ಪರಿಶಿಷ್ಟರ ಕುಂದುಕೊರತೆ ನಿವಾರಣೆಗೆ ಅದಾಲತ್ ನಡೆಸಲು ಶಾಸಕ ಸೂಚನೆ
ಕನ್ನಡಪ್ರಭ ವಾರ್ತೆ ಸಕಲೇಶಪುರ ಅ.21
ತಾಲೂಕಿನಲ್ಲಿ ಪ್ರತಿ ಹೋಬಳಿ ಮಟ್ಟದಲ್ಲಿ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆಗಳ ನಿವಾರಣೆಗಾಗಿ ಅದಾಲತ್ ನಡೆಸುವಂತೆ ಶಾಸಕ ಎಚ್.ಕೆ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಪಟ್ಟಣದ ಮಿನಿ ವಿದಾನ ಸೌಧ ಸಭಾಂಗಣದಲ್ಲಿ ತಾಲೂಕು ಮಟ್ಟದ ತ್ರೈಮಾಸಿಕ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕು ಕೇಂದ್ರದಲ್ಲಿ ನಡೆಯುವ ಸಭೆಯಲ್ಲಿ ಎಲ್ಲರಿಗೂ ಭಾಗವಹಿಸಲು ಸಾಧ್ಯವಾಗದಿರುವುದರಿಂದ ಆಯಾ ಹೋಬಳಿ ಮಟ್ಟದಲ್ಲಿ ಸಭೆ ನಡೆಸುವುದರಿಂದ ಕುಂದು-ಕೊರತೆ ನಿವಾರಣೆಗೆ ಪ್ರಯೋಜನವಾಗಲಿದೆ ಎಂದರು.
ತಾಲೂಕಿನಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಸುಮಾರು 370 ಜೀತದಾಳುಗಳಿಗೆ ಪುನರ್ವಸತಿ ಸೇರಿದಂತೆ ಎಲ್ಲಾ ನೆರವು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪಟ್ಟಣದ ಹೃದಯ ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಅಂಬೇಡ್ಕರ್ ಭವನದ ಕಾಮಗಾರಿಯನ್ನು ಪರಿನಿಬ್ಬಾಣ ದಿನವಾದ ಡಿಸೆಂಬರ್ 6 ರೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಯಿತು.
ತಾಲೂಕಿನಲ್ಲಿ ಪರಿಶಿಷ್ಟ ವರ್ಗದವರು ಹಲವಾರು ವರ್ಷಗಳಿಂದ ಅರಣ್ಯ ಭೂಮಿಯಲ್ಲಿ ಸಾಗುವಳಿ ಮಾಡುತ್ತಿದ್ದು ಇತರೆ ಜನಾಂಗದವರನ್ನು ಹೊರತುಪಡಿಸಿ ಇಲಾಖೆಯವರು ದಲಿತರಿಗೆ ಮಾತ್ರ ಕಿರುಕುಳ ನೀಡುತ್ತಿದ್ದು ಕೂಡಲೇ ಇದನ್ನು ನಿಲ್ಲಿಸುವಂತೆ ಸಭೆಯಲ್ಲಿ ದಲಿತ ಮುಖಂಡರು ಆಗ್ರಹಿಸಿದರು.
ತಹಸೀಲ್ದಾರ್ ಪಾರ್ವತಿ, ಉಪ ತಹಸೀಲ್ದಾರ್ ಪುಟ್ಟಶೆಟ್ಟಿ, ಸಮಾಜ ಕಲ್ಯಾಣ ಅಧಿಕಾರಿ ನಾಗರಾಜ್,ತಾಪಂ ಸದಸ್ಯ ಬಿ.ಸಿದ್ದಯ್ಯ, ವಿವಿಧ ಇಲಾಖಾ ಅಧಿಕಾರಿಗಳು,ತಾಲೂಕಿನ ವಿವಿಧ ದಲಿತ ಸಂಘಟನೆ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

