ಹಾಸನ

ರಸ್ತೆಗಳ ಅಭಿವೃದ್ಧಿಯಲ್ಲಿ ಸರ್ಕಾರದ ನಿರ್ಲಕ್ಷ್ಯ: ರೇವಣ್ಣ

Published On :

ಹಾಸನ: ಹಾಸನ-ಅರಕಲಗೂಡು ರಸ್ತೆ ಅಭಿವೃದ್ಧಿ ಸೇರಿದಂತೆ ಇತರೆ ರಸ್ತೆ ಕಾಮಗಾರಿಗಳನ್ನು ರಾಜ್ಯ ಸರ್ಕಾರಗಳು ನಿರ್ಲಕ್ಷ್ಯ ತೋರಿವೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ ಆರೋಪಿಸಿದರು.
ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2006ರಲ್ಲಿ ಹಾಸನ-ಅರಕಲಗೂಡು-ರಾಮನಾಥಪುರ-ಬೆಟ್ಟದಪುರ-ಪಿರಿಯಾಪಟ್ಟಣದ ಮೂಲಕ ಕೇರಳಕ್ಕೆ ಮಾರ್ಗ ಕಲ್ಪಿಸುವಂತೆ ರಸ್ತೆ ಕಾಮಗಾರಿಗೆ 240 ಕೋಟಿ ರು.ವೆಚ್ಚದಲ್ಲಿ ಕೆಸಿಎಫ್ 2 ನಲ್ಲಿ ವರ್ಲ್ಡ್ ಬ್ಯಾಂಕ್ ಸಹಕಾರದೊಂದಿಗೆ ಡಿಪಿಆರ್ ಸಿದ್ಧಪಡಿಸಿ, ಇದಕ್ಕಾಗಿ 100 ಕೋಟಿ ರು. ಬಿಡುಗಡೆ ಮಾಡಲಾಗಿತ್ತು. ನಾನು ಅಧಿಕಾರದಿಂದ ಕೆಳಗಿಳಿದ ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅದನ್ನು ಬದಲಾಯಿಸಿತು ಎಂದು ತಿಳಿಸಿದರು. ಲೋಕೋಪಯೋಗಿ ಸಚಿವರು ಹಾಗೂ ಮುಖ್ಯಮಂತ್ರಿಗಳು ಈ ರಸ್ತೆ ಕಾಮಗಾರಿಯನ್ನು ಬೇರೆ ಕಡೆಗೆ ಬದಲಾಯಿಸಲು ಮುಂದಾದರೂ. ಆದರೆ ವರ್ಲ್ಡ್ ಬ್ಯಾಂಕ್ ಅದಕ್ಕೆ ತಡೆ ಹಿಡಿಯಿತು. ಅದೇ ರೀತಿಯ ಸಾಲಿಗ್ರಾಮ-ಕೊಣನೂರು ರಸ್ತೆ, ಕೊಡ್ಲಿಪೇಟೆ ರಸ್ತೆ, ವರನಾಡು-ಹಾನಬಾಳು ರಸ್ತೆ ಸೇರಿದಂತೆ ಇತರೆ ರಸ್ತೆಗಳ ಅಭಿವೃದ್ಧಿಗಾಗಿ 4500 ಕೋಟಿ ರು.ಗಳ ಯೋಜನೆಗೆ ವರ್ಲ್ಡ್ ಬ್ಯಾಂಕ್‌ನಿಂದ ಅನುಮತಿ ಮಾಡಿಸಿದ್ದೆ. ಆದರೆ ಸರ್ಕಾರಗಳು ಅದಕ್ಕೆ ಸರಿಯಾಗಿ ಸ್ಪಂದಿಸಲಿಲ್ಲ ಎಂದು ಹೇಳಿದರು. ಈ ಬಾರಿಯ ಅಧಿವೇಶನದಲ್ಲಿ ಸರ್ಕಾರ ಯಾವುದಕ್ಕೆ ಎಷ್ಟು ಪ್ರಮಾಣದಲ್ಲಿ ಪ್ರಾಧಾನ್ಯತೆ ನೀಡುತ್ತದೆ ಎಂಬುದನ್ನು ನೋಡೋಣ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.