ಹಾಸನ

ಒತ್ತುವರಿ ಭೂಮಿ ತೆರವಿಗೆ ವಿಳಂಬ; ಇಂದು ಪ್ರತಿಭಟನೆ

Published On :

ಕನ್ನಡಪ್ರಭ ವಾರ್ತೆ ಸಕಲೇಶಪುರ ಅ.23
ಒತ್ತುವರಿ ಭೂಮಿ ತೆರವುಗೊಳಿಸಲು ತಾಲೂಕು ಆಡಳಿತ ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ತಾಲೂಕು ಕಚೇರಿ ಎಂದರು ಗುರುವಾರ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಳಲಿ ಗ್ರಾಪಂ ಅಧ್ಯಕ್ಷ ರಘು ಹೇಳಿದ್ದಾರೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳಲಿ ಗ್ರಾಪಂ ವ್ಯಾಪ್ತಿಯ ಮಠಸಾಗರ, ಕೊಲ್ಲಹಳ್ಳಿ ,ಮಳಲಿ, ಕಬ್ಬಿನಗದ್ದೆ ಗ್ರಾಮಗಳಲ್ಲಿ ಸುಮಾರು 70 ಎಕರೆಗೂ ಹೆಚ್ಚಿನ ಗ್ರಾಮಠಾಣಾ, ಗೋಮಾಳ, ಸ್ಮಶಾನ ಭೂಮಿ ಹಾಗೂ ಕೆರೆಗಳನ್ನು ಒತ್ತುವರಿ ಮಾಡಲಾಗಿದ್ದು, ಗ್ರಾಪಂ.ಗಳ ಸರ್ಕಾರ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರಿ ಭೂಮಿ ಇಲ್ಲದಾಗಿದೆ. ಆದ್ದರಿಂದ ಈ ಬಗ್ಗೆ ಕಳೆದ ಹಲವು ವರ್ಷಗಳ ಹಿಂದೆ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಒತ್ತುವರಿ ತೆರವು ಕಾರ್ಯ ನಡೆಸಲು ನಿರ್ಣಯ ಕೈಗೊಳ್ಳಲಾಗಿದ್ದು, ತಾಲೂಕು ಕಚೇರಿಗೆ ಮನವಿ ನೀಡಿಲಾಗಿದೆ. ಆದರೆ ಇದುವರಗೆ ಯಾವುದೆ ಕ್ರಮ ಕೈಗೊಳ್ಳಲಾಗಿಲ್ಲ. ಆ ಕಾರಣದಿಂದ ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದ್ದು, ಗೃಹ ನಿರ್ಮಾಣಕ್ಕೆ ಉಪಯೋಗಿಸಲಾಗುವ ಗುದ್ದಲಿ, ಕತ್ತಿ, ಬಾಂಡಲಿಗಳನ್ನು ತಾಲೂಕು ಕಚೇರಿ ಎದುರು ಪ್ರದರ್ಶಿಸುವ ಮೂಲಕ ಪ್ರತಿಭಟನೆ ನಡೆಸಲಾಗುವುದು. ಪ್ರತಿಭಟನೆಗೂ ಮುನ್ನ ಪಟ್ಟಣದ ಗುಹೇಕಲ್ಲಮ್ಮ ದೇವಸ್ಥಾನದಿಂದ ಮೆರಣಿಗೆಯಲ್ಲಿ ತೆರಳಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ಎಪಿಎಂಸಿ ಸದಸ್ಯ ಸಲೀಂ, ಗ್ರಾಪಂ ಸದಸ್ಯರಾದ ಚಂದ್ರಶೇಖರ್, ಸುನಿಲ್, ಗ್ರಾಮಸ್ಥ ಇಬ್ರಾಹಿಂ ಇದ್ದರು.

ಸಭೆಗೆ ಗೈರು; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸೂಚನೆ
ಆಲೂರು:
ಸಭೆಗೆ ಗೈರು ಹಾಜರಾಗಿರುವ ತಾಲೂಕು ಮಟ್ಟದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವುದಾಗಿ ತಹಸೀಲ್ದಾರ್ ಶಾರದಾಂಬ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಿಸುವ ಸಂಬಂಧ  ಮಂಗಳವಾರ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ವಾಲ್ಮೀಕಿ ಜಯಂತಿಯಲ್ಲಿಯೇ ಎಲ್ಲಾ ಅಧಿಕಾರಿಗಳಿಗೂ ಎಚ್ಚರಿಸಿದ್ದು, ಗೈರು ಹಾಜರಾದವರು ಒಂದು ಅವಕಾಶ ಕೊಡುವಂತೆ ಕೇಳಿಕೊಂಡಿದ್ದು ಈಗ ಅದೇ ಪುನರಾವರ್ತನೆಯಾಗಿದೆ. ಈಗ ಹಾಜರಿಲ್ಲದ ಬೇಜವಾಬ್ದಾರಿತನ ಪ್ರದರ್ಶಿಸುತ್ತಿರುವ ಅಬಕಾರಿ, ಅರಣ್ಯ, ಕೆಇಬಿ, ಪಶುಸಂಗೋಪನೆ, ರೇಷ್ಮೆ, ಟಿಎಪಿಸಿಎಂಎಸ್, ವಾಟೆಹೊಳೆ, ಜಲಾನಯನ, ಅಂಚೆ ಕಚೇರಿ, ಗೃಹರಕ್ಷಕ ಹಾಗೂ ಮುಂತಾದ ಇಲಾಖೆ ಅಧಿಕಾರಿಗಳ ವಿರುದ್ಧ ಆಯಾ ಇಲಾಖೆಗಳ ಮೇಲಧಿಕಾರಿಗಳಿಗೆ ಸುತ್ತೋಲೆ ಕಳುಹಿಸಲಾಗುವುದೆಂದರು. ನಂತರ ಸಭೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಒಮ್ಮತದಿಂದ ತೀರ್ಮಾನಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.