ಅರಕಲಗೂಡು; ರಾಜ್ಯೋತ್ಸವ ಆಚರಿಸಲು ಪೂರ್ವಭಾವಿ ಸಭೆ
ಅರಕಲಗೂಡು: ಪಟ್ಟಣದಲ್ಲಿ ನ.1ರಂದು ಕನ್ನಡ ರಾಜ್ಯೋತ್ಸವವನ್ನು ತಾಲೂಕು ಆಡಳಿತದ ವತಿಯಿಂದ ಅದ್ಧೂರಿಯಾಗಿ ಆಚರಿಸಲು ಇತ್ತೀಚೆಗೆ ನಡೆದ ಪೂರ್ವಭಾವಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಯಿತು.
ಇಲ್ಲಿನ ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಜಗದೀಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಂಬಂಧ ನಾನಾ ಇಲಾಖೆ ಅಧಿಕಾರಿಗಳ ಜೊತೆ ಸುದೀರ್ಘ ಸಮಾಲೋಚನೆ ನಡೆಸಿ ಚರ್ಚಿಸಲಾಯಿತು.
ವೇದಿಕೆಯಲ್ಲಿ ಅತಿಥಿಗಳಿಗೆ ಹಾರ- ತುರಾಯಿ ಹಾಕುವ ಬದಲು ಕನ್ನಡಕ್ಕೆ ಸಂಬಂಧಿಸಿದ ಪುಸ್ತಕ ಉಚಿತವಾಗಿ ನೀಡುವುದು ಹಾಗೂ ಕನ್ನಡದ ಸೇವೆಯಲ್ಲಿ ತೊಡಗಿದ ವ್ಯಕ್ತಿಗಳನ್ನಲ್ಲದೇ ಕೃಷಿ, ಶಿಕ್ಷಣ, ಕಲೆ, ಕ್ರೀಡೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು.
ತಾಲೂಕು ಪಂಚಾಯ್ತಿ ಕಾರ್ಯ ನಿರ್ವಹಣಾಧಿಕಾರಿ ಶಿವರಾಂ, ಕ್ಷೇತ್ರ ಶಿಕ್ಷಣಾಧಿಕಾರಿ ರೇವಣ್ಣ, ಉಪ ತಹಸೀಲ್ದಾರ್ ರಂಗರಾಜು, ಪಪಂ ಮುಖ್ಯಾಧಿಕಾರಿ ಸುರೇಶ್ ಬಾಬು, ಡಯಟ್ ಉಪನ್ಯಾಸಕ ಶಿವರಾಜ್, ಸಿಡಿಪಿಒ ಮಲ್ಲೇಗೌಡ, ತಾಲೂಕು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ನಾಗರಾಜು, ತಾಲೂಕು ಆರೋಗ್ಯಾಧಿಕಾರಿ ಡಾ. ಸ್ವಾಮಿಗೌಡ, ಪಟ್ಟಣ ಪಂಚಾಯ್ತಿ ಸದಸ್ಯ ವಾಟಾಳ್ ರಮೇಶ್, ತಾಲೂಕು ಕಸಾಪ ಅಧ್ಯಕ್ಷೆ ಸಿ.ಕೆ. ಶೈಲಶ್ರೀ, ಜಿಲ್ಲಾ ಕಸಾಪ ಜಂಟಿ ಕಾರ್ಯದರ್ಶಿ ಅರಕಲಗೂಡು ಜಯಕುಮಾರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

