30 ವರ್ಷ ಮೀರಿದವರಿಗೆ ಉಚಿತ ಆರೋಗ್ಯ ತಪಾಸಣೆ: ಸಚಿವ ಖಾದರ್
ಚನ್ನರಾಯಪಟ್ಟಣ: ರಾಜ್ಯದಲ್ಲಿ 30 ವರ್ಷ ಮೀರಿದವರಿಗೆ ಉಚಿತ ರೋಗ್ಯ ತಪಾಸಣೆ ನಡೆಸಲು ಚಿಂತಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ ಖಾದರ್ ತಿಳಿಸಿದರು.
ಇಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, 30 ವರ್ಷ ದಾಟಿದ ಶೇ.50ಕ್ಕೂ ಹೆಚ್ಚು ಮಂದಿಗೆ ಯಾವುದಾದರೊಂದು ರೋಗದ ಸೂಚನೆಗಳು ಕಾಣಿಸಿಕೊಳ್ಳುತ್ತಿವೆ. ಇದು ಅರಿವಿಗೆ ಬಾರದೇ ರೋಗಗಳು ಉಲ್ಬಣಗೊಳ್ಳುವಂತಾಗುತ್ತಿದೆ. 30ರ ನಂತರವೇ ಕಾಣಿಸಿಕೊಳ್ಳುವ ರಕ್ತದೊತ್ತಡ, ಮಧುಮೇಹ ಸೇರಿದಂತೆ ಹಲವು ರೋಗಗಳ ಬಗ್ಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ ಆಯಾ ವ್ಯಾಪ್ತಿಗೆ ಬರುವ ಎಲ್ಲ ಮನೆಗಳಿಗೆ ತೆರಳಿ ಉಚಿತ ತಪಾಸಣೆ ನಡೆಸಲು ಉದ್ದೇಶಿಸಲಾಗಿದೆ ಎಂದರು.
ತಪಾಸಣೆ ನಂತರ ರೋಗದ ಬಗ್ಗೆ ಜನರಲ್ಲಿ ಅಗತ್ಯ ಅರಿವು ಮೂಡಿಸಿ, ಆರೋಗ್ಯ ಸುಧಾರಿಸಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡುವ ಜತೆಗೆ ಚಿಕಿತ್ಸೆಗೂ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಸರ್ಕಾರಿ ಆಸ್ಪತ್ರೆಗಳಲ್ಲಿಂದು ಒಂದೇ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಆಯುರ್ವೇದಿಕ್, ಯುನಾನಿ, ಹೋಮಿಯೋಪತಿ ಕೇಂದ್ರಗಳನ್ನು ತೆರೆಯಲಾಗುವುದು. ಕಡಿಮೆ ದರದ ಔಷಧಿಗೆ ಪ್ರತ್ಯೇಕ ವಿಭಾಗ ತೆರೆಯಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

