ವೀರೇಂದ್ರ ಹೆಗ್ಗಡೆಯವರ ಮೇಲೆ ವ್ಯವಸ್ಥಿತ ಅಪಪ್ರಚಾರ: ಖಂಡನೆ
ಹಾಸನ: ಸರ್ವಧರ್ಮಗಳ ಸಮನ್ವಯಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರ ಬಗ್ಗೆ ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ ಎಂದು ವಿಶ್ವ ಮಾನವ ಒಕ್ಕೂಟದ ಅಧ್ಯಕ್ಷ ಎಚ್.ಎನ್.ರವಿಕುಮಾರ್ ತಿಳಿಸಿದ್ದಾರೆ.
ಅಭಿವೃದ್ಧಿ ಕಾರ್ಯಗಳ ಹರಿಕಾರರಾಗಿ, ಜಾತ್ಯತೀತ ಗುಣದಿಂದ ಕರ್ನಾಟಕದ ಧಾರ್ಮಿಕ ಸಂತನಾಗಿ ಜನಮನದಲ್ಲಿ ನೆಲೆ ನಿಂತಿರುವ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ವಿಷಾದನೀಯ ಎಂದಿದ್ದಾರೆ.
ಕ್ಷೇತ್ರದಲ್ಲಿ ನಡೆಯುವ ಪ್ರತಿ ಕಾರ್ಯವು ದೇಶಕ್ಕೆ ಮಾದರಿಯಾಗಿದೆ. ಹೆಗ್ಗಡೆಯವರ ಶಿಸ್ತಿನ ಆಡಳಿತ, ಅಭಿವೃದ್ಧಿ ಕಾರ್ಯಗಳನ್ನು ಸಹಿಸದ ಅಸೂಯಾಪರರ ಒಂದು ಗುಂಪು ಸೌಜನ್ಯ ಕೊಲೆ ವಿಷಯದಲ್ಲಿ ಖಾಸಗಿ ಮಾಧ್ಯಮ ದುರುಪಯೋಗ ಪಡಿಸಿಕೊಂಡು ಅವಹೇಳನಕಾರಿಯಾಗಿ ಟೀಕಿಸುತ್ತಿರುವುದು ಯಾರೂ ಒಪ್ಪುವ ವಿಚಾರವಲ್ಲ ಎಂದು ಹೇಳಿದ್ದಾರೆ.
ಹೆಣ್ಣು ಮಗಳ ವಿಷಯದಲ್ಲಿ ನಿಷ್ಪಕ್ಷ ತನಿಖೆಗೆ ಆಗ್ರಹಿಸಿರುವುದು ಅವರ ಪಾರದರ್ಶಕ ಮನಸ್ಸನ್ನು ಬಿಂಬಿಸುತ್ತದೆ. ಧರ್ಮ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿ ಕೊಂಡು ಲೋಕ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಡುವ ಹೆಗ್ಗಡೆ ಮೇಲೆ ಕ್ಷುಲ್ಲಕ ಆರೋಪ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

