಕೊಂಡು ಸರ್ಕಾರ ಮತ್ತು ಸಾರ್ವಜನಿಕರನ್ನು ವಂಚಿಸಿದ್ದಾರೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಅರೇಹಳ್ಳಿ ನಿಂಗರಾಜ್ ಆರೋಪಿಸಿದ್ದಾರೆ.
ಅರಕಲಗೂಡು ತಾಲೂಕು ಕೊಣನೂರು ಗ್ರಾಮದಲ್ಲಿ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೋರೇಷನ್‌ನಿಂದ ಎಲ್‌ಪಿಜಿ ವಿತರಕರ ನೇಮಕಾತಿಗಾಗಿ ಪರಿಶಿಷ್ಟ ಜಾತಿಯ ಅರ್ಹ ನಿರುದ್ಯೋಗಿ ಸ್ಥಳೀಯ ನಿವಾಸಿಗಳಿಂದ ಅರ್ಜಿ ಕರೆಯಲಾಗಿದೆ.
  ಈ ಯೋಜನೆಯ ಸದುಪಯೋಗ ಪಡೆದುಕೊಳ್ಳಲು ಸ್ಥಳೀಯ ಪರಿಶಿಷ್ಟ ಜಾತಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಆದರೆ ಸ್ಥಳೀಯ ನಿವಾಸಿಗಳಲ್ಲದ ಹಾಗೂ ರಾಮನಾಥಪುರ ವಾಸಿ ಪೇದೆ ಚಂದ್ರಮೌಳಿ ಅವರು ಅರ್ಜಿ ಸಲ್ಲಿಸಿದ್ದಾರೆ ಎಂದು ದೂರಿದ್ದಾರೆ.
ಚಂದ್ರಮೌಳಿ ಅವರು ಕಂದಾಯ ಇಲಾಖೆಯ ಸಂಬಂಧಪಟ್ಟ ನೌಕರರಿಗೆ ಬೆದರಿಕೆಯೊಡ್ಡಿ ಮತ್ತು ಲಂಚ ನೀಡಿ ಸುಳ್ಳು ವಾಸದ ದೃಢೀಕರಣ ಪತ್ರಗಳನ್ನು ಪಡೆದುಕೊಂಡು ಒಂದೇ ವಾರದಲ್ಲಿ ಎರಡು ಮೂರು ವಾಸಸ್ಥಳದ  ಪ್ರಮಾಣ ಪತ್ರ ತೆಗೆದುಕೊಂಡು ವಂಚಿಸಿದ್ದಾರೆ. ಇದರಿಂದ ನಿಜವಾದ ಅರ್ಹ ನಿರುದ್ಯೋಗಿ ಫಲಾನುಭವಿಗಳಿಗೆ  ಅನ್ಯಾಯವಾಗುತ್ತಿದೆ ಎಂದು ತಿಳಿಸಿದ್ದಾರೆ.
ಸುಳ್ಳು ದಾಖಲೆಗಳನ್ನು  ನೀಡಿ ವಂಚನೆ ಮಾಡಿರುವ ಪೊಲೀಸ್ ಪೇದೆ ಚಂದ್ರಮೌಳಿ ಅವರ ಮೇಲೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಎಸ್ಪಿ ಕ್ರಮ ಕೈಗೊಳ್ಳಬೇಕು ಮತ್ತು ಈ ಯೋಜನೆಯ ಸ್ಥಳೀಯ ನಿವಾಸಿ ಅರ್ಹ ಫಲಾನುಭವಿ ಮಹೇಶ್ ಅವರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಒತ್ತಾಯಿಸಿದ್ದಾರೆ.

ಸಚಿವ ಯು.ಟಿ.ಖಾದರ್ ಪ್ರವಾಸ
ಹಾಸನ: ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಅ. 21ರಂದು ಹಾಸನಕ್ಕೆ ಆಗಮಿಸಿ ವಾಸ್ತವ್ಯ ಮಾಡುವರು. 22 ರಂದು ಬೆಳಿಗ್ಗೆ 10 ಕ್ಕೆ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಹಾಸನ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ನಂತರ ಸಚಿವರು ಮಧ್ಯಾಹ್ನ 1.30ಕ್ಕೆ ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್‌ಣನ ಆದಿಚುಂಚನಗಿರಿ ಮಠಕ್ಕೆ ಪ್ರಯಾಣ ಬೆಳೆಸುವರು.

ಇಂದು ಪೊಲೀಸ್ ಹುತಾತ್ಮರ ದಿನಾಚರಣೆ
ಹಾಸನ: ಜಿಲ್ಲಾ ಪೊಲೀಸ್ ಇಲಾಖೆಯಿಂದ ಅ. 21ರಂದು ಬೆಳಿಗ್ಗೆ 8 ಕ್ಕೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ(ಡಿ.ಎ.ಆರ್.) ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಲಿದೆ. ಜಿಲ್ಲಾ ನ್ಯಾಯಾಧೀಶ ಬಿ.ಎಸ್. ಸೋಮಶೇಖರ್ ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ವಿ. ಅನ್ಬುಕುಮಾರ್ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಉಪೇಂದ್ರ ಪ್ರತಾಪಸಿಂಗ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.