'ಅಗತ್ಯ ಕಾನೂನಿನ ತಿಳಿವಳಿಕೆ ಅಗತ್ಯ'
ಸಕಲೇಶಪುರ: ನಾವು ಎಷ್ಟೇ ಬುದ್ಧಿಜೀವಿಗಳು ಎನಿಸಿಕೊಂಡರೂ ಜೀವನಕ್ಕೆ ಅಗತ್ಯವಾದ ಹಲವು ಕಾನೂನುಗಳ ಬಗ್ಗೆ ತಿಳಿದಿರುವುದು ಅತ್ಯಗತ್ಯ ಎಂದು ಇಲ್ಲಿನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್.ಆರ್.ಲೋಕಪ್ಪ ಅಭಿಪ್ರಾಯಪಟ್ಟರು. ಲಯನ್ಸ ಸಂಸ್ಥೆ, ರೋಟರಿ ಸಂಸ್ಥೆ, ತಾಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಪಟ್ಟಣದ ಲಯನ್ಸ್ ಸೇವಾಮಂದಿರದಲ್ಲಿ ಆಯೋಜಿಸಿದ್ದ ಸಾರ್ವಜನಿಕರಿಗಾಗಿ ಕಾನೂನು ಮಾಹಿತಿ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಕಾನೂನು ಸಲಹಾ ಕೇಂದ್ರಗಳಲ್ಲಿ ಉಚಿತ ಕಾನೂನು ಸಲಹೆಗಾಗಿ ವಕೀಲರು ಸೇವೆ ಸಲ್ಲಿಸುತ್ತಿದ್ದು ಸಾರ್ವಜನಿಕರಿಗೆ ಈ ಸೇವಾ ಸೌಲಭ್ಯವಿದೆ ಎಂದು ಹೇಳಿದರು. ಕಂದಾಯ ದಾಖಲಾತಿಗಳು ಮತ್ತು ಅದರ ಅಗತ್ಯತೆಗಳ ಬಗ್ಗೆ ಡಿ.ವಿ.ಯಶ್ವಂತ್, ಜನನ ಮತ್ತು ಮರಣ ನೋಂದಣಿ ಕಾಯ್ದೆ ಬಗ್ಗೆ ಹಾಗೂ ರಸ್ತೆ ಸುರಕ್ಷತೆಯಲ್ಲಿ ಸಾರ್ವಜನಿಕರ ಪಾತ್ರ ಮತ್ತು ಮೋಟಾರು ವಾಹನ ಕಾಯ್ದೆ ಕುರಿತು ವಕೀಲರಾದ ಯಶ್ವಂತ ಕುಮಾರ್, ಎಂ.ಎಸ್.ಮಲ್ಲೇಶ್ ಹಾಗೂ ಶಿವಪ್ರಕಾಶ್ ಇತರರು ಉಪನ್ಯಾಸ ನೀಡಿದರು. ಕಿರಿಯ ಸಿವಿಲ್ ನ್ಯಾಯಾಧೀಶ ಎಚ್.ಎ.ಶಿಲ್ಪಾ ಅಧ್ಯಕ್ಷತೆ ವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಆರ್.ಎನ್.ಕೃಷ್ಣಮೂರ್ತಿ, ಲಯನ್ಸ್ ಅಧ್ಯಕ್ಷ ಎ.ವಿ.ನರೇಶ್, ರೋಟರಿ ಸಂಸ್ಥೆ ಅಧ್ಯಕ್ಷ ಡಾ.ರವಿಕಿರಣ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

