ಹಾಸನ

ಯುವ ಪೀಳಿಗೆ ಸಮಾಜ ತಿದ್ದಲಿ: ಡಾ. ಚಿದಾನಂದಗೌಡ

Published On :

ಹಾಸನ: ವಿಜ್ಞಾನ ಮತ್ತು ತಂತ್ರಜ್ಞಾನದ ಯುಗದಲ್ಲಿ ಯುವ ಪೀಳಿಗೆಯು ಉತ್ತಮ ಶಿಕ್ಷಣ ಪಡೆದು ಸಮಾಜ ತಿದ್ದುವಂತಾಗಬೇಕು ಎಂದು ಕುವೆಂಪು ವಿವಿ ನಿವೃತ್ತ ಉಪ ಕುಲಪತಿ ಡಾ. ಕೆ. ಚಿದಾನಂದಗೌಡ ತಿಳಿಸಿದ್ದಾರೆ.
ಮಲೆನಾಡು ತಾಂತ್ರಿಕ ಕಾಲೇಜನಲ್ಲಿ ತಾಂತ್ರಿಕ ಶಿಕ್ಷಣದ ಗುಣಮಟ್ಟ ಮತ್ತು ಸುಧಾರಣೆ ಕುರಿತು ಗುರುವಾರ ನಡೆದ ಎರಡು ದಿನಗಳ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಯುವ ಶಿಕ್ಷಕರು ಇರುವಂತಹ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಯುವ ಶಿಕ್ಷಕರು ಸಮಾಜವನ್ನು ಉತ್ತಮ ಪಡಿಸುವಂತಹ ಯುವ ಪೀಳಿಕೆಯನ್ನು ತಯಾರು ಮಾಡಬೇಕು. ಅವರು ತಮ್ಮ ವೃತ್ತಿಯಲ್ಲಿ ಅಪಾರ ಜ್ಞಾನವನ್ನು ಪಡೆದು ಇತರರಿಗೆ ತಿಳಿಸುವ ಮೂಲಕ ಯುವಕರಲ್ಲಿ ಸ್ಪೂರ್ತಿ ತುಂಬಬೇಕು ಎಂದರು.
ರಾಷ್ಟ್ರ ಮತ್ತು ರಾಜ್ಯದ ಅಭಿವೃದ್ಧಿಗಾಗಿ ಸಂಪತ್ತನ್ನು ಹೆಚ್ಚಿಸಲು ವಿಭಿನ್ನತೆಗಳನ್ನು ಸೃಷ್ಟಿಸಬೇಕಾದ ಅಗತ್ಯವಿದೆ. ವಿಜ್ಞಾನ ಮತ್ತು ತಾಂತ್ರಿಕ ಯುಗದಲ್ಲಿ ಅನೇಕ ಅವಕಾಶಗಳಿದ್ದು, ಸಂಪತ್ತನ್ನು ಹೆಚ್ಚಿಸುವಂತಹ ಕಾರ್ಯ ಮಾಡಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕೈಗಾರಿಕಾ ನಿರ್ಮಾಣ ಮತ್ತು ಎಂಜಿನಿಯರ್ ವಿಭಾಗದ ಬಿ.ಕೆ. ಶಿವಲಿಂಗಯ್ಯ, ಎಂಸಿಇ ಕಾಲೇಜು ಪ್ರಾಂಶುಪಾಲ ಎಂ.ವಿ. ಸತ್ಯನಾರಾಯಣ್, ಕಾರ್ಯದರ್ಶಿ ಆರ್.ಟಿ. ದ್ಯಾವೇಗೌಡ, ಆಟೋಮೊಬೈಲ್ ವಿಭಾಗದ ಎ.ಎನ್. ಬಸವರಾಜ್ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.