ಕೋರ್ಟ್ ಆವರಣದಲ್ಲಿ ವಕೀಲರ ಭವನ ನಿರ್ಮಾಣ: ಸಚಿವ ಜಯಚಂದ್ರ ಭರವಸೆ
ಅರಕಲಗೂಡು: ರಾಜ್ಯದಲ್ಲಿ ಎಲ್ಲಾ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳ ನ್ಯಾಯಾಲಯ ಆವರಣದಲ್ಲೇ ವಕೀಲರ ಭವನಗಳನ್ನು ನಿರ್ಮಿಸುವ ಸಲುವಾಗಿ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ಭರವಸೆ ನೀಡಿದರು.
ಇಲ್ಲಿನ ಜೆಎಂಎಫ್ಸಿ ನ್ಯಾಯಾಲಯ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಸಂವಿಧಾನದ ಅಧೀನದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ರಾಜ್ಯಾಂಗಗಳು ಕೆಲಸ ನಿರ್ವಹಿಸುತ್ತಿದ್ದರೂ ನ್ಯಾಯಾಂಗಕ್ಕೆ ತನ್ನದೇ ಆದ ವಿಶೇಷತೆ ಇದೆ.ಈ ಮೂರೂ ವ್ಯವಸ್ಥೆಗಳ ನಡುವೆ ಸಮಾನ ಸಾಮರಸ್ಯದಿಂದ ಕೆಲಸ ನಿರ್ವಹಿಸುವ ಜವಾಬ್ದಾರಿಗಳೂ ಇವೆ.ನ್ಯಾಯಾಂಗ ಇರುವುದು ಕೇವಲ ವ್ಯಾಜ್ಯಗಳ ಇತ್ಯರ್ಥಕ್ಕಾಗಿ ಅಲ್ಲ. ಅಂತಹ ವ್ಯಾಜ್ಯಗಳು ಸಂಭವಿಸದಂತೆ ನೋಡಿಕೊಳ್ಳುವ ಜವಾಬ್ದಾರಿಯೂ ಇದೆ ಎಂದು ಹೇಳಿದರು.
ಜನರು ತಮ್ಮ ವ್ಯಾಜ್ಯಗಳನ್ನು ನ್ಯಾಯಾಲಯದ ಒಳಗೆ ಬಾರದೇ ಬಗೆಹರಿಸಿಕೊಳ್ಳುವಂತಾಗಬೇಕು.ನ್ಯಾಯಾಲಯದ ಅಮೂಲ್ಯ ಸಮಯ ಹಾಳಾಗದಂತೆ ಎಚ್ಚರವಹಿಸುವ ಜವಾಬ್ದಾರಿ ಪ್ರತಿಯೊಬ್ಬರಿಗೂ ಬರಬೇಕು.ಅನಗತ್ಯ ವ್ಯಾಜ್ಯಗಳು ಬಂದಾಗ ನ್ಯಾಯಾಲಯದ ಹೊರಗೇ ಬಗೆಹರಿಸಿಕೊಳ್ಳುವಂತೆ ವಕೀಲರು ಸಲಹೆ ನೀಡುವಂತಾಗಬೇಕು ಎಂದು ಹೇಳಿದ ಅವರು ಜನರಲ್ಲಿ ಸಾಮರಸ್ಯ ವಾತಾವರಣ ನಿರ್ಮಿಸುವಲ್ಲಿ ನ್ಯಾಯಾಲಯಗಳ ಜವಾಬ್ದಾರಿಯೂ ಇದೆ ಎಂದು ಅವರು ಹೇಳಿದರು.
ನ್ಯಾಯಾಂಗಕ್ಕೆ ರಾಜ್ಯದ ಕೊಡುಗೆಯೂ ಮಹತ್ತರವಾದುದಿದೆ. ಕರ್ನಾಟಕದ ಬಾರ್ ಕೌನ್ಸಿಲ್ ಉತ್ತಮವಾಗಿ ಕಾರ್ಯನಿರ್ವಹಿಸಿದ್ದುದರಿಂದ ಸರ್ವೋಚ್ಚ ನ್ಯಾಯಾಲಯಕ್ಕೂ ನ್ಯಾಯಾಧೀಶರನ್ನು ನೀಡಿದ ಕೀರ್ತಿ ನಮ್ಮದಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

