ಸಚಿವರು ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಹೋರಾಟ
ಕನ್ನಡಪ್ರಭ ವಾರ್ತೆ, ಹಾಸನ, ಅ.23
ನಾನಾ ಇಲಾಖೆ ಸಚಿವರು ಸಮಸ್ಯೆಗಳಿಗೆ ಸ್ಪಂದಿಸದೇ ಕೇವಲ ಟಿಎ, ಡಿಎ ಪಡೆಯುವುದಕ್ಕೆ ಮಾತ್ರ ಸೀಮಿತವಾದರೆ ಇವರ ವಿರುದ್ಧ ಆಯಾ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ. ರೇವಣ್ಣ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರೋಗ್ಯ ಇಲಾಖೆಯಲ್ಲಿ ಸಾಕಷ್ಟು ಸಮಸ್ಯೆಗಳಿದ್ದರೂ ಸಹ ಸಂಬಂಧಪಟ್ಟ ಸಚಿವರು ಕೇವಲ ಟಿಎ, ಡಿಎ ಪಡೆಯುವ ಸಲುವಾಗಿ ಕಾಟಾಚಾರಕ್ಕೆ ಸಭೆ ನಡೆಸಿ ಜನರ ಕಣ್ಣೊರೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.
ಜಿಲ್ಲೆಯೊಂದರಲ್ಲೇ ಸುಮಾರು 460 ಹುದ್ದೆಗಳು ಖಾಲಿ ಇದೆ. ಈ ಪೈಕಿ 122 ವೈದ್ಯರ ಹುದ್ದೆ ಹಾಗೂ ಉಳಿದಂತೆ ಹುದ್ದೆಗಳು ಖಾಲಿ ಉಳಿದಿದೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಊರಾದ ಪಡುವಲಹಿಪ್ಪೆ ಗ್ರಾಮದಲ್ಲಿಯೂ ಸಹ ವೈದ್ಯರಿಲ್ಲದೆ ಪ್ರಾಥಮಿಕ ಆರೋಗ್ಯ ಕೇಂದ್ರ ಬಳಲುತ್ತಿದ್ದರೂ ಸಹ ಆರೋಗ್ಯ ಸಚಿವರು ಜಿಲ್ಲೆಗೆ ಆಗಮಿಸಿ ಯಾವುದೇ ಸೂಕ್ತ ತೀರ್ಮಾನಗಳನ್ನು ಕೈಗೊಳ್ಳದೆ ಸಭೆಯನ್ನು ನಡೆಸಿದ್ದಾರೆ ಎಂದರು.
ಜೊತೆಗೆ ವೈದ್ಯಕೀಯ ಕಾಲೇಜಿಗೂ ಸಹ ಯಾವುದೇ ರೀತಿಯ ಮೂಲ ಸೌಲಭ್ಯಗಳಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ಪತ್ರಗಳನ್ನು ಬರೆದಿದ್ದರೂ ಸಹ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಇದೇ ರೀತಿ ನಾನಾ ಇಲಾಖೆಗಳ ಸಚಿವರು ಸೂಕ್ತಾಗಿ ಸ್ಪಂದಿಸದಿದ್ದರೆ ಆಯಾ ಇಲಾಖೆಯ ಮುಖ್ಯ ಕಾರ್ಯದರ್ಶಿಗಳ ಮನೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಸರ್ಕಾರದಿಂದ ದ್ವೇಷದ ರಾಜಕೀಯ: ಜಿಲ್ಲೆಯಲ್ಲಿ ಪ್ರತಿಪಕ್ಷದ ಸಂಸದರು ಹಾಗೂ ಶಾಸಕರು ಇದ್ದಾರೆ ಎಂಬ ಕಾರಣಕ್ಕೆ ಸರ್ಕಾರ ಜಿಲ್ಲೆಯನ್ನು ಗಡೆಗಣಿಸುತ್ತಿದ್ದು, ದೇವೇಗೌಡರು ಪ್ರಧಾನಿಯಾಗಿದ್ದಾಗೆ ರೇಲ್ವೆ ಯೋಜನೆಗೆ ಚಾಲನೆ ನೀಡಿದರೂ ಈ ಯೋಜನೆಗೆ ಕೇಂದ್ರ ಸರ್ಕಾರ ತನ್ನ ಪಾಲಿನ ಹಣ ನೀಡಿದರೂ ಸಹ ರಾಜ್ಯ ಸರ್ಕಾರ ತನ್ನ ಪಾಲಿನ ಹಣವನ್ನು ನೀಡದೆ ದ್ವೇಷದ ರಾಜಕಾರಣ ಮಾಡುತ್ತಿದೆ ಎಂದ ಅವರು, ಅಧಿಕಾರಕ್ಕೆ ಬಂದು 5 ತಿಂಗಳು ಪೂರೈಸಿರುವ ಸರ್ಕಾರದ ಸಾಧನೆ ಏನು ಎಂಬುದು ತಿಳಿಸಲಿ ಎಂದು ಅವರು, ಶಿಕ್ಷಣ ಸಚಿವರು ತಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸದೇ ರಾಜ್ಯದ ಜನತೆಗೆ ಅಕ್ಕಿ ಮಾರಿಕೊಂಡು ಔಷಧಿ ಕುಡಿಯುವಂತೆ ಸಲಹೆ ನೀಡುದ್ದಾರೆ ಎಂದು ದೂರಿದರು.
ಯಶಸ್ವಿಯಾಗದು: ಕೆಪಿಸಿಸಿ ಅಧ್ಯಕ್ಷರು ಮಂಗಳವಾರ ಮಾಡಿದಂತಹ ಸಭೆಯು ರಾಹುಕಾಲದಲ್ಲಿ ಮಾಡಿದ್ದರಿಂದ ಅವರು ಕಾರ್ಯತಂತ್ರ ಯಶಸ್ವಿಯಾಗದು ಎಂದ ಅವರು, ಪರಮೇಶ್ವರ್ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಜಕೀಯ ಕಲಿಯಬೇಕಾಗಿಲ್ಲ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

