ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿಗೆ ಭವ್ಯ ಸ್ವಾಗತ
ಚನ್ನರಾಯಪಟ್ಟಣ: ಹೊಂಬುಜ ಮಠದ ಪೀಠಾಧಿಪತಿ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಪ್ರಥಮ ಬಾರಿಗೆ ಶ್ರವಣಬೆಳಗೊಳಕ್ಕೆ ಆಗಮಿಸಿದ ಸಂದರ್ಭದಲ್ಲಿ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.
ಕ್ಷೇತ್ರದಲ್ಲಿ ನಿರ್ಮಿಸಿರುವ ಜಿಕೆಡಿ ಸಮುದಾಯ ಭವನ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಅವರನ್ನು ಶ್ರವಣಬೆಳಗೊಳದ ಜೈನ ಸಮುದಾಯ ಹಾಗೂ ಶ್ರೀ ಮಠದ ವತಿಯಿಂದ ಶ್ರದ್ಧೆ ಗೌರವಗಳಿಂದ ಅವರನ್ನು ಪಲ್ಲಕ್ಕಿ ಉತ್ಸವದಲ್ಲಿ ಶ್ರೀ ಮಠಕ್ಕೆ ಕರೆ ತರಲಾಯಿತು.
ಹೊಂಬುಜ ಪೀಠಾಧ್ಯಕ್ಷರಾಗಿರುವ ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಕ್ಷೇತ್ರದಲ್ಲಿ 12 ವರ್ಷಗಳ ಕಾಲ ವೇದ, ಧಾರ್ಮಿಕ ಹಾಗೂ ಸಾಹಿತ್ಯ ಕ್ಷೇತ್ರದಲ್ಲಿ ಅಭ್ಯಾಸ ಮಾಡಿ ಪೀಠಾಧ್ಯಕ್ಷರಾಗಿರುವ ಹಿನ್ನೆಲೆಯಲ್ಲಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರು ಮಾರ್ಗದರ್ಶನದಂತೆ ಅವರನ್ನು ಪಲ್ಲಕ್ಕಿಯಲ್ಲಿ ಕರೆತರಲಾಯಿತು.
ದೇವೇಂದ್ರ ಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಗೆ ಶ್ರೀಫಲದ ಜತೆಗೆ ಪ್ರಾಕೃತದ 40 ಧವಲತ್ರಯ ಹಾಗೂ 24 ಧವಲೇತರ ಗ್ರಂಥಗಳನ್ನು ಶ್ರೀ ಕ್ಷೇತ್ರದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನೀಡುವ ಮುಖೇನ ಗೌರವಿಸಲಾಯಿತು. ಕಂಬದಹಳ್ಳಿಯ ಕಂಬದಹಳ್ಳಿಯ ಭಾನುಕೀರ್ತಿ ಸ್ವಾಮೀಜಿ, ಶಾಸಕ ಬಾಲಕೃಷ್ಣ, ಜಿಪಂ ಸದಸ್ಯ ನಂಜುಂಡೇಗೌಡ, ರಾಘವೇಂದ್ರ, ತಾರಾಮಣಿ, ದೇವರಾಜೇಗೌಡ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

